ತಾಕತ್ತಿದ್ದರೆ ಕ್ರಮ ಕೈಗೊಳ್ಳಿ: ಕಾಂಗ್ರೆಸ್‌ ಹೈಕಮಾಂಡ್‌ಗೆ ಸವಾಲು

ಶುಕ್ರವಾರ, ಏಪ್ರಿಲ್ 19, 2019
22 °C

ತಾಕತ್ತಿದ್ದರೆ ಕ್ರಮ ಕೈಗೊಳ್ಳಿ: ಕಾಂಗ್ರೆಸ್‌ ಹೈಕಮಾಂಡ್‌ಗೆ ಸವಾಲು

Published:
Updated:

ಮಂಡ್ಯ: ಕಾಂಗ್ರೆಸ್‌ ಹೈಕಮಾಂಡ್‌ ವಿರುದ್ಧ ತಿರುಗಿ ಬಿದ್ದಿರುವ ಸ್ಥಳೀಯ ಕಾಂಗ್ರೆಸ್‌ ಮುಖಂಡರು, ತಮ್ಮನ್ನು ಜೈಲಿಗೆ ಕಳುಹಿಸಿದರೂ ಸುಮಲತಾ ಪರ ಕಾಂಗ್ರೆಸ್‌ ಧ್ವಜ ಪ್ರದರ್ಶಿಸಿ ಪ್ರಚಾರ ನಡೆಸುತ್ತೇವೆ. ತಾಕತ್ತು ಇದ್ದರೆ ಕ್ರಮ ಕೈಗೊಳ್ಳಿ ಎಂದು ಸವಾಲು ಹಾಕಿದರು.

ಉಚ್ಛಾಟಿತ ಕೆಪಿಸಿಸಿ ಸದಸ್ಯ ಇಂಡುವಾಳು ಸಚ್ಚಿದಾನಂದ ನಿವಾಸದಲ್ಲಿ ಗುರುವಾರ ಸಭೆ ನಡೆಸಿದ ಮುಖಂಡರು, ಸುಮಲತಾ ಪ್ರಚಾರದ ವೇಳೆ ಕಾಂಗ್ರೆಸ್ ಧ್ವಜ ಪ್ರದರ್ಶಿಸದಂತೆ ಎಚ್ಚರಿಕೆ ನಿಡಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹಾಗೂ ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಡಿ.ಗಂಗಾಧರ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್‌ ಮುಖಂಡರ ಗೊಡ್ಡು ಬೆದರಿಕೆಗಳಿಗೆ ನಾವು ಹೆದರುವುದಿಲ್ಲ. ನಾವು ಸ್ವಾಭಿಮಾನಿಗಳು, ಎಷ್ಟೇ ಎಚ್ಚರಿಕೆ ಕೊಟ್ಟರೂ ಮೈತ್ರಿ ಅಭ್ಯರ್ಥಿ ಪರ ಕೆಲಸ ಮಾಡುವುದಿಲ್ಲ. ಅಂಬರೀಷ್‌ ಅವರ ಪತ್ನಿ, ಮಂಡ್ಯ ಸೊಸೆಯಾಗಿರುವ ಸುಮಲತಾ ಪರ ನಾವು ನಿಲ್ಲುತ್ತೇವೆ. ಕಾರ್ಯಕರ್ತರಿಂದ ಕಾಂಗ್ರೆಸ್‌ ಪಕ್ಷವಿದೆ. ಬಾವುಟ ಹಿಡಿಯಬೇಡಿ ಎನ್ನಲು ನೀವ್ಯಾರು? ನಾವೆಲ್ಲರೂ ಸಾಮೂಹಿಕವಾಗಿ ರಾಜೀನಾಮೆ ನೀಡಲು ಸಿದ್ಧರಿದ್ದೇವೆ ಎಂದು ಎಚ್ಚರಿಕೆ ನೀಡಿದರು. ಮೈತ್ರಿ ಅಭ್ಯರ್ಥಿ ಪರ ನಿಂತಿರುವ ಸಚಿವ ಡಿ.ಕೆ.ಶಿವಕುಮಾರ್‌ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !