ಯಡಿಯೂರಪ್ಪ ವಿರುದ್ಧ ಕ್ರಮಕ್ಕೆ ಆಗ್ರಹ

7

ಯಡಿಯೂರಪ್ಪ ವಿರುದ್ಧ ಕ್ರಮಕ್ಕೆ ಆಗ್ರಹ

Published:
Updated:

ಬೆಂಗಳೂರು: ‘ರಾಜ್ಯದ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಲು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಪ್ರತಿಪಕ್ಷ
ಗಳ ಶಾಸಕರಿಗೆ ಕೋಟಿಗಟ್ಟಲೇ ಹಣದ ಆಮಿಷವೊಡ್ಡಿದ್ದಾರೆ. ಆ ಬಗ್ಗೆ ತನಿಖೆ ಕೈಗೊಂಡು ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ’ ಎಂದು ಬೆಂಗಳೂರು ನಗರ ಯುವ ಕಾಂಗ್ರೆಸ್‌ನ ಬಾಣಸವಾಡಿ ಘಟಕದ ಕಾರ್ಯಕರ್ತರು, ಹೆಚ್ಚುವರಿ ಪೊಲೀಸ್ ಕಮಿಷನರ್ (ಅಪರಾಧ) ಅಲೋಕ್‌ಕುಮಾರ್ ಅವರಿಗೆ ಮಂಗಳವಾರ ದೂರು ನೀಡಿದ್ದಾರೆ.

ಇನ್‌ಫೆಂಟ್ರಿ  ರಸ್ತೆಯಲ್ಲಿರುವ ಅಲೋಕ್‌ಕುಮಾರ್ ಅವರ ಕಚೇರಿಗೆ ಬಂದಿದ್ದ ಕಾರ್ಯಕರ್ತರ ನಿಯೋಗ, ‘ಯಡಿಯೂರಪ್ಪ ಹಣದ ಆಮಿಷ ಒಡ್ಡಿದ್ದಕ್ಕೆ ಆಡಿಯೊ ಪುರಾವೆ ಇದೆ. ಅದನ್ನು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಳ್ಳಿ’ ಎಂದು ಒತ್ತಾಯಿಸಿದರು.

‘ಸಂವಿಧಾನಾತ್ಮಕವಾಗಿ ರಚನೆಯಾಗಿರುವ ಸರ್ಕಾರವನ್ನು ಅಸ್ಥಿರಗೊಳಿಸಲು ಯಡಿಯೂರಪ್ಪ ಯತ್ನಿಸುತ್ತಿದ್ದಾರೆ. ಹಣದ ಮೂಲ ಹಾಗೂ ಆಡಿಯೊದ ಸತ್ಯಾಸತ್ಯತೆ ಬಯಲಾಗಬೇಕಾಗಿದೆ’ ಎಂದು ಹೇಳಿದರು.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !