ವೈಯಕ್ತಿಕ ನಿಂದನೆಗೆ ಜೆಡಿಎಸ್‌ ಸಂಚು, ಹಣದ ಆಮಿಷ: ಸುಮಲತಾ

ಬುಧವಾರ, ಏಪ್ರಿಲ್ 24, 2019
31 °C

ವೈಯಕ್ತಿಕ ನಿಂದನೆಗೆ ಜೆಡಿಎಸ್‌ ಸಂಚು, ಹಣದ ಆಮಿಷ: ಸುಮಲತಾ

Published:
Updated:
Prajavani

ಮಂಡ್ಯ: ‘ನನ್ನ ವೈಯಕ್ತಿಕ ವಿಚಾರ ಕುರಿತು ನಿಂದನೆ ಮಾಡಲು ಜೆಡಿಎಸ್‌ ಮುಖಂಡರು ಸಂಚು ರೂಪಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ನನ್ನನ್ನು ಕೆಟ್ಟದಾಗಿ ಚಿತ್ರಿಸಿ ಅಪಪ್ರಚಾರ ನಡೆಸುವ ಸಾಧ್ಯತೆ ಇದೆ’ ಎಂದು ಪಕ್ಷೇತರ ಅಭ್ಯರ್ಥಿ ಮಂಗಳವಾರ ಗಂಭೀರ ಆರೋಪ ಮಾಡಿದರು.

ಶ್ರೀರಂಗಪಟ್ಟಣ ತಾಲ್ಲೂಕು ಕಾಳೇನಹಳ್ಳಿ ಗ್ರಾಮದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಅಂಬರೀಷ್‌ ಅವರು ಇದ್ದಾಗ ಕಚೇರಿ ಹಾಗೂ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯನ್ನು ಜೆಡಿಎಸ್‌ ಮುಖಂಡರು ಸಂಪರ್ಕ ಮಾಡಿದ್ದಾರೆ. ನಮ್ಮ ಕೆಲವು ವಿಚಾರಗಳ ಕುರಿತು ನಕಾರಾತ್ಮಕವಾಗಿ ಮಾತನಾಡುವಂತೆ ಒತ್ತಾಯಿಸಿದ್ದಾರೆ. ಅವರು ಒಪ್ಪದಿದ್ದರೂ ಅವರಿಗೆ ಹಣದ ಆಮಿಷ ತೋರಿಸಿದ್ದಾರೆ. ₹ 10–15 ಲಕ್ಷ ಹಣ ಕೊಡುವುದಾಗಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ನಿವೇಶನ ನೀಡುವ ಭರವಸೆಯನ್ನೂ ಕೊಟ್ಟಿದ್ದಾರೆ. ನನ್ನ ಜೊತೆ ಸಂಪರ್ಕದಲ್ಲಿರುವ ಜೆಡಿಎಸ್‌ನ ಪ್ರಮುಖ ಮುಖಂಡರೊಬ್ಬರು ನನಗೆ ಮಾಹಿತಿ ನೀಡಿದ್ದಾರೆ’ ಎಂದು ಹೇಳಿದರು.

‘ಈ ವಾರದಲ್ಲಿ ನನ್ನ ಮೇಲೆ ಏನೇನು ಆರೋಪ ಮಾಡುತ್ತಾರೋ ಗೊತ್ತಿಲ್ಲ. ಜೆಡಿಎಸ್‌ ಮುಖಂಡರಿಗೆ ನನ್ನ ವಿರುದ್ಧ ಆರೋಪ ಮಾಡಲು ಬೇರೆ ವಿಚಾರಗಳೇ ಸಿಗುತ್ತಿಲ್ಲ. ಹೀಗಾಗಿ ವೈಯಕ್ತಿಕ ವಿಚಾರಗಳನ್ನು ತೆಗೆದು ಮಾತನಾಡುತ್ತಿದ್ದಾರೆ. ನನಗೆ ಭಯವಿಲ್ಲ, ಜನರೇ ತಕ್ಕ ಉತ್ತರ ಕೊಡುತ್ತಾರೆ. ಜೆಡಿಎಸ್‌ ಮುಖಂಡರಿಗೆ ಯಾವುದೇ ಸಿದ್ಧಾಂತ ಇಲ್ಲ. ಗೆಲುವಿಗಾಗಿ ಸಣ್ಣ ಮಟ್ಟದ ರಾಜಕಾರಣ ಮಾಡುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬರಹ ಇಷ್ಟವಾಯಿತೆ?

 • 8

  Happy
 • 0

  Amused
 • 0

  Sad
 • 0

  Frustrated
 • 4

  Angry

Comments:

0 comments

Write the first review for this !