ಮೇರಾ ಪರಿವಾರ್‌–ಬಿಜೆಪಿ ಪರಿವಾರ್‌ಗೆ ಚಾಲನೆ

7

ಮೇರಾ ಪರಿವಾರ್‌–ಬಿಜೆಪಿ ಪರಿವಾರ್‌ಗೆ ಚಾಲನೆ

Published:
Updated:
Prajavani

ಬೆಂಗಳೂರು: ಲೋಕಸಭಾ ಚುನಾವಣೆಗೆ ಪೂರ್ವಭಾವಿಯಾಗಿ ‘ಮೇರಾ ಪರಿವಾರ್‌–ಬಿಜೆಪಿ ಪರಿವಾರ್‌’ ಅಭಿಯಾನಕ್ಕೆ ರಾಜ್ಯದಲ್ಲಿ ಮಂಗಳವಾರ ಚಾಲನೆ ನೀಡಲಾಯಿತು. ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಪಕ್ಷದ ಕಚೇರಿ ಹಾಗೂ ಮನೆಗಳ ಮೇಲೆ ಬಿಜೆಪಿ ಧ್ವಜಗಳನ್ನು ಹಾರಿಸಿದರು.

ನಗರದ ಡಾಲರ್ಸ್‌ ಕಾಲೊನಿಯಲ್ಲಿರುವ ತಮ್ಮ ನಿವಾಸದಲ್ಲಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಧ್ವಜಾರೋಹಣ ನೆರವೇರಿಸಿದರು. ಶಾಸಕರಾದ ಗೋವಿಂದ ಕಾರಜೋಳ, ವೈ.ಎ.ನಾರಾಯಣಸ್ವಾಮಿ, ತೇಜಸ್ವಿನಿ ಗೌಡ, ಯುವಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಇದ್ದರು. ಪಕ್ಷದ ಕಚೇರಿಯಲ್ಲಿ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌ ಧ್ವಜಾರೋಹಣ ನೆರವೇರಿಸಿದರು. ಧ್ವಜ ಹಾರಿಸಿದ ನಂತರ ಕಾರ್ಯಕರ್ತರು ಮತ್ತು ನಾಯಕರು #MeraparivarBhajapaParivar ಟ್ವಿಟರ್ ಹ್ಯಾಷ್ ಟ್ಯಾಗ್ನಲ್ಲಿ ಫೋಟೋ/ವೀಡಿಯೊ ಹಂಚಿಕೊಂಡರು.

‘ರಾಜ್ಯದಲ್ಲಿ 12 ಲಕ್ಷ ಕಾರ್ಯಕರ್ತರು ಇದ್ದಾರೆ. ಕಳೆದ ವರ್ಷ ಮಿಸ್ಡ್‌ ಕಾಲ್‌ ಅಭಿಯಾನದಲ್ಲಿ 82 ಲಕ್ಷ ಮಂದಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದರು. ಈ ಪೈಕಿ, ಸುಮಾರು 62 ಲಕ್ಷ ಜನರ ವಿಳಾಸ ಸಿಕ್ಕಿದೆ. ಸುಮಾರು 75 ಲಕ್ಷ ಮನೆಗಳ ಮೇಲೆ ಪಕ್ಷದ ಧ್ವಜ ಹಾರಿಸುವ ಗುರಿಯೊಂದಿಗೆ ಈ ಅಭಿಯಾನ ಆರಂಭಿಸಲಾಗಿದೆ’ ಎಂದು ಪಕ್ಷದ ನಾಯಕರೊಬ್ಬರು ಹೇಳಿದರು.

 

ಬರಹ ಇಷ್ಟವಾಯಿತೆ?

 • 1

  Happy
 • 1

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !