ಮಕ್ಕಳೇ ನಿಜವಾದ ದೇಶದ ಆಸ್ತಿ: ಶಿಶು ಅಭಿವೃದ್ಧಿ ಯೋಜನಾಧಿಕಾರಿ ಲತಾ ಅಭಿಮತ

7
ಮಕ್ಕಳ ಹಬ್ಬ ಕಾರ್ಯಕ್ರಮ

ಮಕ್ಕಳೇ ನಿಜವಾದ ದೇಶದ ಆಸ್ತಿ: ಶಿಶು ಅಭಿವೃದ್ಧಿ ಯೋಜನಾಧಿಕಾರಿ ಲತಾ ಅಭಿಮತ

Published:
Updated:
Prajavani

ಚಿಕ್ಕಬಳ್ಳಾಪುರ: ‘ಇಂದಿನ ಮಕ್ಕಳೇ ದೇಶದ ಆಸ್ತಿ. ಹೀಗಾಗಿ ಅವರನ್ನು ಸೃಜನಾತ್ಮಕ ಮತ್ತು ಕ್ರೀಯಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿ ಆ ಮೂಲಕ ಅವರಲ್ಲಿನ ಪ್ರತಿಭೆಯನ್ನು ವೃದ್ಧಿಸಿ ದೇಶದ ಹಿತ ಕಾಪಾಡಲು ಮುಂದಾಗಬೇಕಿದೆ’ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಲತಾ ಹೇಳಿದರು.

ಜಿಲ್ಲಾ ಮತ್ತು ತಾಲ್ಲೂಕು ಬಾಲಭವನ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಹಯೋಗದಲ್ಲಿ ಇತ್ತೀಚೆಗೆ ಗುರುಕುಲ ಆಶ್ರಮದಲ್ಲಿ ಆಯೋಜಿಸಿದ್ದ ಮಕ್ಕಳ ಹಬ್ಬ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ 6 ರಿಂದ 16 ವರ್ಷದ ಒಳಗಿನ ಮಕ್ಕಳಿಗೆ ಪ್ರಾಥಮಿಕ, ಮಾಧ್ಯಮಿಕ ಹಾಗೂ ಪ್ರೌಢಶಾಲಾ ಹೀಗೆ ಮೂರು ಹಂತಗಳಲ್ಲಿ ಚಿತ್ರಕಲೆ, ಕನ್ನಡಗೀತೆ, ವೇಷಭೂಷಣ ಹಾಗೂ ರಂಗೋಲಿ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು.

ಸ್ಪರ್ಧೆಗಳಲ್ಲಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಗಳಿಸಿದ ವಿದ್ಯಾರ್ಥಿಗಳಿಗೆ ನಗದು ಬಹುಮಾನದೊಂದಿಗೆ ಪ್ರಶಂಸನಾ ಪತ್ರಗಳನ್ನು ಹಾಗೂ ಸ್ಪರ್ಧೆಗಳಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೂ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.

ಸರ್ಕಾರಿ ಬಾಲಕಿಯರ ಬಾಲ ಮಂದಿರದ ಅಧೀಕ್ಷಕ ನಾಗಭೂಷಣಾಚಾರಿ, ಗುರುಕುಲಾಶ್ರಮದ ನಿಲಯ ಪಾಲಕರಾದ ನಾರಾಯಣಸ್ವಾಮಿ, ಮಂಜುನಾಥ್, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಸಿಬ್ಬಂದಿ ಹಾಗೂ ಶಿಕ್ಷಕರಾದ ಶಶಿಕಲಾ, ಪ್ರಮೀಳಾ ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !