ರಮಾನಾಥ ರೈ ಸ್ಪರ್ಧೆಗೆ ಅಡ್ಡಿ ಇಲ್ಲ: ಜಿಲ್ಲಾಧಿಕಾರಿ ಸಸಿಕಾಂತ್‌ ಸೆಂಥಿಲ್‌

ಸೋಮವಾರ, ಮಾರ್ಚ್ 25, 2019
33 °C

ರಮಾನಾಥ ರೈ ಸ್ಪರ್ಧೆಗೆ ಅಡ್ಡಿ ಇಲ್ಲ: ಜಿಲ್ಲಾಧಿಕಾರಿ ಸಸಿಕಾಂತ್‌ ಸೆಂಥಿಲ್‌

Published:
Updated:

ಮಂಗಳೂರು: ‘ಮಾಜಿ ಸಚಿವ ಬಿ.ರಮಾನಾಥ ರೈ ವಿರುದ್ಧ ಚುನಾವಣಾ ಅಕ್ರಮದಲ್ಲಿ ಭಾಗಿಯಾದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ಆದರೆ, ಇದರಿಂದ ಅವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಯಾವುದೇ ಅಡ್ಡಿಯಾಗುವುದಿಲ್ಲ’ ಎಂದು ಮಂಗಳೂರು ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಯೂ ಆಗಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್‌ ತಿಳಿಸಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ಅವರು, ‘ಆದಾಯ ತೆರಿಗೆ ಅಧಿಕಾರಿಗಳು ಚುನಾವಣೆ ಸಂದರ್ಭದಲ್ಲಿ ವಶಪಡಿಸಿಕೊಂಡ ನಗದಿಗೆ ಸಂಬಂಧಿಸಿದಂತೆ ವರದಿ ನೀಡಿದ್ದರು. ಅದರ ಆಧಾರದಲ್ಲಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್‌) ದಾಖಲು ಮಾಡಲಾಗಿದೆ. ಈ ಹಂತದಲ್ಲಿ ಅವರು ಚುನಾವಣೆಗೆ ಸ್ಪರ್ಧಿಸುವುದಕ್ಕೆ ಪ್ರಕರಣ ಅಡ್ಡಿಯಾಗುವುದಿಲ್ಲ’ ಎಂದರು.

ರಮಾನಾಥ ರೈ ಅವರು ಚುನಾವಣೆಗೆ ಸ್ಪರ್ಧಿಸಿದರೆ ನಾಮಪತ್ರದ ಜೊತೆಗಿನ ಪ್ರಮಾಣಪತ್ರದಲ್ಲಿ ಈ ಪ್ರಕರಣದ ಬಗ್ಗೆಯೂ ಮಾಹಿತಿ ನೀಡಬೇಕಾಗುತ್ತದೆ. ಪ್ರಕರಣ ಇನ್ನೂ ತನಿಖೆಯ ಹಂತದಲ್ಲಿದೆ. ವಿಚಾರಣೆ ಮುಗಿದು ಅಪರಾಧ ಸಾಬೀತಾದರೆ ಮಾತ್ರವೇ ಚುನಾವಣೆಗೆ ಸ್ಪರ್ಧಿಸಲು ಅಡ್ಡಿಯಾಗಬಹುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಬರಹ ಇಷ್ಟವಾಯಿತೆ?

 • 12

  Happy
 • 1

  Amused
 • 0

  Sad
 • 0

  Frustrated
 • 10

  Angry

Comments:

0 comments

Write the first review for this !