ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರದಿಂದ ಬೇಸತ್ತ ಜನ: ಎಂ.ಪಿ. ರೇಣುಕಾಚಾರ್ಯ

ಶನಿವಾರ, ಏಪ್ರಿಲ್ 20, 2019
27 °C

ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರದಿಂದ ಬೇಸತ್ತ ಜನ: ಎಂ.ಪಿ. ರೇಣುಕಾಚಾರ್ಯ

Published:
Updated:
Prajavani

ಹೊನ್ನಾಳಿ: ರಾಜ್ಯದ ಮೈತ್ರಿ ಸರ್ಕಾರದ ಆಡಳಿತದಿಂದ ಜನತೆ ಬೇಸತ್ತಿದ್ದಾರೆ. ಅಭಿವೃದ್ಧಿ ಶೂನ್ಯ.  ಹೀಗಾಗಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಬಿಜೆಪಿ ಗಳಿಸಲಿದೆ ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದರು.

ತಾಲ್ಲೂಕಿನ ಹೊಳೆಹರಳಹಳ್ಳಿ ಗ್ರಾಮದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ದೇಶದಲ್ಲಿ ಮೋದಿ ಅವರ ಜನಪ್ರಿಯತೆ ಕಳೆದ ಬಾರಿಗಿಂತ ಹೆಚ್ಚಾಗಿದೆ. ಈ ಬಾರಿ ಯುವ ಮತದಾರರು, ಮಹಿಳೆಯರು ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ದೇಶದ ಪ್ರಧಾನಿಯನ್ನಾಗಿ ಮಾಡಲು ಉತ್ಸುಕರಾಗಿದ್ದಾರೆ ಎಂದು ಅಭಿಪ್ರಾಯಪಟ್ಟರು.

ದಾವಣಗೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಜಿ.ಎಂ. ಸಿದ್ದೇಶ್ವರ  ಅವರ ನಾಮಪತ್ರ ಸಲ್ಲಿಕೆಯಂದು ಬಂದ ಜನರನ್ನು ಕಂಡು ಕಾಂಗ್ರೆಸ್ ಮುಖಂಡರು ದಂಗಾಗಿದ್ದಾರೆ. ಹೀಗಾಗಿ ಜಿ.ಎಂ. ಸಿದ್ದೇಶ್ವರ ಅವರ ಜಯ ನಿಶ್ಚಿತ ಎಂದರು. 

ಬೆಳಗುತ್ತಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಹನುಮಸಾಗರ, ಬೆಳಗುತ್ತಿ, ಹೊಳೆಹರಳಹಳ್ಳಿ ಗ್ರಾಮ ಸೇರಿ  ಹಲವು ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ಕಾರ್ಯ ನಡೆಯಿತು.

ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ಆರ್ ಮಹೇಶ್, ಬಿಜೆಪಿ ಜಿಲ್ಲಾ ರೈತಾ ಮೋರ್ಚಾ ಅಧ್ಯಕ್ಷ ಶಾಂತರಾಜ್ ಪಾಟೀಲ್, ತಾಲ್ಲೂಕು ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಸಿ.ಆರ್. ಶಿವಾನಂದ್, ಹನುಮಸಾಗರ ಗ್ರಾ.ಪಂ. ಅಧ್ಯಕ್ಷ ಚನ್ನನಾಯ್ಕ, ಎಚ್.ಬಿ ಮೋಹನ್, ಕೆ.ವಿ ಚನ್ನಪ್ಪ, ರಾಮಚಂದ್ರಪ್ಪ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !