ವಿಶ್ವವಿದ್ಯಾನಿಲಯ ಉನ್ನತ ಮಟ್ಟಕ್ಕೆ ಬೆಳೆಯಲಿ

ಭಾನುವಾರ, ಏಪ್ರಿಲ್ 21, 2019
32 °C

ವಿಶ್ವವಿದ್ಯಾನಿಲಯ ಉನ್ನತ ಮಟ್ಟಕ್ಕೆ ಬೆಳೆಯಲಿ

Published:
Updated:
Prajavani

ಮೈಸೂರು: ಶೈಕ್ಷಣಿಕವಾಗಿ ಮೈಸೂರು ವಿಶ್ವವಿದ್ಯಾನಿಲಯವನ್ನು ಇನ್ನು ಉನ್ನತ ಮಟ್ಟಕ್ಕೆ ಬೆಳೆಸಬೇಕು ಎಂದು ಪ್ರೊ.ಪಿ.ವೆಂಕರಾಮಯ್ಯ ಆಶಯ ವ್ಯಕ್ತಪಡಿಸಿದರು.

ಮಾನಸಂಗಂಗೋತ್ರಿಯ ರಾಣಿ ಬಹದ್ದೂರ್‌ ಸಭಾಂಗಣದಲ್ಲಿ ಮೈಸೂರು ವಿಶ್ವವಿದ್ಯಾನಿಲಯ ಹಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಗುರುವಾರ ನಡೆದ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಉತ್ತಮ ಆಡಳಿತಗಾರರಾಗಿ ಧೈರ್ಯ ಸಾಹಸದಿಂದ  ಸಾಧನೆಯ ಹಾದಿಯನ್ನು ನಮಗೆ ತೋರಿಸಿಕೊಟ್ಟವರು ಪ್ರೊ.ಕೆ.ಎಸ್‌.ರಂಗಪ್ಪ ಅವರು. ಇಂದು ಮೈಸೂರು ವಿಶ್ವವಿದ್ಯಾನಿಲಯದ ಮೂರು ನಕ್ಷತ್ರಗಳಿಗೆ ಸನ್ಮಾನ ಮಾಡುತ್ತಿರುವುದು ಸಂತೋಷದ ವಿಷಯ ಎಂದು ತಿಳಿಸಿದರು.

ಪ್ರತಿಯೊಬ್ಬರು ಅವರದೆಯಾದ ಕ್ಷೇತ್ರದಲ್ಲಿ ಸಾಧನೆಯನ್ನು ಮಾಡಿದ್ದು ಇಂದು ಮೈಸೂರು ವಿಶ್ವವಿದ್ಯಾನಿಲಯವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುವಲ್ಲಿ ಪ್ರಮುಖವಾಗಿದ್ದಾರೆ ಎಂದು ಹೇಳಿದರು.

ಪ್ರೊ.ಕೆ.ಎಸ್‌. ರಂಗಪ್ಪ ಅವರು 103ನೇಯ ಭಾರತೀಯ ಸೈನ್ಸ್‌ ಕಾಂಗ್ರೆಸ್‌ ಸಮ್ಮೇಳನವನ್ನು ನಡೆಸಿ ನಮ್ಮ ವಿಶ್ವವಿದ್ಯಾಲಯವನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಪರಿಚಯಿಸಿದರು. ಹಾಗೆಯೇ 107ನೇಯ  ಭಾರತೀಯ ಸೈನ್ಸ್ ಕಾಂಗ್ರೆಸ್ ಜನರಲ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವುದು ಹೆಮ್ಮೆಯ ವಿಚಾರ ಎಂದು  ಪ್ರೊ.ಎಸ್‌.ಎನ್‌.ಹೆಗ್ಡೆ ತಿಳಿಸಿದರು

ಪ್ರೊ.ಜಿ. ಹೇಮಂತಕುಮಾರ್‌ ಮಾತನಾಡಿ  ಸತತ ಪ್ರಯತ್ನದಿಂದ ಯಶಸ್ಸು ಖಂಡಿತ ಸಿಗುತ್ತದೆ. ಶ್ರಮ ವಿದ್ದರೆ ಪ್ರತಿಫಲ ಸಿಕ್ಕೆ ಸಿಗುತ್ತದೆ. ಶೈಕ್ಷಣಿಕವಾಗಿ ನಮ್ಮ ವಿಶ್ವವಿದ್ಯಾನಿಲಯವನ್ನು ಇನ್ನು ಎತ್ತರಕ್ಕೆ ಬೆಳಸಲು ನಾನು ಶ್ರಮಿಸುತ್ತೇನೆ ಎಂದು ತಿಳಿಸಿದರು.

ಮೈಸೂರು ವಿಶ್ವವಿದ್ಯಾನಿಲಯದ ಹಿರಿಯ ವಿದ್ಯಾರ್ಥಿಗಳ ಸಂಘದ ಉಪಾಧ್ಯಕ್ಷೆ ಪ್ರೊ.ಎಚ್‌.ಎಂ.ವಸಂತಮ್ಮ, ಕುಲಸಚಿವರದ ಪ್ರೊ.ಲಿಂಗರಾಜ ಗಾಂಧಿ, ಮೈಸೂರು ವಿಶ್ವವಿದ್ಯಾನಿಲಯ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಪ್ರೊ. ವಸಂತ ಕುಮಾರ್‌ ತಿಮ್ಮಕಾಪುರ, ಮೈಸೂರು ವಿಶ್ವವಿದ್ಯಾನಿಲಯದ ಹಿರಿಯ ವಿದ್ಯಾರ್ಥಿಗಳ ಸಂಘದ ಕಾರ್ಯದರ್ಶಿ ಪ್ರೊ. ಎಸ್. ಉಮೇಶ್‌, ಪ್ರೊ.ನಾಗಣ್ಣ ಇದ್ದರು.
 

 

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !