ಕಲ್ಲಡ್ಕ ಅನುಗ್ರಹ ಕಾಲೇಜಿಗೆ ಶೇ 100 ಫಲಿತಾಂಶ

ಮಂಗಳವಾರ, ಏಪ್ರಿಲ್ 23, 2019
25 °C

ಕಲ್ಲಡ್ಕ ಅನುಗ್ರಹ ಕಾಲೇಜಿಗೆ ಶೇ 100 ಫಲಿತಾಂಶ

Published:
Updated:
Prajavani

ವಿಟ್ಲ: 2018-19ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕಲ್ಲಡ್ಕ ಅನುಗ್ರಹ ಮಹಿಳಾ ಕಾಲೇಜು ಉತ್ತಮ ಸಾಧನೆ ಮಾಡಿದೆ.

ಕಲಾ ವಿಭಾಗದಲ್ಲಿ ಶೇ 100 ಫಲಿತಾಂಶ ದಾಖಲಾಗಿದ್ದು, ವಾಣಿಜ್ಯ ವಿಭಾಗದಲ್ಲಿ ಶೇ 95 ಫಲಿತಾಂಶ ದಾಖಲಾಗಿದೆ.

ವಾಣಿಜ್ಯ ವಿಭಾಗದಲ್ಲಿ 11 ಮಂದಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದರೆ, 43 ಮಂದಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಕಲಾವಿಭಾಗದಲ್ಲಿ ಇಬ್ಬರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದರೆ, 21 ಮಂದಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ವಿದ್ಯಾರ್ಥಿನಿಯರ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರು, ಪ್ರಾಂಶುಪಾಲರು ಮತ್ತು ಉಪನ್ಯಾಸಕಿ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಫಾಮೀಝ 561, ಕೌಶೀರಾ 555, ಹಾಸೀಬಾ ಭಾನು 538, ಸುಹಾೈರಾ ಭಾನು 538, ಆಯಿಷತುಲ್ ಕಸುಮುನಾ 511, ಕಲಾ ವಿಭಾಗದಲ್ಲಿ ಫಾತಿಮತ್ ಹಫೀಝ 519, ಆಯಿಷತುಲ್ ಆಸೀಫಾ 510 ಅಂಕಗಳನ್ನು ಪಡೆದುಕೊಂಡಿದ್ದಾರೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !