‘ಸಿಸಿ ಕ್ಯಾಮೆರಾ ದೃಶ್ಯಾವಳಿ ತಂದುಕೊಡಿ’

ಮಂಗಳವಾರ, ಏಪ್ರಿಲ್ 23, 2019
25 °C
ಬೆಳಗಾವಿ ವಿಭಾಗದ ಶೈಕ್ಷಣಿಕ ಜಿಲ್ಲೆಗಳ ಬಿಇಒಗಳಿಗೆ ಹೆಚ್ಚುವರಿ ಆಯುಕ್ತರ ಸೂಚನೆ

‘ಸಿಸಿ ಕ್ಯಾಮೆರಾ ದೃಶ್ಯಾವಳಿ ತಂದುಕೊಡಿ’

Published:
Updated:

ಬಾಗಲಕೋಟೆ: ‘ಪರೀಕ್ಷಾ ಅಕ್ರಮಗಳ ಬಗ್ಗೆ ಪರಿಶೀಲಿಸಲು ಬೆಳಗಾವಿ ವಿಭಾಗದ ಎಲ್ಲಾ ಎಂಟು ಶೈಕ್ಷಣಿಕ ಜಿಲ್ಲೆಗಳ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರಗಳಲ್ಲಿ ಅಳವಡಿಸಿರುವ ಸಿ.ಸಿ ಕ್ಯಾಮೆರಾದ ದೃಶ್ಯಾವಳಿಗಳನ್ನು ತಂದುಕೊಡುವಂತೆ ಆಯಾ ತಾಲ್ಲೂಕಿನ ಕ್ಷೇತ್ರಶಿಕ್ಷಣಾಧಿಕಾರಿಗಳಿಗೆ (ಬಿಇಒ) ಸಾರ್ವಜನಿಕ ಶಿಕ್ಷಣ ಇಲಾಖೆ ಧಾರವಾಡ ವಿಭಾಗದ ಹೆಚ್ಚುವರಿ ಆಯುಕ್ತ ಮೇಜರ್ ಸಿದ್ಧಲಿಂಗಯ್ಯ ಎಸ್.ಹಿರೇಮಠ ಆದೇಶಿಸಿದ್ದಾರೆ.

ಬಾಗಲಕೋಟೆ, ವಿಜಯಪುರ, ಚಿಕ್ಕೋಡಿ, ಬೆಳಗಾವಿ, ಹಾವೇರಿ, ಧಾರವಾಡ, ಕಾರವಾರ ಹಾಗೂ ಶಿರಸಿ ಶೈಕ್ಷಣಿಕ ಜಿಲ್ಲೆಗಳ ವ್ಯಾಪ್ತಿಯ 669 ಪರೀಕ್ಷಾ ಕೇಂದ್ರಗಳಿಂದ ಮಾಹಿತಿ ಕೇಳಲಾಗಿದೆ. ಎಸ್‌ಎಸ್‌ಎಲ್‌ಸಿ ಆರು ವಿಷಯಗಳ ಪರೀಕ್ಷಾ ಕೊಠಡಿಯೊಳಗಿನ ಮೂರು ತಾಸಿನ ಅವಧಿಯ ಸಿ.ಸಿ ಕ್ಯಾಮೆರಾ ದೃಶ್ಯಾವಳಿಯನ್ನು ಸಿಡಿ ಇಲ್ಲವೇ ಪೆನ್‌ ಡ್ರೈವ್‌ಗೆ ಹಾಕಿಕೊಂಡು ಧಾರವಾಡದ ಹೆಚ್ಚುವರಿ ಆಯುಕ್ತರ ಕಚೇರಿಗೆ ಖುದ್ದಾಗಿ ಬಂದು ತಲುಪಿಸುವಂತೆ ಸೂಚಿಸಲಾಗಿದೆ.

ಬಾಗಲಕೋಟೆ ಜಿಲ್ಲೆಯ 96 ಪರೀಕ್ಷಾ ಕೇಂದ್ರಗಳ ಸಿಸಿ ಕ್ಯಾಮೆರಾ ದೃಶ್ಯಾವಳಿ ಪರಿಶೀಲನೆ ಏಪ್ರಿಲ್ 26 ಹಾಗೂ 27ರಂದು ನಡೆಯಲಿದೆ. ವಿಜಯಪುರ ಏಪ್ರಿಲ್ 29,30, ಚಿಕ್ಕೋಡಿ ಮೇ 2ರಿಂದ 4, ಬೆಳಗಾವಿ ಮೇ 8 ಹಾಗೂ 9, ಹಾವೇರಿ ಮೇ 13,14, ಧಾರವಾಡ ಮೇ 15,16 ಹಾಗೂ ಕಾರವಾರ ಮತ್ತು ಶಿರಸಿ ಶೈಕ್ಷಣಿಕ ಜಿಲ್ಲೆಗಳ ಸಿಸಿ ಕ್ಯಾಮೆರಾ ದೃಶ್ಯಾವಳಿ ಪರಿಶೀಲನೆ ಮೇ 17 ಹಾಗೂ 18ರಂದು ನಡೆಯಲಿದೆ.

ಸಿಸಿ ಕ್ಯಾಮೆರಾ ದೃಶ್ಯಾವಳಿ ತರುವಾಗ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು ಹಾಗೂ ಕಸ್ಟೋಡಿಯನ್‌ಗಳನ್ನು ಕರೆತರುವಂತೆ ತಿಳಿಸಲಾಗಿದ್ದು, ಈ ಕಾರ್ಯದಲ್ಲಿ ನಿರ್ಲಕ್ಷ್ಯ ತೋರಿದಲ್ಲಿ ಪರೀಕ್ಷೆಯ ಮುಖ್ಯ ಅಧೀಕ್ಷಕರು ಹಾಗೂ ಬಿಇಒಗಳನ್ನು ನೇರ ಹೊಣೆಗಾರರನ್ನಾಗಿ ಮಾಡಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಆದೇಶ ಪ್ರತಿಯಲ್ಲಿ ಉಲ್ಲೇಖಿಸಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 1

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !