ಜಾತ್ಯತೀತ ಪಕ್ಷಕ್ಕೆ ದೇಶದ ಅಧಿಕಾರ

ಮಂಗಳವಾರ, ಏಪ್ರಿಲ್ 23, 2019
31 °C

ಜಾತ್ಯತೀತ ಪಕ್ಷಕ್ಕೆ ದೇಶದ ಅಧಿಕಾರ

Published:
Updated:

ಚಿಂತಾಮಣಿ: ದೇಶದಲ್ಲಿ ಜಾತ್ಯತೀತ ಪಕ್ಷಗಳೆಲ್ಲಾ ಒಂದಾಗಿ ಅಧಿಕಾರ ಹಿಡಿಯಲಿವೆ, ರಾಹುಲ್ ಗಾಂಧಿ ಪ್ರಧಾನ ಮಂತ್ರಿಯಾಗುತ್ತಾರೆ ಎಂದು ಕೋಲಾರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ ಭರವಸೆ ವ್ಯಕ್ತಪಡಿಸಿದರು.

ತಾಲ್ಲೂಕಿನ ಕೆಂಚಾರ್ಲಹಳ್ಳಿ ಗ್ರಾಮದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು.
ಕೇಂದ್ರ ಸರ್ಕಾರ 5 ವರ್ಷಗಳಲ್ಲಿ ಯಾವುದೇ ಅಭಿವೃದ್ಧಿಯನ್ನು ಸಾಧಿಸಿಲ್ಲ. ಅಲ್ಪಸಂಖ್ಯಾತರು ಮತ್ತು ದಲಿತರ ಮೇಲೆ ಹಲ್ಲೆ, ಹತ್ಯಾಚಾರಗಳು ನಡೆದಿವೆ. ಬಿಜೆಪಿ ಕೋಮುವಾದಿ ಪಕ್ಷವಾಗಿದ್ದು ದೇಶದಲ್ಲಿ ಅಶಾಂತಿಗೆ ಕಾರಣವಾಗಿದೆ. ಜನರು ಶಾಂತಿ, ನೆಮ್ಮದಿಯಿಂದ ಬಾಳ ಬೇಕಾದರೆ ಬಿಜೆಪಿಯನ್ನು ತೊಲಗಿಸಿ ಜ್ಯಾತ್ಯತೀತ ಪಕ್ಷಗಳನ್ನು ಅಧಿಕಾರಕ್ಕೆ ತರಬೇಕು ಎಂದರು.

ಶಾಸಕ ಎಂ.ಕೃಷ್ಣಾರೆಡ್ಡಿ ಮಾತನಾಡಿ, ಕ್ಷೇತ್ರದಲ್ಲಿ ಎಲ್ಲ ಸಮುದಾಯಗಳನ್ನು ಸಮಾನವಾಗಿ ಕಾಣುವ ಕೆ.ಎಚ್.ಮುನಿಯಪ್ಪ ತಮ್ಮ ಅಧಿಕಾರಾವಧಿಯಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಈ ಬಾರಿಯೂ ಜಯ ಗಳಿಸುವ ವಿಶ್ವಾಸವಿದೆ ಎಂದರು.

ಮುಖಂಡರಾದ ನಂದನವನ ಶ್ರೀರಾಮರೆಡ್ಡಿ, ವಾಣಿ ಕೃಷ್ಣಾರೆಡ್ಡಿ ಮಾತನಾಡಿದರು. ರಾಯಲ್ ರಾಮಕೃಷ್ಣಾರೆಡ್ಡಿ, ಗ್ಯಾಸ್ ಶ್ರೀನಿವಾಸ್, ವೀರಪ್ಪರೆಡ್ಡಿ, ಅಥಾವುಲ್ಲಾ ಭಾಗವಹಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !