ಮದ್ದೂರಿನಲ್ಲಿ ಪಾಸ್‌ಪೋರ್ಟ್‌ ಸೇವಾ ಕೇಂದ್ರ: ಅಸಮಾಧಾನ

ಬುಧವಾರ, ಮಾರ್ಚ್ 20, 2019
31 °C

ಮದ್ದೂರಿನಲ್ಲಿ ಪಾಸ್‌ಪೋರ್ಟ್‌ ಸೇವಾ ಕೇಂದ್ರ: ಅಸಮಾಧಾನ

Published:
Updated:
Prajavani

ಮಂಡ್ಯ: ಜಿಲ್ಲೆಗೆ ಮಂಜೂರಾಗಿರುವ ಪಾಸ್‌ಪೋರ್ಟ್‌ ಸೇವಾ ಕೇಂದ್ರವನ್ನು ತಾಲ್ಲೂಕು ಕೇಂದ್ರ ಮದ್ದೂರಿನಲ್ಲಿ ಸ್ಥಾಪನೆಯಾಗಿರುವುದಕ್ಕೆ ವಿರೋಧ ವ್ಯಕ್ತವಾಗಿದೆ.

ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಅವರ ಒತ್ತಡದಿಂದ ಮದ್ದೂರಿನಲ್ಲಿ ಸ್ಥಾಪನೆ ಮಾಡಬೇಕಾಯಿತು ಎಂದು ಜೆಡಿಎಸ್‌ ಸಂಸದ ಎಲ್‌.ಆರ್‌.ಶಿವರಾಮೇಗೌಡ ಅಸಮಾಧಾನ ಹೊರಹಾಕಿದ್ದಾರೆ.

ಮದ್ದೂರು ಪಟ್ಟಣದ ಅಂಚೆ ಕಚೇರಿಯಲ್ಲಿ ಎಲ್‌.ಆರ್‌.ಶಿವರಾಮೇಗೌಡ ಗುರುವಾರ ಸೇವಾ ಕೇಂದ್ರ ಉದ್ಘಾಟಿಸಿದರು. ತಕ್ಷಣ ಮಂಡ್ಯಕ್ಕೆ ಬಂದ ಅವರು, ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಅವರಿಗೆ ಹೆದರಿ ಮದ್ದೂರಿನಲ್ಲಿ ಕೇಂದ್ರ ಸ್ಥಾಪನೆ ಮಾಡಬೇಕಾಯಿತು ಎಂದು ಹೇಳಿದರು.

‘ಮಂಡ್ಯದಲ್ಲಿ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಮಾಡಬೇಕು ಎಂಬುದು ನನ್ನ ಕನಸಾಗಿತ್ತು. ಕೇಂದ್ರ ಸಚಿವರಾದ ಸುಷ್ಮಾ ಸ್ವರಾಜ್‌, ಮನೋಜ್‌ ಸಿನ್ಹಾ ಅವರನ್ನು ಭೇಟಿಯಾಗಿ ಕೇಂದ್ರ ಮಂಜೂರು ಮಾಡಿಸಿದೆ. ಆದರೆ, ಅಧಿಕಾರಿಗಳ ಕುತಂತ್ರದಿಂದ ಜಿಲ್ಲಾ ಕೇಂದ್ರ ಬಿಟ್ಟು ಮದ್ದೂರಿನಲ್ಲಿ ತೆರೆಯುವ ನಿರ್ಧಾರ ಕೈಗೊಳ್ಳಲಾಗಿದೆ. ಸಚಿವರಾದ ಡಿ.ಸಿ.ತಮ್ಮಣ್ಣ ಅವರು ಮದ್ದೂರಿನಲ್ಲೇ ತೆರೆಯುವಂತೆ ಒತ್ತಾಯಿಸಿ ನನ್ನ ವಿರುದ್ಧ ಉಗ್ರ ರೂಪ ತೋರಿಸಿದರು. ಅವರನ್ನು ಎದುರು ಹಾಕಿಕೊಳ್ಳಬಾರದು ಎಂಬ ಕಾರಣಕ್ಕೆ ಒಪ್ಪಿಗೆ ಸೂಚಿಸಬೇಕಾಯಿತು. ಮಂಡ್ಯ ಬಿಟ್ಟು ಬೇರೆಡೆ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಗೊಂಡಿದ್ದು ನನಗೆ ತೀವ್ರ ಮುಜುಗರವಾಗಿದೆ. ನನ್ನ ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು.

ಜನರಿಂದಲೂ ವಿರೋಧ: ರಾಜ್ಯದಲ್ಲೇ ಮೊದಲ ಬಾರಿಗೆ ತಾಲ್ಲೂಕು ಕೇಂದ್ರದಲ್ಲಿ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭವಾಗಿದೆ. ಆದರೆ, ರಾಜಕೀಯ ಪ್ರಭಾವ ಬಳಸಿ ಮದ್ದೂರು ಪಟ್ಟಣದಲ್ಲಿ ಕೇಂದ್ರ ಸ್ಥಾಪನೆ ಮಾಡಿಸಿಕೊಳ್ಳಲಾಗಿದೆ ಎಂದು ಸಾರ್ವಜನಿಕರೂ ದೂರಿದ್ದಾರೆ. ಕೆ.ಆರ್‌.ಪೇಟೆ, ನಾಗಮಂಗಲ ಭಾಗದ ಜನರಿಗೆ ಮದ್ದೂರು ದೂರವಾಗುತ್ತದೆ. ಮಂಡ್ಯದಲ್ಲಿ ಇದ್ದರೆ ಎಲ್ಲಾ ತಾಲ್ಲೂಕಿನ ಜನರಿಗೂ ಅನುಕೂಲವಾಗುತ್ತಿತ್ತು.

ಎಚ್‌.ಡಿ.ದೇವೇಗೌಡರ ಬೀಗರೂ ಆದ ತಮ್ಮಣ್ಣ, ಸೇವಾ ಕೇಂದ್ರವನ್ನು ತಮ್ಮ ಕ್ಷೇತ್ರದಲ್ಲಿ ಸ್ಥಾಪಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 1

  Frustrated
 • 6

  Angry

Comments:

0 comments

Write the first review for this !