ಕಾರ್ಮಿಕ ಸನ್ಮಾನ; ಅರ್ಜಿ ಆಹ್ವಾನ
ಬೆಂಗಳೂರು: ಅಸಂಘಟಿತ ಕಾರ್ಮಿಕರನ್ನು ಗುರುತಿಸುವ ಉದ್ದೇಶದಿಂದ ಮಾರ್ಚ್ 1ರಂದು ಎಲ್ಲ ಜಿಲ್ಲಾ ಕೇಂದ್ರದಲ್ಲಿ ಕಾರ್ಮಿಕರ ಸನ್ಮಾನ ಕಾರ್ಯಕ್ರಮ ನಡೆಯಲಿದೆ.
ಅಸಂಘಟಿತ ವಲಯದಲ್ಲಿ ವಿಶೇಷ ಸಾಧನೆ ಮಾಡಿದ ಕಾರ್ಮಿಕರಿಗೆ ಕಾರ್ಮಿಕರ ‘ಸಮ್ಮಾನ ಪ್ರಶಸ್ತಿ’ ನೀಡಲಾಗುವುದು. ಅದಕ್ಕಾಗಿ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಲ್ಲಿ ನೋಂದಾಯಿಸಿಕೊಂಡ ಕ್ಷೌರಿಕರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಮಂಡಕ್ಕಿ ಬಟ್ಟಿ ಕಾರ್ಮಿಕರು, ಹಮಾಲಿಗಳು, ಚಿಂದಿ ಆಯುವವರು, ಮನೆ ಕೆಲಸಗಾರರು, ದರ್ಜಿಗಳು, ಚಾಲಕರು ಹೀಗೆ ಅಸಂಘಟಿತ ವಲಯದ ಕಾರ್ಮಿಕರು ಅರ್ಜಿ ಸಲ್ಲಿಸಬಹುದು.
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ನಗರದ ಕಾರ್ಮಿಕ ಭವನದಲ್ಲಿನ ಕಾರ್ಮಿಕ ಅಧಿಕಾರಿ ಕಚೇರಿ (ಉಪವಿಭಾಗ 5) ಇಲ್ಲಿಗೆ ಸಂಪರ್ಕಿಸಬಹುದು. ಅಥವಾ ದೊಡ್ಡಬಳ್ಳಾಪುರ, ದೇವನಹಳ್ಳಿ, ನೆಲಮಂಗಲ, ಹೊಸಕೋಟೆಯ ಕಾರ್ಮಿಕ ನಿರೀಕ್ಷಕರ ಕಚೇರಿಯಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ ಫೆ. 18ರ ಒಳಗೆ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ. ಮಾಹಿತಿಗೆ http://www.labour.kar.nic.in ಜಾಲತಾಣ ನೋಡಬಹುದು.
ಬರಹ ಇಷ್ಟವಾಯಿತೆ?
0
0
0
0
0
0 comments
View All