ದೇಶದಲ್ಲಿ ಮೋದಿ ಅಲೆ; ಕೇವಲ ಭ್ರಮೆ

ಶನಿವಾರ, ಏಪ್ರಿಲ್ 20, 2019
24 °C
ಶಿರಾದಲ್ಲಿ ಮಾಜಿ ಸಚಿವ ಟಿ.ಬಿ.ಜಯಚಂದ್ರ ವಗ್ದಾಳಿ

ದೇಶದಲ್ಲಿ ಮೋದಿ ಅಲೆ; ಕೇವಲ ಭ್ರಮೆ

Published:
Updated:
Prajavani

ಶಿರಾ: ದೇಶದಲ್ಲಿ ಮೋದಿ ಪರ ಅಲೆ ಇದೆ ಎಂಬುದು ಭ್ರಮೆ. 60 ವರ್ಷ ದೇಶದಲ್ಲಿ ಸುಭದ್ರ ಸರ್ಕಾರ ನೀಡಿದ ಕಾಂಗ್ರೆಸ್ ಬಡತನ ನಿರ್ಮೂಲನೆ ಮಾಡಿದೆ ಎಂದು ಮಾಜಿ ಸಚಿವ ಟಿ.ಬಿ.ಜಯಚಂದ್ರ ಹೇಳಿದರು.

ತಾಲ್ಲೂಕಿನ ಗೌಡಗೆರೆ ಹೋಬಳಿಯ ತಾವರೆಕೆರೆ, ನಾರಾಯಣಪುರ, ಹುಣಸೇಹಳ್ಳಿ ಗ್ರಾಮಗಳಲ್ಲಿ ಗುರುವಾರ ಹಮ್ಮಿಕೊಂಡಿದ್ದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಕೂಟದ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಪರ ಪ್ರಚಾರ ನಡೆಸಿ ಮಾತನಾಡಿದರು.

ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದು ಕಾಂಗ್ರೆಸ್ ಪಕ್ಷವೇ ಹೊರತು ಕೋಮುವಾದಿ ಬಿಜೆಪಿಯಲ್ಲ. ನರೇಂದ್ರ ಮೋದಿಯ ಸರ್ವಾಧಿಕಾರಿ ಧೋರಣೆ ಅಂತ್ಯಗೊಳಿಸಲು ದೇಶದ ಎಲ್ಲ ರಾಜ್ಯಗಳಲ್ಲೂ ಕಾಂಗ್ರೆಸ್ ಪಕ್ಷದೊಂದಿಗೆ ಇತರೆ ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದು, ಮೈತ್ರಿಕೂಟದ ಅಭ್ಯರ್ಥಿಗಳನ್ನು ಬೆಂಬಲಿಸುವ ಮೂಲಕ ದೇಶವನ್ನು ಕೋಮುವಾದದಿಂದ ರಕ್ಷಿಸಬೇಕು ಎಂದರು.

ಶಾಸಕ ಬಿ.ಸತ್ಯನಾರಾಯಣ ಮಾತನಾಡಿ, ರಾಜ್ಯದಲ್ಲಿ ಜನಪರ ಹಾಗೂ ರೈತಪರ ಆಡಳಿತ ನೀಡುತ್ತಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಕೈ ಬಲಪಡಿಸುವ ನಿಟ್ಟಿನಲ್ಲಿ ಜೆಡಿಎಸ್ ಕಾರ್ಯಕರ್ತರು ಭಿನ್ನಪ್ರಾಯವಿಲ್ಲದೆ ಮೈತ್ರಿ ಅಭ್ಯರ್ಥಿ ಪರ ಮತಯಾಚನೆ ಮಾಡಿ ಬಿ.ಎನ್.ಚಂದ್ರಪ್ಪ ಗೆಲುವಿಗೆ ಶ್ರಮಿಸಬೇಕು ಎಂದರು.

ಮಾಜಿ ಶಾಸಕ ಸಾ.ಲಿಂಗಯ್ಯ, ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ಕಲ್ಕೆರೆ ರವಿಕುಮಾರ್, ತಾಲೂಕು ಜೆಡಿಎಸ್ ಅಧ್ಯಕ್ಷ ಆರ್.ಉಗ್ರೇಶ್, ಎಪಿಎಂಸಿ ಅಧ್ಯಕ್ಷ ನರಸಿಂಹೇಗೌಡ, ಕೆಪಿಸಿಸಿ ಸದಸ್ಯ ಬಿ.ಎಸ್.ಸತ್ಯನಾರಾಯಣ, ಬ್ಲಾಕ್ ಕಾಂಗ್ರೇಸ್ ಗ್ರಾಮಾಂತರ ಅಧ್ಯಕ್ಷ ಬರಗೂರು ನಟರಾಜು, ಕೃಷ್ಣೇಗೌಡ, ಎನ್.ಸಿ.ದೊಡ್ಡಯ್ಯ, ಗೋವಿಂದರಾಜು, ತಾ. ಪಂ ಸದಸ್ಯೆ ರೇಣುಕಮ್ಮ, ಜಯರಾಮಯ್ಯ, ಶಾಂತಮ್ಮ ಗುರುದತ್ತಾತ್ರೇಯ, ಭಾನುಪ್ರಕಾಶ್ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !