ಸುಳ್ಳು ಹೇಳಿ ಆಳಿದ ಮೋದಿ: ಅಶೋಕ್ ಆರೋಪ

ಬುಧವಾರ, ಏಪ್ರಿಲ್ 24, 2019
23 °C
ಮೈತ್ರಿ ಅಭ್ಯರ್ಥಿ, ಸಂಸದ ಎಂ.ವೀರಪ್ಪ ಮೊಯಿಲಿ ಅವರಿಗೆ ಕಿಸಾನ್ ಮಜ್ದೂರ್ ಕಾಂಗ್ರೆಸ್‌ ಬೆಂಬಲ

ಸುಳ್ಳು ಹೇಳಿ ಆಳಿದ ಮೋದಿ: ಅಶೋಕ್ ಆರೋಪ

Published:
Updated:

ಚಿಕ್ಕಬಳ್ಳಾಪುರ: ‘ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಕಳೆದ 5 ವರ್ಷಗಳಿಂದ ಬರೀ ಸುಳ್ಳು ಹೇಳಿಕೊಂಡು ಆಡಳಿತ ನಡೆಸುತ್ತಿದೆ. ರೈತರಿಗೆ, ಯುವಕರಿಗೆ, ಬಡವರಿಗೆ ಸುಳ್ಳು ಆಶ್ವಾಸನೆಗಳು ನೀಡಿ ಮೋಸ ಮಾಡಿದ್ದಾರೆ’ ಎಂದು ಕಿಸಾನ್ ಮಜ್ದೂರ್ ಕಾಂಗ್ರೆಸ್‌ನ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಅಶೋಕ್ ಆರೋಪಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನೋಟು ಅಮಾನ್ಯೀಕರಣ, ಸರಕು ಮತ್ತು ಸೇವಾ ತೆರಿಗೆಯಿಂದ (ಜಿಎಸ್‌ಟಿ) ಬಡವರು, ರೈತರು ಮಧ್ಯಮ ವರ್ಗದವರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಸುಳ್ಳು ಹೇಳುವ ಮೋದಿ ಅವರ ಸರ್ಕಾರವನ್ನು ಕಿತ್ತೊಗೆಯಬೇಕು. ಬಡವರ, ರೈತರ ಪರವಾಗಿರುವ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಬೇಕಾಗಿದೆ’ ಎಂದು ಹೇಳಿದರು.

‘ಮೊಯಿಲಿ ಅವರು ಮುಖ್ಯಮಂತ್ರಿಯಾಗಿದ್ದಾಗ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ವ್ಯವಸ್ಥೆ ತರುವ ಮೂಲಕ ಬಡ ವಿದ್ಯಾರ್ಥಿಗಳೂ ವೈದ್ಯಕೀಯ, ಎಂಜಿನಿಯರಿಂಗ್‌ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಸಾಧ್ಯವಾಗುವಂತೆ ಮಾಡಿದ್ದಾರೆ. ಆದ್ದರಿಂದ ಕಿಸಾನ್ ಮಜ್ದೂರ್ ಕಾಂಗ್ರೆಸ್‌ ಮೊಯಿಲಿ ಅವರನ್ನು ಬೆಂಬಲಿಸುತ್ತದೆ’ ಎಂದರು.

‘ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಬಡವರಿಗೆ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತರಲಾಯಿತು. ಬಡತನ ನಿರ್ಮೂಲನೆ ಮಾಡುವ ಉದ್ದೇಶದಿಂದ ಕಾಂಗ್ರೆಸ್‌ ದೇಶದ ಬಡವರಿಗೆ ಪ್ರತಿ ತಿಂಗಳಿಗೆ ₹6 ಸಾವಿರದಂತೆ ಕನಿಷ್ಠ ಆದಾಯ ಒದಗಿಸುವ ‘ನ್ಯಾಯ್’ ಯೋಜನೆ ಜಾರಿಗೆ ತರುವ ಭರವಸೆ ನೀಡಿದೆ. ಈ ಬಗ್ಗೆ ಮತದಾರರಿಗೆ ತಿಳುವಳಿಕೆ ಮೂಡಿಸಬೇಕು’ ಎಂದರು.

‘ಕಾಂಗ್ರೆಸ್ ಪಕ್ಷಕ್ಕೆ ಒಳ್ಳೆಯ ಹೆಸರು ಬರುತ್ತದೆ ಎಂಬ ಕಾರಣಕ್ಕೆ ಜಿಲ್ಲೆಯ ನೀರಾವರಿ ಯೋಜನೆಗಳಿಗೆ ಬಿಜೆಪಿಯವರು ಅಡ್ಡಗಾಲು ಹಾಕುತ್ತ, ಇಲ್ಲ ಸಲ್ಲದ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಇದು ಸರಿಯಲ್ಲ’ ಎಂದು ತಿಳಿಸಿದರು. ಕಿಸಾನ್ ಮಜ್ದೂರ್ ಕಾಂಗ್ರೆಸ್‌ನ ರಾಜ್ಯ ಘಟಕದ ಕಾರ್ಯದರ್ಶಿ ಆರ್‌.ಎಚ್.ನಾರಾಯಣಸ್ವಾಮಿ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಎನ್.ಚಂದ್ರಶೇಖರ್, ಸಂಘಟನಾ ಕಾರ್ಯದರ್ಶಿ ಬಿ.ವೆಂಕಟೇಶ್ ಉಪಸ್ಥಿತರಿದ್ದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !