ಎರಡನೇ ದಿನ ಒಂದು ನಾಮಪತ್ರ ಸಲ್ಲಿಕೆ

ಗುರುವಾರ , ಏಪ್ರಿಲ್ 25, 2019
33 °C
ಪಕ್ಷೇತರ ಅಭ್ಯರ್ಥಿಯಾಗಿ ಯಲಹಂಕ ಅಟ್ಟೂರು ಬಡಾವಣೆ ನಿವಾಸಿ ಕನಕ ಲಕ್ಷ್ಮೀ ಎಂಬುವರಿಂದ ಉಮೇದುವಾರಿಕೆ ಸಲ್ಲಿಕೆ

ಎರಡನೇ ದಿನ ಒಂದು ನಾಮಪತ್ರ ಸಲ್ಲಿಕೆ

Published:
Updated:
Prajavani

ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಎರಡನೇ ದಿನವಾದ ಬುಧವಾರ ಜಿಲ್ಲೆಯಲ್ಲಿ ಒಂದು ನಾಮಪತ್ರ ಸಲ್ಲಿಕೆಯಾಯಿತು.

ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯ ಯಲಹಂಕ ಅಟ್ಟೂರು ಬಡಾವಣೆ ನಿವಾಸಿ ಕನಕ ಲಕ್ಷ್ಮೀ ಎಂಬುವರು ಪಕ್ಷೇತರ ಅಭ್ಯರ್ಥಿಯಾಗಿ ಜಿಲ್ಲಾ ಚುನಾವಣಾಧಿಕಾರಿ ಅನಿರುದ್ಧ್‌ ಶ್ರವಣ್‌ ಅವರಿಗೆ ನಾಮಪತ್ರ ಸಲ್ಲಿಸಿದರು. ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರಕ್ಕೆ ಎರಡು ದಿನಗಳಲ್ಲಿ ಒಂದೇ ಒಂದು ನಾಮಪತ್ರ ಸಲ್ಲಿಕೆಯಾದಂತಾಗಿದೆ.

‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಕನಕ ಲಕ್ಷ್ಮೀ, ‘ನಾನು ಕಳೆದ ಕೆಲ ವರ್ಷಗಳಿಂದ ಸಾಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವೆ. ಸಂಘಟನೆಗಿಂತಲೂ ರಾಜಕೀಯ ಕ್ಷೇತ್ರದಲ್ಲಿ ಹೆಚ್ಚು ಸಮಾಜ ಸೇವೆ ಸಲ್ಲಿಸಲು ಅವಕಾಶವಿದೆ. ಆದ್ದರಿಂದ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿ ನಾಮಪತ್ರ ಸಲ್ಲಿಸಿರುವೆ’ ಎಂದು ಹೇಳಿದರು.

‘ಹೆಣ್ಣು ಮಕ್ಕಳಿಗೆ ಆಗುತ್ತಿರುವ ಶೋಷಣೆ ತಪ್ಪಿಸುವ ಉದ್ದೇಶದಿಂದ ರಾಜಕೀಯಕ್ಕೆ ಬರುತ್ತಿದ್ದೇನೆ. ಚಿಕ್ಕಬಳ್ಳಾಪುರ ನನಗೆ ತಾಯಿ ಮನೆ ಇದ್ದಂತೆ. ಹೀಗಾಗಿ, ಈ ಚುನಾವಣೆಯಲ್ಲಿ ಗೆಲ್ಲುವ ಭರವಸೆ ಇದೆ. ಪತಿ, ‘ನಮ್ಮ ನಾಡ ರಕ್ಷಣಾ ವೇದಿಕೆ’ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಆಲಂಗೂರು ವೆಂಕಟೇಶ್‌ ಅವರೇ ನಾನು ರಾಜಕೀಯಕ್ಕೆ ಬರಲು ಪ್ರೇರಣೆ’ ಎಂದು ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !