ಕೆ.ಸಿ. ವ್ಯಾಲಿ: ತಡೆಯಾಜ್ಞೆ ತೆರವು; ರೈತಸಂಘದ ಸಂಭ್ರಮಾಚರಣೆ

ಶುಕ್ರವಾರ, ಏಪ್ರಿಲ್ 26, 2019
33 °C

ಕೆ.ಸಿ. ವ್ಯಾಲಿ: ತಡೆಯಾಜ್ಞೆ ತೆರವು; ರೈತಸಂಘದ ಸಂಭ್ರಮಾಚರಣೆ

Published:
Updated:
Prajavani

ಚಿಕ್ಕಬಳ್ಳಾಪುರ: ಕೆ.ಸಿ. ವ್ಯಾಲಿ (ಕೋರಮಂಗಲ ಮತ್ತು ಚಲ್ಲಘಟ್ಟ ಕಣಿವೆ) ಯೋಜನೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ ತೆರವುಗೊಳಿಸಿದ್ದು ಸ್ವಾಗತಿಸಿ ನಗರದಲ್ಲಿ ರೈತಸಂಘದ ಪದಾಧಿಕಾರಿಗಳು ಸಂಭ್ರಮಾಚರಣೆ ಮಾಡಿದರು.

ಜಿಲ್ಲಾಡಳಿತ ಭವನದಿಂದ ಅಂಬೇಡ್ಕರ್ ವೃತ್ತದ ವರೆಗೆ ಮೆರವಣಿಗೆಯಲ್ಲಿ ಬಂದ ರೈತಸಂಘದ ಪದಾಧಿಕಾರಿಗಳು ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂತಸ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ರೈತಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಭಕ್ತರಹಳ್ಳಿ ಭೈರೇಗೌಡ, ‘ಬಯಲು ಸೀಮೆ ಜನ, ದನಕರು, ಪ್ರಾಣಿ ಪಕ್ಷಿಗಳಿಗೆ ನೀರಿಲ್ಲದೆ ತತ್ತರಿಸುತ್ತಿರುವ ಈ ಭೀಕರ ಬರಗಾಲದಲ್ಲಿ ನ್ಯಾಯಾಲಯದ ಈ ನಿರ್ಧಾರ ನಮಗೆ ತುಂಬಾ ಸಂತಸ ತಂದಿದೆ. ಬಯಲು ಸೀಮೆಯ ರೈತರಿಗೆ ಇದು ನಿಜವಾಗಿ ಯುಗಾದಿ ಹಬ್ಬದ ಸಡಗರ ಉಂಟು ಮಾಡಿದೆ’ ಎಂದು ಹೇಳಿದರು.

‘ಕೋಲಾರ ಜಿಲ್ಲೆಯಲ್ಲಿ ಕೆ.ಸಿ.ವ್ಯಾಲಿ ಯೋಜನೆ ಅಡಿ ತುಂಬಿಸಿದ 11 ಕೆರೆಗಳ ವ್ಯಾಪ್ತಿಯಲ್ಲಿ ಈಗಾಗಲೇ ಹಳೆಯ ಕೊಳವೆಬಾವಿ, ತೆರೆದ ಬಾವಿಗಳಲ್ಲಿ ನೀರು ಬಂದಿದೆ. ನೀರಾವರಿ ಯೋಜನೆಗಳು ತ್ವರಿತಗತಿಯಲ್ಲಿ ಕಾಣಿಸಿಕೊಂಡು ಜಿಲ್ಲೆಯಲ್ಲಿ ಸಹ ರೈತರು ನೆಮ್ಮದಿಯ ನಿಟ್ಟುಸಿರು ಬಿಡುವ ವಾತಾವರಣ ನಿರ್ಮಾಣವಾಗಬೇಕಿದೆ’ ಎಂದು ತಿಳಿಸಿದರು.

ಚಿಕ್ಕಬಳ್ಳಾಪುರ ತಾಲ್ಲೂಕು ಘಟಕದ ಅಧ್ಯಕ್ಷ ರಾಮಾಂಜಿನಪ್ಪ, ಕಾರ್ಯದರ್ಶಿ ಗಂಗಾಧರ್, ಖಜಾಂಚಿ ಈಶ್ವರಾಚಾರಿ, ಶಿಡ್ಲಘಟ್ಟ ತಾಲ್ಲೂಕು ಘಟಕದ ಅಧ್ಯಕ್ಷ ತಾದೂರು ಮಂಜುನಾಥ್, ಉಪಾಧ್ಯಕ್ಷ ಮುನಿನಂಜಪ್ಪ, ಕಾರ್ಯದರ್ಶಿ ಕೃಷ್ಣಪ್ಪ, ಪದಾಧಿಕಾರಿಗಳಾದ ಮುಸ್ತಾಕ್ ಸಾಬ್, ನಾಗರಾಜ್, ಗೋಪಾಲ್, ಚೆನ್ನಕೇಶವ ಭಾಗವಹಿಸಿದ್ದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !