ಎಬಿವಿಪಿ, ಎಸ್ಎಫ್ಐ ವಿದ್ಯಾರ್ಥಿಗಳ ನಡುವೆ ಘರ್ಷಣೆ-17ಮಂದಿಗೆ ಗಾಯ

ಗುರುವಾರ , ಏಪ್ರಿಲ್ 25, 2019
33 °C

ಎಬಿವಿಪಿ, ಎಸ್ಎಫ್ಐ ವಿದ್ಯಾರ್ಥಿಗಳ ನಡುವೆ ಘರ್ಷಣೆ-17ಮಂದಿಗೆ ಗಾಯ

Published:
Updated:
Prajavani

ಶಿಮ್ಲಾ: ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಹಾಗೂ ಸ್ಟೂಡೆಂಟ್ ಫೆಡರೇಷನ್ ಆಫ್ ಇಂಡಿಯಾ (ಎಸ್ ಎಫ್ ಐ)ಗೆ ಸೇರಿದ ವಿದ್ಯಾರ್ಥಿಗಳ ನಡುವೆ ಘರ್ಷಣೆ ನಡೆದ ಪರಿಣಾಮ 17 ಮಂದಿ ಗಾಯಗೊಂಡಿರುವ ಘಟನೆ ಇಲ್ಲಿನ ವಿಶ್ವವಿದ್ಯಾಲಯದ ಆಟದ ಮೈದಾನದಲ್ಲಿ ನಡೆದಿದೆ. ಭಾನುವಾರ ಸಂಜೆ ಘಟನೆ ನಡೆದಿದ್ದು, ಶಿಮ್ಲಾದಾದ್ಯಂತ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.

ಇಲ್ಲಿನ ಹೆಚ್‌ಪಿಯು(ಹಿಮಾಚಲ ಪ್ರದೇಶ ಯೂನಿರ್ವಸಿಟಿ)ವಿಶ್ವವಿದ್ಯಾಲಯ ಆಟದ ಮೈದಾನದಲ್ಲಿ ಭಾನುವಾರ ಸಂಜೆ ಎಸ್‌ಎಫ್‌ಐಗೆ ಸೇರಿದ ವಿದ್ಯಾರ್ಥಿಗಳು ಕ್ರಿಕೆಟ್ ಆಟವಾಡುತ್ತಿದ್ದರು. ಈ ಸಮಯದಲ್ಲಿ ಎಬಿವಿಪಿ ಸಂಘಟನೆಗೆ ಸೇರಿದ ವಿದ್ಯಾರ್ಥಿಗಳು ಶಾಖೆ ನಡೆಸಲು ಆಗಮಿಸಿದ್ದಾರೆ. ಆಗ ಮೈದಾನ ಹಂಚಿಕೊಳ್ಳುವ ವಿಚಾರಕ್ಕಾಗಿ ಎರಡು ಗುಂಪುಗಳ ನಡುವೆ ಪರಸ್ಪರ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ ಎನ್ನಲಾಗಿದೆ. ಈ ವಿಷಯ ತಿಳಿದ ಕೂಡಲೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ.

ಈ ಸಂಬಂಧ ಬೈಲಾಘಂಜ್ ಪೊಲೀಸ್ ಠಾಣೆಗೆ ದೂರು ನೀಡಿರುವ ಎಬಿವಿಪಿ ಅಧ್ಯಕ್ಷ ಅಶ್ವಾನಿ, ಎಸ್‌ಎಫ್‌ಐಗೆ ಸೇರಿದ ವಿದ್ಯಾರ್ಥಿಗಳು ಮಾರಕಾಸ್ತ್ರಗಳಿಂದ ನಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ವಿಶ್ವವಿದ್ಯಾಲಯದ ಎಸ್‌ಎಫ್‌ಐ ಘಟಕದ ಅಧ್ಯಕ್ಷ ವಿಕ್ರಮ್ ಪೊಲೀಸರಿಗೆ ನೀಡಿರುವ ದೂರಿನಲ್ಲಿ, ಪೋತರ್ ಹಿಲ್ ಮೈದಾನದಲ್ಲಿ ನಾವು ಕ್ರಿಕೆಟ್ ಆಡುತ್ತಿದ್ದಾಗ ಎಬಿವಿಪಿಗೆ ಸೇರಿದ ವಿದ್ಯಾರ್ಥಿಗಳು ನಮ್ಮ ಮೇಲೆ ದೊಣ್ಣೆಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

ಘಟನೆಯನ್ನು ಖಂಡಿಸಿ ಇಂದು ಮಧ್ಯಾಹ್ನ ಸಮ್ಮರ್ ಹಿಲ್ ಚೌಕ್‌ನಲ್ಲಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಅಲ್ಲದೆ, ಹಾಸ್ಟೆಲ್‌‌ನ ಕೊಠಡಿಗೆ ಬಲವಂತವಾಗಿ ನುಗ್ಗಿ ನಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಎರಡೂ ಗುಂಪುಗಳ ದೂರು ಪ್ರತಿದೂರುಗಳನ್ನು ಪಡೆದು ಎಫ್‌ಐಆರ್ ದಾಖಲಿಸಿಕೊಂಡಿರುವ ಬೈಲಾಘಂಜ್ ಪೊಲೀಸರು ಹಲವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ, ಪರಿಸ್ಥಿತಿ ಶಾಂತವಾಗಿದೆ ಎಂದು ಶಿಮ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !