ನೈತಿಕ ಮತದಾನ ಇಂದಿನ ಅಗತ್ಯ

ಬುಧವಾರ, ಏಪ್ರಿಲ್ 24, 2019
27 °C
ಮತದಾನ ಜಾಗೃತಿಗಾಗಿ ಜಿಲ್ಲಾ ಸ್ವೀಪ್‌ ಸಮಿತಿ ವತಿಯಿಂದ ನಗರದಲ್ಲಿ ಕಾಲ್ನಡಿಗೆ ಜಾಥಾ

ನೈತಿಕ ಮತದಾನ ಇಂದಿನ ಅಗತ್ಯ

Published:
Updated:
Prajavani

ಚಿಕ್ಕಬಳ್ಳಾಪುರ: ಮತದಾನ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ಸ್ವೀಪ್‌ ಸಮಿತಿ ವತಿಯಿಂದ ನಗರದಲ್ಲಿ ಶುಕ್ರವಾರ ಕಾಲ್ನಡಿಗೆ ಜಾಥಾ ಆಯೋಜಿಸಲಾಗಿತ್ತು.

ನಗರದ ಎಂ.ಜಿ.ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಳಿ ಜಿಲ್ಲಾ ಸ್ವೀಪ್‌ ಸಮಿತಿ ಅಧ್ಯಕ್ಷ ಗುರುದತ್ ಹೆಗಡೆ ಅವರು ಜಾಥಾಗೆ ಚಾಲನೆ ನೀಡಿದರು. ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿದ ಜಾಥಾ ಬಿ.ಬಿ.ರಸ್ತೆಯಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜು ಬಳಿ ಸಮಾಪ್ತಿಯಾಯಿತು. ನಂತರ ಮತದಾನದ ಬಗ್ಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು.

ಈ ವೇಳೆ ಮಾತನಾಡಿದ ಗುರುದತ್‌ ಹೆಗಡೆ, ‘ಪ್ರಜಾಪ್ರಭುತ್ವದ ಆಶಯದಂತೆ ಉತ್ತಮ ಸರ್ಕಾರ ರಚನೆಯಾಗಬೇಕಾದರೆ ಪ್ರತಿಯೊಬ್ಬರೂ ಕಡ್ಡಾಯವಾಗಿ ನೈತಿಕ ಮತದಾನ ಮಾಡುವ ಅಗತ್ಯವಿದೆ. ಮತದಾರರು ಯಾವುದೇ ಆಮಿಷಕ್ಕೆ ಒಳಗಾಗದೇ ಅರ್ಹ ಅಭ್ಯರ್ಥಿಗೆ ಮತ ಚಲಾಯಿಸಬೇಕು’ ಎಂದು ಹೇಳಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸಂಜೀವಪ್ಪ, ನಗರಸಭೆ ಆಯುಕ್ತ ಉಮಾಕಾಂತ್, ಜಿಲ್ಲಾ ಸ್ವೀಪ್ ಸಮಿತಿಯ ಸದಸ್ಯರಾದ ಮುನಿರಾಜು, ರವಿಕುಮಾರ್, ಸತೀಶ್ ಕುಮಾರ್ ಭಾಗವಹಿಸಿದ್ದರು.

ಟೋಕನ್‌ ನೀಡಿದರೆ ಕಠಿಣ ಕ್ರಮ

ಚಿಕ್ಕಬಳ್ಳಾಪುರ: ಲೋಕಸಭೆ ಚುನಾವಣೆಯಲ್ಲಿ ಮತ ಪಡೆಯುವ ಉದ್ದೇಶದಿಂದ ವಿವಿಧ ರಾಜಕೀಯ ಪಕ್ಷಗಳು ಹಾಗೂ ಪಕ್ಷೇತರ ಅಭ್ಯರ್ಥಿಗಳು, ಕಾರ್ಯಕರ್ತರು ಮತದಾರರಿಗೆ ಆಮಿಷ ಒಡ್ಡುವ ನೆಪದಲ್ಲಿ ಹೋಟೆಲ್‌, ದಿನಸಿ ಅಂಗಡಿ, ಬಂಕ್‌ಗಳಲ್ಲಿ ಉಚಿತ ಟೋಕನ್‌ ನೀಡುವುದು ತಿಳಿದು ಬಂದಿದೆ.

ನಿಸ್ಪಕ್ಷಪಾತವಾಗಿ ಚುನಾವಣೆ ನಡೆಸಲು ಸಾರ್ವಜನಿಕರು ಜಿಲ್ಲಾಡಳಿತದೊಂದಿಗೆ ಕೈಜೋಡಿಸಬೇಕು. ಇಂತಹ ಅಕ್ರಮಗಳು ಕಂಡುಬಂದಲ್ಲಿ ಸಾರ್ವಜನಿಕರು ಚುನಾವಣಾ ಸಹಾಯವಾಣಿ 08156-1950 ಗೆ ಕರೆ ಮಾಡಿ ದೂರು ದಾಖಲಿಸಬೇಕು. ಉಚಿತ ಟೋಕನ್‌ಗಳನ್ನು ನೀಡಿದವರು ಮತ್ತು ಅವುಗಳನ್ನು ಪಡೆಯುವ ವರ್ತಕರ ವಿರುದ್ಧ ಕಾನೂರು ರೀತಿ ಕಠಿಣ ಕ್ರಮ ಜರುಗಿಸಲಾಗುತ್ತದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !