ಮೊಯಿಲಿಗೆ ಗಾಣಿಗರ ಒಕ್ಕೂಟದ ಬೆಂಬಲ

ಮಂಗಳವಾರ, ಏಪ್ರಿಲ್ 23, 2019
31 °C
ಪತ್ರಿಕಾಗೋಷ್ಠಿಯಲ್ಲಿ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಪಿ.ಜಿ.ವಿಜಯ್ ಕುಮಾರ್ ಘೋಷಣೆ

ಮೊಯಿಲಿಗೆ ಗಾಣಿಗರ ಒಕ್ಕೂಟದ ಬೆಂಬಲ

Published:
Updated:

ಚಿಕ್ಕಬಳ್ಳಾಪುರ: ‘ಅಖಿಲ ಕರ್ನಾಟಕ ಗಾಣಿಗರ ಒಕ್ಕೂಟವು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್–ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಎಂ.ವೀರಪ್ಪ ಮೊಯಿಲಿ ಅವರಿಗೆ ಬೆಂಬಲ ನೀಡಲಿದೆ’ ಎಂದು ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಪಿ.ಜಿ.ವಿಜಯ್ ಕುಮಾರ್ ತಿಳಿಸಿದರು.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ದೂರದೃಷ್ಟಿಯುಳ್ಳ ರಾಜಕಾರಣಿಯಾಗಿರುವ ಮೊಯಿಲಿ ಅವರು ದೇವರಾಜ್ ಅರಸು ನಂತರ ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಏಳಿಗೆಗೆ ಶ್ರಮಿಸಿದ ಏಕೈಕ ಮುಖ್ಯಮಂತ್ರಿಯಾಗಿದ್ದಾರೆ. ಆರ್ಥಿಕ, ಸಾಮಾಜಿಕವಾಗಿ ಹಿಂದುಳಿದ ಗಾಣಿಗ ಜನಾಂಗವನ್ನು ಅವರು 3 ಬಿ ಯಿಂದ 2 ಎ ಸೇರಿಸಿ ಸಮುದಾಯದ ಏಳಿಗೆಗೆ ಅವಕಾಶ ಮಾಡಿಕೊಟ್ಟಿದ್ದಾರೆ’ ಎಂದು ಹೇಳಿದರು.

‘ಮೊಯಿಲಿ ಅವರು ಮುಖ್ಯಮಂತ್ರಿಯಾಗಿದ್ದಾಗ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ವ್ಯವಸ್ಥೆ ತರುವ ಮೂಲಕ ಬಡ ವಿದ್ಯಾರ್ಥಿಗಳೂ ವೈದ್ಯಕೀಯ, ಎಂಜಿನಿಯರಿಂಗ್‌ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಸಾಧ್ಯವಾಗುವಂತೆ ಮಾಡಿದ್ದಾರೆ’ ಎಂದರು.

‘ಇತ್ತೀಚೆಗೆ ಮಂಗಳೂರಿನಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಎತ್ತಿನಹೊಳೆ ಯೋಜನೆ ತಡೆದು, ಚಿಕ್ಕಬಳ್ಳಾಪುರ ಜಿಲ್ಲೆಗೆ ನೀರು ಕೊಡಬಾರದು ಎಂದು ಅಲ್ಲಿನ ಬಿಜೆಪಿ ನಾಯಕರು ತೀರ್ಮಾನ ತೆಗೆದುಕೊಂಡಿದ್ದಾರೆ. ಇದು ಮಂಗಳೂರಿನ ಲೋಕಸಭಾ ಕ್ಷೇತ್ರ ಗೆಲ್ಲಲ್ಲು ಬಿಜೆಪಿ ಮಾಡುತ್ತಿರುವ ಕುತಂತ್ರ. ಬಿಜೆಪಿಯವರು ರಾಜಕೀಯ ಲಾಭಕ್ಕಾಗಿ ಈ ಭಾಗದ ರೈತರಿಗೆ ನೀರು ಕೊಡದೆ ಹತ್ಯೆ ಮಾಡುವ ಷಡ್ಯಂತ್ರ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.

ಎಸ್‌ಎಲ್‌ಎನ್‌ ಟ್ರಸ್ಟ್ ಅಧ್ಯಕ್ಷ ಬಿ.ಜಿ.ರಮೇಶ್, ಗಾಣಿಗರ ಒಕ್ಕೂಟದ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಣ್ಣ, ಮುಖಂಡರಾದ ವೇಣುಗೋಪಾಲ್, ಶಿವಪ್ಪ, ದೇವರಾಜ್ ಹಾಜರಿದ್ದರು.

ಬರಹ ಇಷ್ಟವಾಯಿತೆ?

  • 5

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !