ಉಗ್ರರ ದಾಳಿ ಬಂಡವಾಳ ಮಾಡಿಕೊಂಡ ಬಿಜೆಪಿ

ಸೋಮವಾರ, ಮೇ 20, 2019
33 °C
ಚಿಕ್ಕಬಳ್ಳಾಪುರದಲ್ಲಿ ಸಂಸದ ವೀರಪ್ಪ ಮೊಯಿಲಿ ಆರೋಪ

ಉಗ್ರರ ದಾಳಿ ಬಂಡವಾಳ ಮಾಡಿಕೊಂಡ ಬಿಜೆಪಿ

Published:
Updated:
Prajavani

ಚಿಕ್ಕಬಳ್ಳಾಪುರ: ‘ಕೇಂದ್ರ ಸರ್ಕಾರ ಕಳೆದ ಐದು ವರ್ಷಗಳಲ್ಲಿ ಯಾವುದೇ ಸಾಧನೆ ಮಾಡಲಿಲ್ಲ. ಆದ್ದರಿಂದ ಇತ್ತೀಚೆಗೆ ಉಗ್ರರು ದಾಳಿ ನಡೆಸಿ 40 ಯೋಧರನ್ನು ಕೊಂದಿರುವ ಘಟನೆಯನ್ನು ರಾಜಕೀಯ ಬಂಡವಾಳ ಮಾಡಿಕೊಳ್ಳುವ ಹೀನ ಸ್ಥಿತಿಗೆ ಈಗಿನ ಸರ್ಕಾರ ಬಂದಿದೆ’ ಎಂದು ಸಂಸದ ವೀರಪ್ಪ ಮೊಯಿಲಿ ಆರೋಪಿಸಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಜೆಪಿಯವರಿಗೆ ರಾಷ್ಟ್ರೀಯ ಧೋರಣೆ ಇಲ್ಲ. ಅವರಿಗೆ ಬರೀ ಮತೀಯ ಧೋರಣೆ ಮಾತ್ರ ಇದೆ. ಅದನ್ನೇ ಮುಂದೆ ಇಟ್ಟುಕೊಂಡು ದೇಶ ಒಡೆಯುವ ಕೆಲಸ ಮಾಡುತ್ತಿದ್ದಾರೆ ವಿನಾ ಒಗ್ಗೂಡಿಸುವ ಕೆಲಸ ಮಾಡುತ್ತಿಲ್ಲ. ಸಮಾಜ ಸಮನ್ವಯದಿಂದ ಬದುಕುವುದು ಅವರಿಗೆ ಬೇಕಾಗಿಲ್ಲ’ ಎಂದು ಹೇಳಿದರು.

‘ಲೋಕಸಭೆ ಚುನಾವಣೆ ಬಳಿಕ ಸಮ್ಮಿಶ್ರ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿಯವರು ಜನರಿಗೆ ಆಸೆ ತೋರಿಸಿ ವಂಚಿಸುವುದು ಅನೈತಿಕ ವಿಚಾರ. ರಾಷ್ಟ್ರಮಟ್ಟದಲ್ಲಿ ನರೇಂದ್ರ ಮೋದಿ ಹೊರಟು ಹೋಗುತ್ತಾರೆ. ಎಲ್ಲ ವಿರೋಧ ಪಕ್ಷಗಳು ಒಗ್ಗಟ್ಟಾಗಿ ಎನ್‌ಡಿಎ ಸೋಲಿಸಬೇಕು ಎನ್ನುತ್ತಿದ್ದಾರೆ. ರಾಹುಲ್‌ ಗಾಂಧಿ ಅವರು ಪ್ರಧಾನಿಯಾಗುವ ಭಯ ಅವರಿಗೆ ಕಾಡುತ್ತಿದೆ. ಅದರಿಂದಾಗಿ ಆತಂಕದಿಂದ ತತ್ತರಿಸಿ ಹತಾಶೆ ಹೇಳಿಕೆ ನೀಡುತ್ತಿದ್ದಾರೆ’ ತಿಳಿಸಿದರು.

‘ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ವಿಚಾರವಾಗಿ ಜೆಡಿಎಸ್‌, ಕಾಂಗ್ರೆಸ್‌ ಪಕ್ಷಗಳ ನಡುವೆ ಯಾವುದೇ ಗೊಂದಲವಿಲ್ಲ. ಸಮನ್ವಯದಿಂದ ಸೀಟು ಹಂಚಿಕೆ ಮಾಡಿಕೊಳ್ಳುತ್ತೇವೆ. ಲೋಕಸಭೆಯ ಚುನಾವಣೆಯಲ್ಲಿ ನಾವು 20ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದ್ದೇವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 1

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !