ಪ್ರೇಮಿಗಳ ದಿನ: ಭದ್ರತೆಗೆ ಸಾವಿರ ಪೊಲೀಸ್‌

7

ಪ್ರೇಮಿಗಳ ದಿನ: ಭದ್ರತೆಗೆ ಸಾವಿರ ಪೊಲೀಸ್‌

Published:
Updated:

ಮಂಗಳೂರು: ನಗರದಲ್ಲಿ ಗುರುವಾರ ಪ್ರೇಮಿಗಳ ದಿನಾಚರಣೆ ಸಮಯದಲ್ಲಿ ಅಹಿತಕರ ಘಟನೆ ನಡೆಯದಂತೆ ತಡೆಯಲು ಇಬ್ಬರು ಡಿಸಿಪಿಗಳು, ಸಶಸ್ತ್ರ ಮೀಸಲು ಪಡೆ ಸೇರಿದಂತೆ ಒಂದು ಸಾವಿರಕ್ಕೂ ಹೆಚ್ಚು ಪೊಲೀಸರನ್ನು ಬಂದೋಬಸ್ತ್‌ಗೆ ನಿಯೋಜಿಸಲಾಗಿದೆ.

ನಾಲ್ವರು ಎಸಿಪಿಗಳು, 16 ಇನ್‌ಸ್ಪೆಕ್ಟರ್‌ಗಳು, 16 ಸಬ್‌ ಇನ್‌ಸ್ಪೆಕ್ಟರ್‌ಗಳು, 450 ಕಾನ್‌ಸ್ಟೆಬಲ್‌ಗಳು, ರಾಜ್ಯ ಮೀಸಲು ಪೊಲೀಸ್‌ ಪಡೆಯ ಎರಡು ಹಾಗೂ ನಗರ ಸಶಸ್ತ್ರ ಮೀಸಲು ಪೊಲೀಸ್‌ ಪಡೆಯ ಆರು ತುಕಡಿಗಳನ್ನು ಭದ್ರತಾ ಕಾರ್ಯಕ್ಕೆ ನಿಯತೋಜಿಸಲಾಗಿದೆ.

‘ಪ್ರೇಮಿಗಳ ದಿನದ ಆಚರಣೆಯಲ್ಲಿ ಯಾವುದೇ ಅಹಿತಕರ ಘಟನೆಗೆ ಅವಕಾಶ ನೀಡದಂತೆ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಒಂದು ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಕಾನೂನಿಗೆ ವಿರುದ್ಧವಾಗಿ ನಡೆದುಕೊಳ್ಳುವವರ ವಿರುದ್ಧ ಕಠಿಣವಾದ ಕ್ರಮಗಳನ್ನು ಜರುಗಿಸಲಾಗುವುದು’ ಎಂದು ನಗರ ಪೊಲೀಸ್ ಕಮಿಷನರ್‌ ಟಿ.ಆರ್‌.ಸುರೇಶ್‌ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !