ಕೊಲೆ ಯತ್ನ ಪ್ರಕರಣ: ಆರೋಪಿಯ ಬಂಧನ

ಮಂಗಳವಾರ, ಏಪ್ರಿಲ್ 23, 2019
29 °C

ಕೊಲೆ ಯತ್ನ ಪ್ರಕರಣ: ಆರೋಪಿಯ ಬಂಧನ

Published:
Updated:

ಮಂಗಳೂರು: ನಗರದ ಮಂಗಳೂರು ಗ್ರಾಮಾಂತರ ಪೊಲೀಸ್‌ ಠಾಣೆ ವ್ಯಾಪ್ತಿಯ ಮಲ್ಲೂರಿನ ಉದ್ದಬೆಟ್ಟು ಸಮೀಪ ನಾಲ್ಕು ದಿನಗಳ ಹಿಂದೆ ನಡೆದ ಕೊಲೆ ಯತ್ನ ಪ್ರಕರಣದ ಆರೋಪಿಯೊಬ್ಬನನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಮಲ್ಲೂರು ಉದ್ದಬೆಟ್ಟು ನಿವಾಸಿ ನಿಝಾಮ್ (23) ಬಂಧಿತ ಆರೋಪಿ. ಈ ಪ್ರಕರಣದ ಇನ್ನೊಬ್ಬ ಆರೋಪಿ ಉಳಾಯಿಬೆಟ್ಟು ಅನ್ಸರ್ ಎಂಬಾತ ತಲೆಮರೆಸಿಕೊಂಡಿದ್ದಾನೆ. ಆರೋಪಿಗಳು ನಾಲ್ಕು ದಿನದ ಹಿಂದೆ ಉದ್ದಬೆಟ್ಟು ಸಮೀಪ ದಾವೂದ್‌ ಅಲಿ ಎಂಬುವವರ ಮೇಲೆ ಹಲ್ಲೆ ನಡೆಸಿ, ಕೊಲೆಗೆ ಯತ್ನಿಸಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.

ಪ್ರಕರಣ ದಾಖಲಾಗುತ್ತಿದ್ದಂತೆ ನಿಝಾಮ್‌ ಮತ್ತು ಅನ್ಸರ್‌ ತಲೆಮರೆಸಿಕೊಂಡಿದ್ದರು. ನಿಝಾಮ್ ವಿರುದ್ಧ ಉಳ್ಳಾಲ, ಬಜ್ಪೆ, ಮಂಗಳೂರು ಗ್ರಾಮಾಂತರ ಠಾಣೆಗಳಲ್ಲಿ ಕೊಲೆಯತ್ನ, ದನಕಳವು ಸೇರಿದಂತೆ ಹಲವು ಪ್ರಕರಣಗಳಿವೆ. ನ್ಯಾಯಾಲಯದ ವಿಚಾರಣೆಗೆ ಹಾಜರಾಗದ ಕಾರಣದಿಂದ ಈತನ ಬಂಧನಕ್ಕೆ ವಾರಂಟ್ ಹೊರಡಿಸಲಾಗಿತ್ತು.

ನಿಝಾಮ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಅನ್ಸರ್‌ ಪತ್ತೆಗೆ ಶೋಧ ಮುಂದುವರಿಸಿದ್ದಾರೆ.

ಮಂಗಳೂರು ನಗರ ಪೊಲೀಸ್‌ ಕಮಿಷನರ್ ಸಂದೀಪ್ ಪಾಟೀಲ್, ಡಿಸಿಪಿಗಳಾದ ಹನುಮಂತರಾಯ, ಲಕ್ಷ್ಮೀಗಣೇಶ್, ಮಂಗಳೂರು ದಕ್ಷಿಣ ಎಸಿಪಿ ರಾಮರಾವ್ ಮಾರ್ಗದರ್ಶನದಲ್ಲಿ ಗ್ರಾಮಾಂತರ ಠಾಣೆ ಇನ್‍ಸ್ಪೆಕ್ಟರ್ ಭಜಂತ್ರಿ ಮತ್ತು ತಂಡ ಆರೋಪಿಯನ್ನು ಬಂಧಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !