ಏ.18 ರಂದು ಸಾರ್ವತ್ರಿಕ ರಜೆ

ಶುಕ್ರವಾರ, ಏಪ್ರಿಲ್ 26, 2019
21 °C
ಲೋಕಸಭೆ ಚುನಾವಣೆ ಮತದಾನಕ್ಕೆ ಮತದಾರರಿಗೆ ಅನುಕೂಲ ಕಲ್ಪಿಸಲು ಕ್ರಮ

ಏ.18 ರಂದು ಸಾರ್ವತ್ರಿಕ ರಜೆ

Published:
Updated:

ಚಿಕ್ಕಬಳ್ಳಾಪುರ: ‘ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನದ ದಿನವಾದ ಏಪ್ರಿಲ್ 18 ರಂದು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಿಸಿಲಾಗಿದೆ’ ಎಂದು ಜಿಲ್ಲಾ ಚುನಾವಣಾಧಿಕಾರಿ ಅನಿರುದ್ಧ್ ಶ್ರವಣ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಏ.18 ರಂದು ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರ ವ್ಯಾಪ್ತಿಯಲ್ಲಿರುವ ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳಿಗೆ, ಶಾಲಾ ಕಾಲೇಜುಗಳಿಗೆ (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ) ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಿಗೆ ಈ ರಜೆ ಅನ್ವಯವಾಗಲಿದೆ’ ಎಂದು ಹೇಳಿದರು.

‘ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಅರ್ಹ ಮತದಾರರು ಕೆಲಸ ಮಾಡುವ ಎಲ್ಲಾ ವ್ಯವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಮತ್ತು ಇನ್ನಿತರ ಸಂಸ್ಥೆಗಳಲ್ಲಿ ಕಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಪ್ರಜಾಪ್ರತಿನಿಧಿ ಕಾಯ್ದೆ 1951 ಕಲಂ 135 ಬಿ ಅಡಿಯಲ್ಲಿನ ಎಲ್ಲಾ ಉಪಬಂಧಗಳಿಗೆ ಒಳಪಟ್ಟು ವೇತನ ಸಹಿತ ರಜೆ ನೀಡಲು ಈ ಮೂಲಕ ಆದೇಶಿಸಲಾಗಿದೆ’ ಎಂದರು.

‘ಈ ರಜೆಯು ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ. ಆದರೂ ಸಹ ತುರ್ತು ಸೇವೆಯಡಿ ಕೆಲಸ ಮಾಡುವ ನೌಕರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ವ್ಯವಸ್ಥೆ ಮಾಡಲಾಗುವುದು’ ಎಂದು ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !