ಕೋಮುವಾದಿ ಪಕ್ಷ ಅಧಿಕಾರಕ್ಕೆ ತರಬೇಡಿ

ಬುಧವಾರ, ಏಪ್ರಿಲ್ 24, 2019
31 °C

ಕೋಮುವಾದಿ ಪಕ್ಷ ಅಧಿಕಾರಕ್ಕೆ ತರಬೇಡಿ

Published:
Updated:
Prajavani

ಶಿಡ್ಲಘಟ್ಟ: ರಾಜ್ಯದಲ್ಲಿ ಕೋಮುವಾದಿ ಪಕ್ಷವನ್ನು ಅಧಿಕಾರಕ್ಕೆ ತರಬಾರದು ಎಂಬ ಉದ್ದೇಶದಿಂದ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಸರ್ಕಾರ ಆಡಳಿತ ನಡೆಸುತ್ತಿದೆ. ಅದೇ ಕಾರಣದಿಂದ ಮೈತ್ರಿ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ ಅವರನ್ನು ಬೆಂಬಲಿಸಲಾಗುವುದು ಎಂದು ಜೆಡಿಎಸ್ ಮುಖಂಡ ಬಿ.ಎನ್.ರವಿಕುಮಾರ್ ತಿಳಿಸಿದರು.

ತಾಲ್ಲೂಕಿನ ವೈ.ಹುಣಸೇನಹಳ್ಳಿ ಗ್ರಾಮದಲ್ಲಿ ಗುರುವಾರ ಕೆ.ಎಚ್‌.ಮುನಿಯಪ್ಪ ಪರ ಹೋಬಳಿ ಮಟ್ಟದ ಜೆಡಿಎಸ್ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹಾಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಆದೇಶ ಪಾಲಿಸುವುದು ಪಕ್ಷದ ಎಲ್ಲರ ಕರ್ತವ್ಯವಾಗಿದೆ. ಕಳೆದ 20 ವರ್ಷಗಳಿಂದ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ವಿರೋಧಿಸಿಕೊಂಡು ರಾಜಕೀಯ ಮಾಡಿದ ನಾವುಗಳು ಇದೀಗ ರಾಜ್ಯ ಹಾಗೂ ರಾಷ್ಟ್ರದ ಜನಹಿತವನ್ನು ಉದ್ದೇಶವಾಗಿ ಇಟ್ಟುಕೊಂಡು ಮೈತ್ರಿ ಅಭ್ಯರ್ಥಿಗೆ ಬೆಂಬಲಿಸುವ ಮೂಲಕ ಮೈತ್ರಿ ಸರ್ಕಾರದ ಉಳಿವಿಗೆ ಶ್ರಮಿಸಬೇಕು ಎಂದು ಮನವಿ ಮಾಡಿದರು.

ಅಭ್ಯರ್ಥಿ ಕೆ.ಎಚ್.ಮುನಿಯಪ್ಪ, ಮೈತ್ರಿ ಸರ್ಕಾರದ ಮುಖ್ಯಮಂತ್ರಿ ರಾಜ್ಯದ ಸಮಸ್ತ ರೈತರ ಕಣ್ಣೀರು ಒರೆಸುವ ಕೆಲಸ ಮಾಡುತ್ತಿದ್ದಾರೆ.

ಮೂಲತಃ ನಾನು ಕಾಂಗ್ರೆಸ್ ಅಭ್ಯರ್ಥಿಯಾದರೂ ಈ ಭಾರಿಯ ಚುನಾವಣೆಯಲ್ಲಿ ನನಗೆ ಜೆಡಿಎಸ್ ಕಾರ್ಯಕರ್ತರು ಮತನೀಡುವುದರಿಂದ ಮುಂದಿನ ದಿನಗಳಲ್ಲಿ ಕ್ಷೇತ್ರದ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರನ್ನು ತಮ್ಮ ಎರಡು ಕಣ್ಣುಗಳಂತೆ ನೋಡಿಕೊಳ್ಳುತ್ತೇನೆ ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯ ಬಂಕ್ ಮುನಿಯಪ್ಪ ಮಾತನಾಡಿ, ‘ನಾವು ಕಾಂಗ್ರೆಸ್‌ಗೆ ಮತ ನೀಡುತ್ತಿಲ್ಲ. ಸಮ್ಮಿಶ್ರ ಸರ್ಕಾರದ ಮೈತ್ರಿ ಅಭ್ಯರ್ಥಿಗೆ ಮತ ಕೊಡುತ್ತಿದ್ದೇವೆ. ರವಿಕುಮಾರ್, ದೇವೇಗೌಡ, ಕುಮಾರಸ್ವಾಮಿ ಅವರಿಗೋಸ್ಕರ ಮತ ನೀಡುತ್ತೇವೆ. ಕ್ಷೇತ್ರದಲ್ಲಿ 60 ಸಾವಿರಕ್ಕೂ ಹೆಚ್ಚು ಮತಗಳನ್ನು ನೀಡುವ ಮೂಲಕ ಪಕ್ಷದ ವರಿಷ್ಠರಿಗೆ ಗೌರವ ತರುವ ಕೆಲಸವನ್ನು ಕಾರ್ಯಕರ್ತರ ಮಾಡಬೇಕಾಗಿದೆ ಎಂದರು.

ತಾಲ್ಲೂಕಿನ ಸಾದಲಿ, ಬಶೆಟ್ಟಹಳ್ಳಿ, ಜಂಗಮಕೋಟೆ, ಕಸಬಾಹೋಬಳಿ ಸೇರಿದಂತೆ ಶಿಡ್ಲಘಟ್ಟ ಪಟ್ಟಣದಲ್ಲಿ ಚುನಾವಣೆ ಪ್ರಚಾರ ಸಭೆ ನಡೆಸಲಾಯಿತು.

ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಡಿ.ಬಿ.ವೆಂಕಟೇಶ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬಿ.ವಿ.ನಾರಾಯಣಸ್ವಾಮಿ, ಮಾಜಿ ಶಾಸಕಿ ಅನಸೂಯಮ್ಮ, ಮುಖಂಡರಾದ ಪಿ.ವಿ.ನಾಗರಾಜ್, ಹುಜಗೂರು ರಾಮಯ್ಯ, ನಂದನವನಂ ಶ್ರೀರಾಮರೆಡ್ಡಿ, ಮುಗಿಲಡಿಪಿ ನಂಜಪ್ಪ, ಸಿ.ಎಂ.ಗೋಪಾಲ್ ಭಾಗವಹಿಸಿದ್ದರು.

**

“ಕಳೆದ ಎರಡು ದಿಗಳಿಂದ ರಾಜ್ಯದ ಮಂಡ್ಯ, ಹಾಸನ, ರಾಮನಗರ, ಸೇರಿದಂತೆ ಚಾಮರಾಜನಗರ ಕ್ಷೇತ್ರಗಳಲ್ಲಿ ಚುನಾವಣೆ ಪ್ರಚಾರ ನಡೆಸಿದಾಗ ಅಲ್ಲಿ ಕಂಡು ಬಂದ ವಾಸ್ತವ ಸ್ಥಿತಿಗೂ ದೃಶ್ಯ ಮಾಧ್ಯಮಗಳಲ್ಲಿ ತೋರಿಸುತ್ತಿರುವ ಸ್ಥಿತಿಗೂ ಭಾರಿ ವ್ಯತ್ಯಾಸವಿದೆ. ಮಂಡ್ಯ, ಹಾಸನ ಹಾಗೂ ತುಮಕೂರಿನಲ್ಲಿ ಜೆಡಿಎಸ್ ಅಭ್ಯರ್ಥಿಗಳು ಗೆಲುವು ಸಾಧಿಸುವುದು ಶತಸಿದ್ದ”

–ಕೆ.ಎಚ್.ಮುನಿಯಪ್ಪ, ಸಂಸದ

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !