ಫೆ.26 ಬೆಂಗಳೂರು ವಿಭಾಗ ಮಟ್ಟದ ಸಮಾವೇಶ

ಭಾನುವಾರ, ಮೇ 26, 2019
26 °C
ದಲಿತ ಸಂಘರ್ಷ ಸಮಿತಿ ವತಿಯಿಂದ ‘ಸಂವಿಧಾನ ಉಳಿಸಿ, ಮನುವಾದ ತೊಲಗಿಸಿ’ ಎಂಬ ಧ್ಯೇಯ ವಾಕ್ಯದೊಂದಿಗೆ ಕಾರ್ಯಕ್ರಮ

ಫೆ.26 ಬೆಂಗಳೂರು ವಿಭಾಗ ಮಟ್ಟದ ಸಮಾವೇಶ

Published:
Updated:

ಚಿಕ್ಕಬಳ್ಳಾಪುರ: ‘ದಲಿತ ಸಂಘರ್ಷ ಸಮಿತಿ ವತಿಯಿಂದ ಫೆ.26 ರಂದು ಸಿಎಸ್ಐ ಮೈದಾನದಲ್ಲಿ ‘ಸಂವಿಧಾನ ಉಳಿಸಿ, ಮನುವಾದ ತೊಲಗಿಸಿ’ ಎಂಬ ಧ್ಯೇಯ ವಾಕ್ಯದೊಂದಿಗೆ ಬೆಂಗಳೂರು ವಿಭಾಗ ಮಟ್ಟದ ಸಮಾವೇಶ ಹಮ್ಮಿಕೊಳ್ಳಲಾಗಿದೆ’ ಎಂದು ದಲಿತ ಸಂಘರ್ಷ ಸಮಿತಿಯ ರಾಜ್ಯ ಘಟಕದ ಸಂಚಾಲಕ ವಿಜಯ ನರಸಿಂಹ ತಿಳಿಸಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರಧಾನಿ ನರೇಂದ್ರ ಮೋದಿ ಅವರು ದಲಿತರ ಬಗ್ಗೆ ಬಹಳಷ್ಟು ಮಾತನಾಡುತ್ತ, ಅಂಬೇಡ್ಕರ್ ಅವರ ಪ್ರತಿಮೆ ಎದುರು ಕೈಜೋಡಿಸಿ ಸಾಷ್ಟಾಂಗ ನಮಸ್ಕಾರ ಮಾಡುತ್ತಾರೆ. ಇನ್ನೊಂದೆಡೆ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಅಂತಹವರು ಸಂವಿಧಾನ ಬದಲಾವಣೆ ಮಾಡುವುದಕ್ಕಾಗಿಯೇ ನಾವು ಅಧಿಕಾರಕ್ಕೆ ಬಂದಿರುವು ಎಂದು ಹೇಳುತ್ತಾರೆ’ ಎಂದು ಹೇಳಿದರು.

‘ದಲಿತ ವಿದ್ಯಾರ್ಥಿ ರೋಹಿತ್ ವೇಮುಲ ಹತ್ಯೆಯಾದಾಗ, ಗುಜರಾತ್ ಮತ್ತು ಉತ್ತರ ಪ್ರದೇಶದಲ್ಲಿ ದಲಿತರ ಮೇಲೆ ಹಲ್ಲೆಯಾದಾಗ ಕೇಂದ್ರ ಸರ್ಕಾರ ಏನು ಮಾಡಿತು? ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ದಲಿತರ ಮೇಲೆ ಮತ್ತು ಅಲ್ಪಸಂಖ್ಯಾತರ ಮೇಲೆ ದಾಳಿಗಳು ಹೆಚ್ಚಾಗಿವೆ. ಅವರು ಈಗ ಸಂವಿಧಾನದ ಮೇಲೆ ದಾಳಿ ಮಾಡುತ್ತಿದ್ದಾರೆ. ಆದ್ದರಿಂದ ನಾವೆಲ್ಲರೂ ಸಂವಿಧಾನ ಉಳಿಸುವ ಕೆಲಸ ಮಾಡಬೇಕಾಗಿದೆ’ ಎಂದರು.

ರಾಜ್ಯ ದಲಿತ ವಿದ್ಯಾರ್ಥಿ ಒಕ್ಕೂಟದ ರಾಜ್ಯ ಸಂಚಾಲಕ ಚಾಮರಾಜಪೇಟೆ ಶ್ರೀಧರ್, ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕ ಜಿಲ್ಲಾ ಸಂಚಾಲಕರಾದ ಕೆ.ವಿ.ವೆಂಕಟೇಶ್, ತಿಪ್ಪೇನಹಳ್ಳಿ ನಾರಾಯಣ, ವಿ.ಅಮರ್, ಗೊರಮೊಡುಗು ನಾರಾಯಣಸ್ವಾಮಿ, ತಾಲ್ಲೂಕು ಸಂಚಾಲಕ ಹನುಮಾನ್ ಜೋಶ್, ಸಂಘಟನಾ ಸಂಚಾಲಕ ಕಣಿತಹಳ್ಳಿ ಗಂಗಾಧರ್, ಮುಖಂಡರಾದ ಬಾಲಕುಂಟಹಳ್ಳಿ ನಾಗರಾಜ್, ಪ್ರಭಾಕರ್ ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !