ಐಟಿ ಅಧಿಕಾರಿಗಳಿಂದ ಫೋನ್‌ ಕದ್ದಾಲಿಕೆ: ಪುಟ್ಟರಾಜು

ಮಂಗಳವಾರ, ಏಪ್ರಿಲ್ 23, 2019
33 °C

ಐಟಿ ಅಧಿಕಾರಿಗಳಿಂದ ಫೋನ್‌ ಕದ್ದಾಲಿಕೆ: ಪುಟ್ಟರಾಜು

Published:
Updated:

ಮಂಡ್ಯ: ‘ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಮ್ಮ ಕುಟುಂಬ ಸದಸ್ಯರ ಮೇಲೆ ದಾಳಿ ನಡೆಸಿದ ನಂತರ ನನ್ನ ಮೊಬೈಲ್‌ ಫೋನ್‌ ಕದ್ದಾಲಿಕೆಯಾಗುತ್ತಿರುವ ಮಾಹಿತಿ ಇದೆ’ ಎಂದು ಸಣ್ಣ ನೀರಾವರಿ ಸಚಿವ ಸಿ.ಎಸ್‌.ಪುಟ್ಟರಾಜು ಭಾನುವಾರ ಆರೋಪಿಸಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಐಟಿ ಅಧಿಕಾರಿಗಳೇ ಫೋನ್‌ ಕದ್ದಾಲಿಕೆ ಮಾಡುತ್ತಿದ್ದಾರೆ. ಆ ಮೂಲಕ ಪಕ್ಷೇತರ ಅಭ್ಯರ್ಥಿಯನ್ನು ಚುನಾವಣೆಯಲ್ಲಿ ಗೆಲ್ಲಿಸಲು ಸಹಕಾರ ನಿಡುತ್ತಿದ್ದಾರೆ. ಇದೇ ರೀತಿ ಮುಂದುವರಿದರೆ ತನಿಖೆಗೆ ಒತ್ತಾಯಿಸುವ ಬಗ್ಗೆ ನಮ್ಮ ಪಕ್ಷದ ವರಿಷ್ಠರ ಜೊತೆ ಮಾತನಾಡುತ್ತೇನೆ’ ಎಂದರು.

‘ಪಕ್ಷೇತರ ಅಭ್ಯರ್ಥಿ ಮೈಸೂರಿನಲ್ಲಿ ಏನೇನು ಮಾಡುತ್ತಿದ್ದಾರೆ ಎಂಬ ಮಾಹಿತಿ ಇದೆ. ಕಾಂಗ್ರೆಸ್‌ನ ಮಾಜಿ ಶಾಸಕರು ಹಾಗೂ ಮುಖಂಡರನ್ನು ಕರೆಸಿ ಯಾವ ರೀತಿ ಹಣ ವಿತರಣೆ ಮಾಡುತ್ತಿದ್ದಾರೆ ಎಂಬುದು ಗೊತ್ತಿದೆ. ಸಂಪೂರ್ಣ ಮಾಹಿತಿಯನ್ನು ಕೆಲವೇ ದಿನಗಳಲ್ಲಿ ಬಹಿರಂಗ ಮಾಡಲಾಗುವುದು’ ಎಂದು ಹೇಳಿದರು.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !