ಎಲ್ಲೆಡೆ ರಾಮ ನಾಮ ಜಪ

ಶುಕ್ರವಾರ, ಏಪ್ರಿಲ್ 26, 2019
22 °C
ಜಿಲ್ಲೆಯಾದ್ಯಂತ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಧಾರ್ಮಿಕ ಕೈಂಕರ್ಯಗಳ ಆಚರಣೆ

ಎಲ್ಲೆಡೆ ರಾಮ ನಾಮ ಜಪ

Published:
Updated:
Prajavani

ಚಿಕ್ಕಬಳ್ಳಾಪುರ: ಜಿಲ್ಲೆಯಾದ್ಯಂತ ಶನಿವಾರ ಜನರು ಶ್ರದ್ಧಾಭಕ್ತಿಯಿಂದ ರಾಮನವಮಿ ಆಚರಿಸಿದರು. ದೇಗುಲಗಳಲ್ಲಿ ವಿಶೇಷ ಅಲಂಕಾರ ಮಾಡುವ ಜತೆಗೆ ಅಭಿಷೇಕ, ಪೂಜೆಗಳನ್ನು ನೆರವೇರಿಸಲಾಯಿತು.

ನಗರದ ಬಜಾರ್ ರಸ್ತೆಯಲ್ಲಿರುವ ಕೋದಂಡರಾಮಸ್ವಾಮಿ ದೇವಾಲಯ, ಕಂದವಾರಪೇಟೆಯ ಲಕ್ಷ್ಮಿವೆಂಕಟರಮಣಸ್ವಾಮಿ ಮತ್ತು ರಂಗಸ್ಥಳದ ರಂಗನಾಥ ಸ್ವಾಮಿ ದೇವಾಲಯ, ಸೇರಿದಂತೆ ಅನೇಕ ಕಡೆಗಳಲ್ಲಿ ರಾಮನವಮಿ ಪ್ರಯುಕ್ತ ವಿವಿಧ ಧಾರ್ಮಿಕ ಕೈಂಕರ್ಯಗಳು ಜರುಗಿದವು.

ಬಿ.ಬಿ.ರಸ್ತೆ, ಎಂ.ಜಿ.ರಸ್ತೆ, ಗಂಗಮ್ಮನಗುಡಿ ರಸ್ತೆ, ಪ್ರಶಾಂತ್ ನಗರ, ಭುವನೇಶ್ವರಿ ವೃತ್ತ, ಸೇರಿದಂತೆ ನಗರದ ಪ್ರಮುಖ ರಸ್ತೆಗಳಲ್ಲಿ ರಾಮನ ಭಕ್ತರು ಸಾರ್ವಜನಿಕರಿಗೆ ಪಾನಕ, ಕೋಸಂಬರಿ ಮತ್ತು ಮಜ್ಜಿಗೆ ವಿತರಿಸಿದರು.

ನಗರದ ಹೊರವಲಯದ ವೀರಾಂಜನೇಯಸ್ವಾಮಿ ದೇವಾಲಯದಲ್ಲಿಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಅವರು ಆಂಜನೇಯಸ್ವಾಮಿಗೆ ವಿಶೇಷ ಪೂಜೆ, ಅಭಿಷೇಕ, ಹೋಮ ಸೇರಿದಂತೆ ವಿವಿಧ ಧಾಋಬಳಿಕ ದೇವಾಲಯದ ಮುಂಭಾಗ ಭಕ್ತಾಧಿಗಳಿಗೆ ಅನ್ನಸಂತರ್ಪಣೆ, ಮಜ್ಜಿಗೆ ಪಾನಕ, ಕೋಸಂಬರಿಯನ್ನು ವಿತರಿಸಿದರು.

ನಗರದ ಎಚ್‍ಎಸ್ ಗಾರ್ಡನ್‌ನಲ್ಲಿರುವ ಅಭಯಾಂಜನೇಯ ಸ್ವಾಮಿ ದೇವಾಲಯದಲ್ಲಿ ರಾಮನವಮಿ ಪ್ರಯುಕ್ತ ಆಂಜನೇಯ ದೇವರಿಗೆ ವಿಶೇಷವಾಗಿ ಹಣ್ಣಿನಿಂದ ಅಲಂಕಾರ ಮಾಡಲಾಗಿತ್ತು. ವೀರಾಂಜನೇಯಸ್ವಾಮಿ ದೇವಾಲಯಕ್ಕೆ ಮೈತ್ರಿ ಅಭ್ಯರ್ಥಿ, ಸಂಸದ ಎಂ.ವೀರಪ್ಪ ಮೊಯಿಲಿ, ಶಾಸಕ ಡಾ.ಕೆ.ಸುಧಾಕರ್ ಸೇರಿದಂತೆ ಅನೇಕ ಗಣ್ಯರು ಭೇಟಿ ನೀಡಿ ದರ್ಶನ ಪಡೆದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !