ವಿಧಾನಸೌಧ ಬಳಿ ಆತ್ಮಹತ್ಯೆಗೆ ಯತ್ನಿಸಿದ ರೈತ

7

ವಿಧಾನಸೌಧ ಬಳಿ ಆತ್ಮಹತ್ಯೆಗೆ ಯತ್ನಿಸಿದ ರೈತ

Published:
Updated:

ಬೆಂಗಳೂರು: ವಿಧಾನಸೌಧದ ಪಶ್ಚಿಮ ಪ್ರವೇಶ ದ್ವಾರದಲ್ಲಿ ಶನಿವಾರ ಬೆಳಿಗ್ಗೆ ಸರ್ದಾರ್ ಕಳವಂತ (65) ಎಂಬ ರೈತ ಆತ್ಮಹತ್ಯೆಗೆ ಯತ್ನಿಸಿದ್ದು, ತೀವ್ರ ಅಸ್ವಸ್ಥಗೊಂಡಿರುವ ಅವರನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಸರ್ದಾರ್, ತಾನು ಅನುಭವಿಸುತ್ತಿದ್ದ ಕಷ್ಟವನ್ನು ಮುಖ್ಯಮಂತ್ರಿ ಹಾಗೂ ಅಧಿಕಾರಿಗಳಿಗೆ ಹೇಳಿಕೊಳ್ಳಲು ಬಂದಿದ್ದ. ಆದರೆ, ರಜೆ ಇದ್ದ ಕಾರಣ ವಿಧಾನಸೌಧದಲ್ಲಿ ಯಾರೂ ಇರಲಿಲ್ಲ. ಆ ಬಗ್ಗೆ ಹೇಳಿದ್ದ ಪೊಲೀಸರು, ಆತನನ್ನು ವಿಧಾನಸೌಧದ ಒಳಗೆ ಬಿಟ್ಟಿರಲಿಲ್ಲ. ಅದರಿಂದ ನೊಂದು ಸ್ಥಳದಲ್ಲೇ ಕ್ರಿಮಿನಾಶಕ ಸೇವಿಸಿ ಅವರು ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದರು.

‘ಸರ್ದಾರ್ ನರಳಾಡುತ್ತಿರುವುದನ್ನು ಗಮನಿಸಿ ಹೊಯ್ಸಳ ಗಸ್ತು ವಾಹನದ ಸಿಬ್ಬಂದಿ, ಆಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲಿಸಿದ್ದರು. ಸದ್ಯ ಅವರು ಆರೋಗ್ಯವಾಗಿದ್ದಾರೆ’ ಎಂದು ಪೊಲೀಸರು ತಿಳಿಸಿದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !