ಬಿಜೆಪಿ ಬೆಂಬಲಿಸಿದರೆ ಕುಮಾರಸ್ವಾಮಿ ಡಿಸಿಎಂ: ಕೇಂದ್ರ ಸಚಿವ ರಾಮದಾಸ್‌ ಅಠಾವಳೆ

ಬುಧವಾರ, ಏಪ್ರಿಲ್ 24, 2019
23 °C

ಬಿಜೆಪಿ ಬೆಂಬಲಿಸಿದರೆ ಕುಮಾರಸ್ವಾಮಿ ಡಿಸಿಎಂ: ಕೇಂದ್ರ ಸಚಿವ ರಾಮದಾಸ್‌ ಅಠಾವಳೆ

Published:
Updated:

ಕ್ಕಬಳ್ಳಾಪುರ: ‘ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಕರ್ನಾಟಕದಲ್ಲಿರುವ ಸಮ್ಮಿಶ್ರ ಸರ್ಕಾರ ಪತನವಾಗಲಿದೆ. ಆಗ ಕುಮಾರಸ್ವಾಮಿ ಅವರು ಬಿಜೆಪಿಯನ್ನು ಬೆಂಬಲಿಸಿ ಬಂದರೆ ಅವರನ್ನು ನಾವು ಉಪ ಮುಖ್ಯಮಂತ್ರಿಯನ್ನಾಗಿ ಮಾಡುತ್ತೇವೆ’ ಎಂದು ಭಾರತೀಯ ರಿಪಬ್ಲಿಕನ್ ಪಕ್ಷ (ಆರ್‌ಪಿಐ) ರಾಷ್ಟ್ರೀಯ ಅಧ್ಯಕ್ಷ, ಕೇಂದ್ರ ಸಚಿವ ರಾಮದಾಸ್‌ ಅಠಾವಳೆ ಹೇಳಿದರು.

ನಗರದಲ್ಲಿ ಸೋಮವಾರ ಬಿಜೆಪಿ ಅಭ್ಯರ್ಥಿ ಬಿ.ಎನ್.ಬಚ್ಚೇಗೌಡರ ಪರ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದ ಅವರು, ‘ಮುಂದಿನ ದಿನಗಳಲ್ಲಿ ಕೇಂದ್ರದಲ್ಲಿ ಪುನಃ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರಲಿದೆ. ನಂತರ ಕರ್ನಾಟಕದಲ್ಲಿರುವ ಸಮ್ಮಿಶ್ರ ಸರ್ಕಾರ ಉರುಳಿ, ಬಿ.ಎಸ್‌.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !