ಕಾರ್ಮಿಕರು ಸರ್ಕಾರದ ಸವಲತ್ತು ಪಡೆಯಬೇಕು

ಸೋಮವಾರ, ಮಾರ್ಚ್ 25, 2019
33 °C
ಅಸಂಘಟಿತ ಹಾಗೂ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ವಿವಿಧ ಸವಲತ್ತುಗಳ ವಿತರಣಾ ಸಮಾರಂಭದಲ್ಲಿ ಸಂಸದ ವೀರಪ್ಪ ಮೊಯಿಲಿ ಸಲಹೆ

ಕಾರ್ಮಿಕರು ಸರ್ಕಾರದ ಸವಲತ್ತು ಪಡೆಯಬೇಕು

Published:
Updated:
Prajavani

ಚಿಕ್ಕಬಳ್ಳಾಪುರ: ‘ಕಾರ್ಮಿಕರಿಗೆ ಸಿಗುವ ಸರ್ಕಾರದ ಎಲ್ಲಾ ಯೋಜನೆಗಳು ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕಾಗಿದೆ’ ಎಂದು ಸಂಸದ ಎಂ.ವೀರಪ್ಪ ಮೊಯಿಲಿ ತಿಳಿಸಿದರು.

ನಗರದಲ್ಲಿ ಶುಕ್ರವಾರ ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ರಾಜ್ಯ ಅಸಂಘಟಿತ ಕಾರ್ಮಿಕರ ಭದ್ರತಾ ಮಂಡಳಿ ಕಟ್ಟಡ ಮತ್ತು ಇತರೆ ಕಾರ್ಮಿಕರ ಕಲ್ಯಾಣ ಮಂಡಳಿ, ಸಹಯೋಗದಲ್ಲಿ ಆಯೋಜಿಸಿದ್ದ ಕಾರ್ಮಿಕ ಸಮ್ಮಾನ ದಿನಾಚರಣೆ, ಅಸಂಘಟಿತ ಹಾಗೂ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ವಿವಿಧ ಸವಲತ್ತುಗಳ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಕಾರ್ಮಿಕರ ಹಿತ ಕಾಯುವ ಉದ್ದೇಶದಿಂದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಕಾರ್ಮಿಕರಿಗೆ ಪಿಂಚಣಿ, ವಸತಿ ಸಹಿತ ತರಬೇತಿ, ಹೆರಿಗೆ ಸೌಲಭ್ಯ, ಮಕ್ಕಳ ಶಿಕ್ಷಣಕ್ಕೆ ಆರ್ಥಿಕ ಸಹಾಯ ಸೇರಿದಂತೆ ಹಲವು ಸವಲತ್ತುಗಳನ್ನು ನೀಡಲಾಗುತ್ತಿದೆ. ಅಸಂಘಟಿತ ಕಾರ್ಮಿಕರು ತಮ್ಮ ಹೆಸರನ್ನು ನೊಂದಾಯಿಸುವ ಮೂಲಕ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು’ ಎಂದು ಹೇಳಿದರು.

‘ಜಿಲ್ಲೆಯಲ್ಲಿ ಈವರೆಗೆ 2,5579 ಕಟ್ಟಡ ಕಾರ್ಮಿಕರು ಹೆಸರು ನೋಂದಾಯಿಸಿಕೊಂಡಿದ್ದಾರೆ. ಆ ಪೈಕಿ 5,893 ಫಲಾನುಭವಿಗಳಿಗೆ ₹3.57 ಕೋಟಿ ಶೈಕ್ಷಣಿಕ ಧನ ಸಹಾಯ, 486 ಫಲಾನುಭವಿಗಳಿಗೆ ₹2.43 ಕೋಟಿ ಮದುವೆ ಧನಸಹಾಯ, 25 ಫಲಾನುಭವಿಗಳಿಗೆ ₹10.45 ಲಕ್ಷ ವೈದ್ಯಕೀಯ ವೆಚ್ಚವಾಗಿ ನೀಡಲಾಗಿದೆ. ವಿವಿಧ ಸೌಲಭ್ಯಗಳ ಅಡಿಯಲ್ಲಿ ಒಟ್ಟು 6,487 ಫಲಾನುಭವಿಗಳಿಗೆ ₹6.33 ಕೋಟಿ ವೆಚ್ಚದಲ್ಲಿ ಸೌಲಭ್ಯವನ್ನು ಒದಗಿಸಲಾಗಿದೆ’ ಎಂದು

ಕಾರ್ಯಕ್ರಮದಲ್ಲಿ ಸಾರಿಗೆ ಕಾರ್ಮಿಕರು, ಹಮಾಲರು, ಟೈಲರ್‌ಗಳು, ಚಿಂದಿ ಆಯುವವರು, ಕಟ್ಟಡ ಕಾರ್ಮಿಕರು, ಅಗಸರು, ಕ್ಷೌರಿಕರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಭಟ್ಟಿ ಕಾರ್ಮಿಕರು, ಮೆಕ್ಯಾನಿಕ್‌ಗಳು, ಮನೆ ಕೆಲಸದವರು ಸೇರಿದಂತೆ 13 ವಲಯದ ಕಾರ್ಮಿಕರಿಗೆ ‘ಕಾರ್ಮಿಕ ಸಮ್ಮಾನ್‌’ ಪ್ರಶಸ್ತಿ ಹಾಗೂ ನಗದು ಬಹುಮಾನ ನೀಡಿ ಗೌರವಿಸಲಾಯಿತು.

ಜಿಲ್ಲಾಧಿಕಾರಿ ಅನಿರುದ್ದ್ ಶ್ರವಣ್, ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಜಂಟಿ ಕಾರ್ಯದರ್ಶಿ ಚಿದಾನಂದ, ಜಿಲ್ಲಾ ಕಾರ್ಮಿಕ ನಿರೀಕ್ಷಕ ಎಚ್ .ಎಮ್ ಸೋಮಶೇಖರ್, ಅಧಿಕಾರಿಗಳಾದ ಸಂತೋಷ್ ಹಿಪ್ಪರಗಿ, ಮೇರಿ ವರ್ಗೀಸ್, ಕಿರಣ್ ಉಪಸ್ಥಿತರಿದ್ದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !