ಮತ ಜಾಗೃತಿಗೆ ರಂಗೋಲಿಯ ಕರೆ

ಬುಧವಾರ, ಏಪ್ರಿಲ್ 24, 2019
33 °C
ಜಿಲ್ಲಾಡಳಿತ ಭವನದ ಆವರಣದಲ್ಲಿ ಮನಸೆಳೆದ ಬಣ್ಣಬಣ್ಣದ ಚಿತ್ತಾರಗಳು

ಮತ ಜಾಗೃತಿಗೆ ರಂಗೋಲಿಯ ಕರೆ

Published:
Updated:
Prajavani

ಚಿಕ್ಕಬಳ್ಳಾಪುರ: ಜಿಲ್ಲಾ ಸ್ವೀಪ್ ಸಮಿತಿ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಜಿಲ್ಲಾಡಳಿತ ಭವನದ ಆವರಣದಲ್ಲಿ ಗುರುವಾರ ಕಡ್ಡಾಯ ಮತದಾನ ಜಾಗೃತಿಯ ಭಾಗವಾಗಿ ರಂಗೋಲಿ ಮತ್ತು ಮೆಹೆಂದಿ ಸ್ಪರ್ಧೆ ಏರ್ಪಡಿಸಲಾಗಿತ್ತು.

ಸ್ಪರ್ಧೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸ್ರೀ ಶಕ್ತಿ ಸಂಘದ ಪದಾಧಿಕಾರಿಗಳು ಸೇರಿದಂತೆ ನೂರಾರು ಮಹಿಳೆಯರು ಉತ್ಸಾಹದಿಂದ ಬಣ್ಣ-ಬಣ್ಣದ ಆಕರ್ಷಕವಾದ ಹಾಗೂ ಮತದಾನದ ಸಂದೇಶ ಸಾರುವ ರಂಗೋಲಿಗಳನ್ನು ಬಿಡಿಸಿ ಸಂಭ್ರಮಿಸಿದರು. ಕೈತುಂಬಾ ಮೆಹೆಂದಿ ಹಾಕಿದರು. ರಂಗೋಲಿಗಳನ್ನು ವೀಕ್ಷಿಸಲು ಜಿಲ್ಲಾಡಳಿತ ಭವನದ ಕಚೇರಿಗಳ ಮಹಿಳಾ ಸಿಬ್ಬಂದಿ ಹಾಗೂ ಸಾರ್ವಜನಿಕರು ಉತ್ಸಾಹದಿಂದ ಭಾಗವಹಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಗುರುದತ್ ಹೆಗಡೆ, ‘ಮತದಾನದ ಜಾಗೃತಿ ಮೂಡಿಸುವಲ್ಲಿ ಮಹಿಳೆಯ ಪಾತ್ರ ಮಹತ್ವದ್ದಾಗಿದೆ. ಮಹಿಳೆಯರು ಜಾಗೃತರಾಗಿ ಮತದಾನ ಮಾಡುವ ಇತರರಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸಬೇಕು. ಲೋಕಸಭಾ ಚುನಾವಣೆಯಲ್ಲಿ ಮಹಿಳಾ ಮತದಾರರಿಗೆ ಹೆಚ್ಚಿನ ಆಧ್ಯತೆ ನೀಡಲು 30 ಸಖಿ ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದೆ’ ಎಂದು ಹೇಳಿದರು.

‘ದೇಶದ ಉತ್ತಮ ಆಡಳಿತ ಮತ್ತು ಅಭಿವೃದ್ಧಿ ನಮ್ಮ ನಿಮ್ಮೆಲ್ಲರ ಕೈಯಲ್ಲಿದೆ. ಹೀಗಾಗಿ ಪ್ರತಿಯೊಬ್ಬ ಮಹಿಳೆಯರು ಮನೆಮನೆಗೆ ತೆರಳಿ ನಿಸ್ಪಕ್ಷಪಾತವಾಗಿ ಮತ ಚಲಾಯಿಸುವಂತೆ ಜಾಗೃತಿ ಮೂಡಿಸಬೇಕು. ಯಾವುದೇ ಆಮಿಷಗಳಿಗೆ ಒಳಗಾಗದೇ ನೈತಿಕವಾಗಿ ಮತ ಚಲಾಯಿಸಬೇಕು’ ಎಂದು ತಿಳಿಸಿದರು.

ಸ್ಪರ್ಧೆಯಲ್ಲಿ ಸುಮಾರು 600ಕ್ಕೂ ಹೆಚ್ಚು ಯುವತಿಯರು ಹಾಗೂ ಮಹಿಳೆಯರು ಭಾಗವಹಿಸಿದ್ದರು. ರಂಗೋಲಿ ಮತ್ತು ಮೆಹೆಂದಿ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಯಿತು. ಬಳಿಕ ಮತದಾರರ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.

ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಮಾಧವರಾಮ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸಂಜೀವಪ್ಪ, ಸ್ವೀಪ್ ಸಮಿತಿಯ ಸದಸ್ಯರಾದ ಮುನಿರಾಜು, ಸತೀಶ್ ಕುಮಾರ್ ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !