ಕಾರ್ಕಳದಲ್ಲಿ ಬಿಜೆಪಿ ಬೃಹತ್ ಪಾದಯಾತ್ರೆ

ಬುಧವಾರ, ಏಪ್ರಿಲ್ 24, 2019
30 °C

ಕಾರ್ಕಳದಲ್ಲಿ ಬಿಜೆಪಿ ಬೃಹತ್ ಪಾದಯಾತ್ರೆ

Published:
Updated:
Prajavani

ಕಾರ್ಕಳ : ಉಡುಪಿ–ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಸೋಮವಾರ ಕಾರ್ಕಳ ಅನಂತಶಯನ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದರು.

ನಗರದ ಅನಂತಶಯನದಿಂದ ಕಾರ್ಕಳ ಶ್ರೀವೆಂಕಟರಮಣ ದೇವಸ್ಥಾನದ ವರೆಗೆ ಪಾದಯಾತ್ರೆಯಲ್ಲಿ ಚುನಾವಣಾ ಪ್ರಚಾರ ನಡೆಸಿ ಮತದಾರರಲ್ಲಿ ಮತ ಯಾಚಿಸಿದರು. ಶಾಸಕರಾದ ವಿ. ಸುನೀಲ್ ಕುಮಾರ್, ಕ್ಷೇತ್ರಾಧ್ಯಕ್ಷ ಮಣಿರಾಜ ಶೆಟ್ಟಿ, ಹಿರಿಯ ನಾಯಕರಾದ ಬೋಳ ಪ್ರಭಾಕರ ಕಾಮತ್, ಬೋಳ ಶ್ರೀನಿವಾಸ ಕಾಮತ್, ಪಕ್ಷದ ಪ್ರಧಾನ ಕಾರ್ಯದರ್ಶಿ ರವೀಂದ್ರ ಕುಮಾರ್, ಮಹಾವೀರ ಹೆಗ್ಡೆ, ನಗರ ಬಿಜೆಪಿ ಅಧ್ಯಕ್ಷ ಅನಂತಕೃಷ್ಣ ಶೆಣೈ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಉದಯ ಎಸ್. ಕೋಟ್ಯಾನ್, ರೇಶ್ಮಾಉದಯ ಶೆಟ್ಟಿ, ವಕ್ತಾರ ಕೆ.ಎಸ್ ಹರೀಶ್ ಶೆಣೈ, ಪುರಸಭಾ ಸದಸ್ಯರು, ಪಕ್ಷದ ವಿವಿಧ ಪದಾಧಿಕಾರಿಗಳು ಭಾಗವಹಿಸಿದ್ದರು.

 

 

 

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !