ವಿದ್ಯುತ್‌ ಕಂಬಕ್ಕೆ ಡಿಕ್ಕಿ:ಬೈಕ್‌ ಸವಾರ ಸಾವು

ಮಂಗಳವಾರ, ಏಪ್ರಿಲ್ 23, 2019
32 °C

ವಿದ್ಯುತ್‌ ಕಂಬಕ್ಕೆ ಡಿಕ್ಕಿ:ಬೈಕ್‌ ಸವಾರ ಸಾವು

Published:
Updated:

ಮಂಗಳೂರು: ಬಜ್ಪೆ ಪೊಲೀಸ್‌ ಠಾಣೆ ವ್ಯಾಪ್ತಿಯ ಕಿನ್ನಿಕಂಬಳದಲ್ಲಿ ಭಾನುವಾರ ಮಧ್ಯಾಹ್ನ ಬೈಕ್‌ ಒಂದು ವಿದ್ಯುತ್‌ ಕಂಬಕ್ಕೆ ಡಿಕ್ಕಿಯಾಗಿದ್ದು, ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಬಾಗಲಕೋಟೆ ಜಿಲ್ಲೆಯವರಾಗಿದ್ದು, ಮಂಗಳೂರಿನಲ್ಲಿ ಕಾರ್ಮಿಕನಾಗಿ ದುಡಿಯುತ್ತಿದ್ದ ಮಹಾಂತೇಶ್‌ (22) ಮೃತ ಯುವಕ. ಕುಲಶೇಖರದಲ್ಲಿ ಬಾಡಿಗೆ ಮನೆಯಲ್ಲಿ ಇವರು ವಾಸಿಸುತ್ತಿದ್ದರು. ಕೆಲವು ತಿಂಗಳಿನಿಂದ ಅಲ್ಲಿಯೇ ಕೂಲಿ ಕೆಲಸಕ್ಕೆ ಹೋಗುತ್ತಿದ್ದರು.

ಭಾನುವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಬೈಕ್‌ನಲ್ಲಿ ಕೈಕಂಬದಿಂದ ಬಜ್ಪೆ ಮಾರ್ಗವಾಗಿ ಹೋಗುತ್ತಿದ್ದರು. ಕಿನ್ನಿಕಂಬಳ ಶಾಲೆ ಸಮೀಪ ಸವಾರನ ನಿಯಂತ್ರಣ ಕಳೆದುಕೊಂಡ ಬೈಕ್‌ ರಸ್ತೆ ಬದಿಯಲ್ಲಿದ್ದ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದಿದೆ. ತೀವ್ರವಾಗಿ ಗಾಯಗೊಂಡಿದ್ದ ಮಹಾಂತೇಶ್‌ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಬಜ್ಪೆ ಪೊಲೀಸ್‌ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 1

    Sad
  • 0

    Frustrated
  • 0

    Angry

Comments:

0 comments

Write the first review for this !