3 ಪ್ರತ್ಯೇಕ ಪ್ರಕರಣ: ₹4.08 ಲಕ್ಷ ವಶ

ಶುಕ್ರವಾರ, ಏಪ್ರಿಲ್ 26, 2019
21 °C

3 ಪ್ರತ್ಯೇಕ ಪ್ರಕರಣ: ₹4.08 ಲಕ್ಷ ವಶ

Published:
Updated:

ಬಾಗಲಕೋಟೆ: ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಚುನಾವಣಾಧಿಕಾರಿಗಳು ಬುಧವಾರ ಸೂಕ್ತ ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ ₹4.08 ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ.

ಬೀಳಗಿ ತಾಲ್ಲೂಕಿನ ಟಕ್ಕಳಕಿ ಚೆಕ್‌ಪೋಸ್ಟ್‌ನಲ್ಲಿ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲ್ಲೂಕಿನ ಕುಂಚಗನೂರಿನ ನೀಲಕಂಠರಾವ್ ದೇಶ್‌ಮುಖ ಪ್ರಯಾಣಿಸುತ್ತಿದ್ದ ವಾಹನ ತಡೆದ ಅಧಿಕಾರಿಗಳು ತಪಾಸಣೆ ನಡೆಸಿದ್ದು, ಆ ವೇಳೆ ₹2.11 ಲಕ್ಷ ನಗದು ಪತ್ತೆಯಾಗಿದೆ. ಮತ್ತೊಂದು ಪ್ರಕರಣದಲ್ಲಿ ವಿಜಯಪುರ ನಗರದ ಗುಲಾಮ್‌ರಸೂಲ್ ಹತ್ತಿವಾಲೆ ಎಂಬುವವರ ವಾಹನ ತಪಾಸಣೆ ನಡೆಸಿ ಅದರಲ್ಲಿ ಇದ್ದ ₹95 ಸಾವಿರ ನಗದು ವಶಪಡಿಸಿಕೊಂಡಿದ್ದಾರೆ.

ಸ್ಥಾನಿಕ ಜಾಗೃತದಳದ ಅಧಿಕಾರಿ ಎಸ್.ಬಿ.ಹುಣಸಿಕಟ್ಟಿ ನೇತೃತ್ವದ ತಂಡ ತಪಾಸಣೆ ನಡೆಸಿದೆ. ಇನ್ನೊಂದು ಪ್ರಕರಣದಲ್ಲಿ ಹುನಗುಂದ ತಾಲ್ಲೂಕಿನ ಗುಗ್ಗಲಮರಿ ಚೆಕ್‌ಪೋಸ್ಟ್‌ನಲ್ಲಿ ತಪಾಸಣೆ ವೇಳೆ ₹1 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !