ಪ್ರಚಾರದಲ್ಲಿ ಪಕ್ಷದ ಧ್ವಜ ದುರುಪಯೋಗ ಆರೋಪ: ಸುಮಲತಾ ವಿರುದ್ಧ ಕಾಂಗ್ರೆಸ್‌ ದೂರು

ಶುಕ್ರವಾರ, ಏಪ್ರಿಲ್ 26, 2019
35 °C

ಪ್ರಚಾರದಲ್ಲಿ ಪಕ್ಷದ ಧ್ವಜ ದುರುಪಯೋಗ ಆರೋಪ: ಸುಮಲತಾ ವಿರುದ್ಧ ಕಾಂಗ್ರೆಸ್‌ ದೂರು

Published:
Updated:

ಮಂಡ್ಯ: ಪಕ್ಷೇತರ ಅಭ್ಯರ್ಥಿ ಸುಮಲತಾ ಪ್ರಚಾರದಲ್ಲಿ ಕಾಂಗ್ರೆಸ್‌ ಪಕ್ಷದ ಧ್ವಜ ಹಾಗೂ ಇತರ ಸಾಮಗ್ರಿಗಳನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ. ಇದು ನೀತಿ ಸಂಹಿತೆ ಉಲ್ಲಂಘನೆಯಾಗಿದ್ದು ದುರುಪಯೋಗ ಮಾಡಿಕೊಳ್ಳುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಡಿ.ಗಂಗಾಧರ್‌ ಜಿಲ್ಲಾ ಚುನಾವಣಾಧಿಕಾರಿಗೆ ದೂರು ಸಲ್ಲಿಸಿದ್ದಾರೆ.

ಈ ಕುರಿತು ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿದ ಸಿ.ಡಿ.ಗಂಗಾಧರ್‌ ‘ಮೈತ್ರಿ ಧರ್ಮಕ್ಕೆ ಅನುಗುಣವಾಗಿ ಚುನಾವಣೆ ಎದುರಿಸಲಾಗುತ್ತಿದೆ. ಅದರಂತೆ ರಾಜ್ಯದ 28 ಕ್ಷೇತ್ರದಲ್ಲಿ ಚುನಾವಣೆ ನಡೆಯುತ್ತಿದೆ. ಆದರೆ ಕ್ಷೇತ್ರದ ಕಾಂಗ್ರೆಸ್ ಮತದಾರರನ್ನು ಸೆಳೆಯಲು ಸುಮಲತಾ ಅವರು ಕಾಂಗ್ರೆಸ್ ಪಕ್ಷದ ಬಾವುಟವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಕೂಡಲೇ ಇದನ್ನು ತಡೆಯಬೇಕು. ಅವರಿಗೆ ಬಿಜೆಪಿ ಬೆಂಬಲ ನೀಡಿದೆ, ಬೇಕಿದ್ದರೆ ಬಿಜೆಪಿ ಧ್ವಜ ಬಳಸಲಿ’ ಎಂದರು.

ಬರಹ ಇಷ್ಟವಾಯಿತೆ?

  • 8

    Happy
  • 2

    Amused
  • 0

    Sad
  • 0

    Frustrated
  • 7

    Angry

Comments:

0 comments

Write the first review for this !