ಮತದಾನ ಜಾಗೃತಿಗೆ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ ಆಯೋಜನೆ

ಗುರುವಾರ , ಏಪ್ರಿಲ್ 25, 2019
21 °C
‘ಮತದಾನದ ಹಕ್ಕು ತಪ್ಪದೆ ಚಲಾಯಿಸಿ’

ಮತದಾನ ಜಾಗೃತಿಗೆ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ ಆಯೋಜನೆ

Published:
Updated:
Prajavani

ಚಿಕ್ಕಬಳ್ಳಾಪುರ: ‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಲಾಗಿದೆ. ಹಾಗಾಗಿ ಸಂವಿಧಾನದತ್ತವಾದ ಮತದಾನದ ಹಕ್ಕನ್ನು ತಪ್ಪದೇ ಪ್ರತಿಯೊಬ್ಬರೂ ಚಲಾಯಿಸಬೇಕು’ ಎಂದು ಉಪವಿಭಾಗಧಿಕಾರಿ ಬಿ.ಶಿವಸ್ವಾಮಿ ತಿಳಿಸಿದರು.

ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಮತದಾನದ ಅರಿವು ಮೂಡಿಸುವ ಉದ್ದೇಶದಿಂದ ಜಿಲ್ಲಾ ಸ್ವೀಪ್ ಸಮಿತಿ, ಯುವ ಜನ ಸೇವಾ ಮತ್ತು ಕ್ರೀಡಾ ಇಲಾಖೆ ಆಶ್ರಯದಲ್ಲಿ ಶನಿವಾರ ಆಯೋಜಿಸಿದ್ದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

‘ಏಪ್ರಿಲ್ 18 ರಂದು ನಡೆಯುವ ಲೋಕಸಭಾ ಚುನಾವಣೆಯ ಮತದಾನದಲ್ಲಿ ಮತದಾರರು ಹಣದ ಆಮಿಷ, ಜಾತಿ ಧರ್ಮಕ್ಕೆ ಕಟ್ಟುಬೀಳದೆ ಯೋಗ್ಯ ಅಭ್ಯರ್ಥಿಗೆ ನೈತಿಕವಾಗಿ ಮತ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸಬೇಕು’ ಎಂದು ಹೇಳಿದರು.

ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಸಂಜೀವಪ್ಪ ಅವರು ಸ್ಪರ್ಧಾಳುಗಳಿಗೆ ಮತ್ತು ಸಾರ್ವಜನಿಕರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಸ್ವೀಪ್‌ ಸಮಿತಿ ಸದಸ್ಯರಾದ ಮುನಿರಾಜು, ಯುವ ಜನ ಸೇವಾ ಮತ್ತು ಕ್ರೀಡಾ ಇಲಾಖೆ ಉಪ ನಿರ್ದೇಶಕ ರುದ್ರಪ್ಪ ಉಪಸ್ಥಿತರಿದ್ದರು. ಈ ಪಂದ್ಯಾವಳಿ ಭಾನುವಾರ ಸಹ ನಡೆಯಲಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !