ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣ: ಏಳು ಆರೋಪಿಗಳ ಬಂಧನ

ಶುಕ್ರವಾರ, ಏಪ್ರಿಲ್ 26, 2019
35 °C

ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣ: ಏಳು ಆರೋಪಿಗಳ ಬಂಧನ

Published:
Updated:

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮಂಗಳೂರಿನಲ್ಲಿ ಶನಿವಾರ ನಡೆದ ಬಿಜೆಪಿ ಸಮಾವೇಶದಲ್ಲಿ ಪಾಲ್ಗೊಂಡು ಮರಳುತ್ತಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಕುತ್ತಾರ್‌ ಮದನಿನಗರದಲ್ಲಿ ಹಲ್ಲೆ ನಡೆಸಿದ್ದ ಆರೋಪದ ಮೇಲೆ ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

‘ಸಲ್ಮಾನ್‌ ಫಾರಿಶ್‌, ಅರ್ಫಾಜ್‌, ಅಫ್ರಿದಿ, ಮೊಹಮ್ಮದ್ ಹಿಲಾಲ್, ಮೊಹಮ್ಮದ್ ಶಿನಾನ್‌, ಷಮೀಜ್‌ ಮತ್ತು ನೌಫಾಲ್‌ ಬಂಧಿತರು. ಆರೋಪಿಗಳು ಕುಪ್ಪೆಪದವು ಮತ್ತು ಅಡ್ಯಾರ್‌ ಕಣ್ಣೂರು ನಿವಾಸಿಗಳು. ಉಳಿದ ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಮುಂದುವರಿದಿದೆ’ ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಹನುಮಂತರಾಯ ತಿಳಿಸಿದ್ದಾರೆ.

ಸಮಾವೇಶ ಮುಗಿದ ಬಳಿಕ ಬಿಜೆಪಿ ಕಾರ್ಯಕರ್ತರು ತೆರಳುತ್ತಿದ್ದ ಕಾರೊಂದು ಮದನಿನಗರದ ಬಳಿ ಬೈಕ್‌ ಒಂದಕ್ಕೆ ಡಿಕ್ಕಿಯಾಗಿತ್ತು. ಬೈಕ್‌ ಚಲಾಯಿಸುತ್ತಿದ್ದ ಮಹಿಳೆ ಗಾಯಗೊಂಡಿದ್ದರು. ಆ ಬಳಿಕ ಕಾರಿನಲ್ಲಿ ಬಂದಿದ್ದ ಗುಂಪೊಂದು ಅಪಘಾತಕ್ಕೀಡಾದ ಕಾರಿನಲ್ಲಿದ್ದವರ ಮೇಲೆ ಹಲ್ಲೆ ನಡೆಸಿತ್ತು.

ಅಷ್ಟರಲ್ಲಿ ಬಿಜೆಪಿ ಕಾರ್ಯಕರ್ತರಿದ್ದ ಬಸ್‌ ಅಲ್ಲಿಗೆ ಬಂದಿತ್ತು. ಬಸ್ಸಿನಲ್ಲಿದ್ದವರು ಕಾರಿನಲ್ಲಿದ್ದವರ ರಕ್ಷಣೆಗೆ ಧಾವಿಸಿದ್ದರು. ಆಗ ಹಲ್ಲೆ ನಡೆಸಿದವರು ಮತ್ತು ಇತರೆ ಕೆಲವರು ಬಸ್‌ ಮೇಲೆ ಕಲ್ಲು ತೂರಿದ್ದರು. ಆರೋಪಿಗಳು ಬಸ್ಸಿನೊಳಕ್ಕೆ ನುಗ್ಗಿ ಮಹಿಳೆಯರ ಮೇಲೂ ಹಲ್ಲೆ ನಡೆಸಿದ್ದರು ಎಂದು ಉಳ್ಳಾಲ ಪೊಲೀಸ್‌ ಠಾಣೆಗೆ ನೀಡಿದ್ದ ದೂರಿನಲ್ಲಿ ತಿಳಿಸಲಾಗಿದೆ.

ಘಟನೆ ನಡೆದ ಮದನಿನಗರ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ. ಹಿರಿಯ ಪೊಲೀಸ್‌ ಅಧಿಕಾರಿಗಳು ಶನಿವಾರ ರಾತ್ರಿಯಿಂದ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ಆರೋಪಿಗಳ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !