ಚಿಕ್ಕಬಳ್ಳಾಪುರ–ಗೌರಿಬಿದನೂರು ಮಾರ್ಗದಲ್ಲಿ ಉರುಳಿದ ಬಸ್‌, ಪ್ರಯಾಣಿಕರು ಪಾರು

ಶನಿವಾರ, ಏಪ್ರಿಲ್ 20, 2019
32 °C

ಚಿಕ್ಕಬಳ್ಳಾಪುರ–ಗೌರಿಬಿದನೂರು ಮಾರ್ಗದಲ್ಲಿ ಉರುಳಿದ ಬಸ್‌, ಪ್ರಯಾಣಿಕರು ಪಾರು

Published:
Updated:
Prajavani

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ–ಗೌರಿಬಿದನೂರು ಮಾರ್ಗದ ಕಣಿವೆ ಪ್ರದೇಶದಲ್ಲಿ ಶನಿವಾರ ಬೆಳಿಗ್ಗೆ ಕೆಎಸ್‌ಆರ್‌ಟಿಸಿ ಬಸ್‌ ತಿರುವಿನಲ್ಲಿ ಉರುಳಿ ಬಿದ್ದಿದ್ದು, ಅದೃಷ್ಟವಶಾತ್‌ ಬಸ್‌ನಲ್ಲಿದ್ದ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.

ಬಸ್‌ ಚಿಂತಾಮಣಿಯಿಂದ ಪಾವಗಡದತ್ತ ಹೋಗುತ್ತಿತ್ತು ಎನ್ನಲಾಗಿದೆ. ಕಣಿವೆ ಪ್ರದೇಶದಲ್ಲಿ ತಿರುವು ಒಂದರಲ್ಲಿ ಚಾಲಕ ನಿಯಂತ್ರಣ ಕಳೆದುಕೊಂಡ ಬಸ್‌ ರಸ್ತೆಯಲ್ಲಿ ಉರುಳಿ ಬಿದ್ದಿದೆ. ಈ ವೇಳೆ ಬಸ್‌ನಲ್ಲಿ ಸುಮಾರು 12 ಪ್ರಯಾಣಿಕರು ಇದ್ದರು. ಅವರೆಲ್ಲ ಗಾಯ, ಪ್ರಾಣಹಾನಿ ಇಲ್ಲದೆ ಬಚಾವಾಗಿದ್ದಾರೆ. ಈ ಬಗ್ಗೆ ದೂರು ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !