ಈ ಬಾರಿ ರಾಜ್ಯದಲ್ಲಿ 20 ಸ್ಥಾನಗಳಲ್ಲಿ ಗೆಲುವು: ಕೆ.ಎಸ್.ಈಶ್ವರಪ್ಪ ವಿಶ್ವಾಸ

ಸೋಮವಾರ, ಮೇ 27, 2019
33 °C
ಲೋಕಸಭಾ ಚುನಾವಣೆಗೆ ತಯಾರಿ: ಬಾದಾಮಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಹೇಳಿಕೆ

ಈ ಬಾರಿ ರಾಜ್ಯದಲ್ಲಿ 20 ಸ್ಥಾನಗಳಲ್ಲಿ ಗೆಲುವು: ಕೆ.ಎಸ್.ಈಶ್ವರಪ್ಪ ವಿಶ್ವಾಸ

Published:
Updated:
Prajavani

ಬಾದಾಮಿ: ‘ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ ಕೇವಲ ಎಂಟು ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಲಿದೆ ಎಂದು ಕಾಂಗ್ರೆಸ್ ಮುಖಂಡರು ಭವಿಷ್ಯ ನುಡಿದಿದ್ದರು. ಆದರೆ ನಾವು (ಬಿಜೆಪಿ) 17 ಸ್ಥಾನಗಳನ್ನು ಗೆದ್ದಿದ್ದೆವು. ಈ ಬಾರಿ 20 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದೇವೆ’ ಎಂದು ಶಾಸಕ ಕೆ.ಎಸ್. ಈಶ್ವರಪ್ಪ ಹೇಳಿದರು.

ಇಲ್ಲಿನ ಅಕ್ಕಮಹಾದೇವಿ ಅನುಭಾವ ಮಂಟಪದಲ್ಲಿ ಸೋಮವಾರ ಬಾಗಲಕೋಟೆ ಲೋಕಸಭಾ ಕ್ಷೇತ್ರದ ಬಾದಾಮಿ ಮತಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

‘ದೇಶ ರಕ್ಷಣೆಗೆ ಪ್ರಧಾನಿ ನರೆಂದ್ರ ಮೋದಿ ಬದ್ಧರಾಗಿದ್ದಾರೆ. ದೇಶದ ರಕ್ಷಣೆಗಾಗಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲು ಕಾರ್ಯಕರ್ತರು ಪಣ ತೊಡಬೇಕು. ಬಾಗಲಕೋಟೆ ಲೋಕಸಭಾ ಕ್ಚೇತ್ರದಲ್ಲಿ ಮೂರು ಬಾರಿ ಬಿಜೆಪಿ ಗೆಲ್ಲಿಸಿದ್ದೀರಿ ಈ ಬಾರಿಯೂ ಬಿಜೆಪಿ ಗೆಲ್ಲಿಸಿ’ ಎಂದು ಮನವಿ ಮಾಡಿದರು.

‘ಭಾರತೀಯ ಸೈನಿಕರ ಮೇಲೆ ಉಗ್ರರ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಭಯೋತ್ಪಾದಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಅನೇಕ ಮುಸ್ಲಿಮ್ ರಾಷ್ಟ್ರಗಳು ಮತ್ತು ಅಮೆರಿಕ ಸೇರಿದಂತೆ ಅನೇಕ ರಾಷ್ಟ್ರಗಳು ಪ್ರಧಾನಿ ನರೇಂದ್ರ ಮೋದಿ ಪರ ನಿಂತಿದ್ದಾರೆ. ಉಗ್ರರನ್ನು ಸದೆಬಡಿಯಲು ಸಾಧ್ಯವಿರುವುದು ವಿಶ್ವದಲ್ಲಿಯೇ ಗಂಡುಗಲಿ ನರೇಂದ್ರ ಮೋದಿ ಒಬ್ಬರಿಗೆ ಮಾತ್ರ’ ಎಂದು ಈಶ್ವರಪ್ಪ ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮಹಾಂತೇಶ ಮಮದಾಪುರ, ಈ ಬಾರಿಯೂ ಪಿ.ಸಿ. ಗದ್ದಿಗೌಡರ ಅವರನ್ನು ಕಾರ್ಯಕರ್ತರು ಗೆಲ್ಲಿಸಬೇಕು ಎಂದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದು ಸವದಿ, ಸಂಸದ ಪಿ.ಸಿ. ಗದ್ದಿಗೌಡರ, ಶಾಸಕರಾದ ವೀರಣ್ಣ ಚರಂತಿಮಠ, ಮುರುಗೇಶ ನಿರಾಣಿ, ಸಿ.ಸಿ. ಪಾಟೀಲ, ಮಾಜಿ ಶಾಸಕರಾದ ಎಂ.ಕೆ. ಪಟ್ಟಣಶೆಟ್ಟಿ, ಶ್ರೀಕಾಂತ ಕುಲಕರ್ಣಿ, ರಾಜಶೇಖರ್ ಶೀಲವಂತರ, ನಾರಾಯಣಸಾ ಭಾಂಡಗೆ, ಪಕ್ಷದ ಮುಖಂಡರಾದ ಪ್ರಕಾಶ ತಪಶೆಟ್ಟಿ, ಬಿ.ಪಿ. ಹಳ್ಳೂರ, ರಾಜಶೇಖರ್ ರೇವಣಕರ, ಎಸ್.ಟಿ. ಪಾಟೀಲ ಇದ್ದರು.

ಲೋಕಸಭೆ ಚುನಾವಣೆಗೆ ಪಕ್ಷದ ಸಿದ್ಧತೆ ಬಗ್ಗೆ ಕಾರ್ಯಕರ್ತರೊಂದಿಗೆ ಈಶ್ವರಪ್ಪ ಸಮಾಲೋಚನೆ ಕೈಗೊಂಡರು. ಮತಕ್ಷೇತ್ರದ ಮುಖಂಡರು ಮತ್ತು ಕಾರ್ಯಕರ್ತರು ಇದ್ದರು.

ಬರಹ ಇಷ್ಟವಾಯಿತೆ?

 • 2

  Happy
 • 3

  Amused
 • 1

  Sad
 • 0

  Frustrated
 • 1

  Angry

Comments:

0 comments

Write the first review for this !