ಚಿಕ್ಕಬಳ್ಳಾಪುರ: ನಗರದಲ್ಲಿ ಮೇಣದ ಬತ್ತಿ ಜಾಥಾ

ಭಾನುವಾರ, ಏಪ್ರಿಲ್ 21, 2019
26 °C
ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನದ ಜಾಗೃತಿಗೆ ವಿವಿಧ ಚಟುವಟಿಕೆ

ಚಿಕ್ಕಬಳ್ಳಾಪುರ: ನಗರದಲ್ಲಿ ಮೇಣದ ಬತ್ತಿ ಜಾಥಾ

Published:
Updated:
Prajavani

ಚಿಕ್ಕಬಳ್ಳಾಪುರ: ನಗರದಾದ್ಯಂತ ಸೋಮವಾರ ರಾತ್ರಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನದ ಜಾಗೃತಿ ಅಂಗವಾಗಿ ಮೇಣದ ಬತ್ತಿ ನಡಿಗೆ ಜಾಥಾ ಆಯೋಜಿಸಲಾಗಿತ್ತು.

ನಗರದ ಅಂಬೇಡ್ಕರ್ ಭವನದ ಎದುರು ಜಾಥಾಗೆ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಗುರುದತ್ ಹೆಗಡೆ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ‘ಮತದಾರರು ಯಾವುದೇ ಆಸೆ ಆಮಿಷಗಳಿಗೆ ಬಲಿಯಾಗದೆ ಉತ್ತಮ ಆಡಳಿತಕ್ಕಾಗಿ ಚುನಾವಣೆಯಲ್ಲಿ ಪ್ರಾಮಾಣಿಕರನ್ನು ಆಯ್ಕೆ ಮಾಡಿ ಮತದಾನದ ಪಾವಿತ್ರ್ಯತೆ ಕಾಪಾಡಬೇಕು. ಮತದಾನ ಮಾಡುವುದು ಎಲ್ಲರ ಆದ್ಯ ಕರ್ತವ್ಯ. ಪ್ರತಿಯೊಬ್ಬರೂ ಮತದಾನ ಮಾಡುವ ಮೂಲಕ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಬೇಕು’ ಎಂದು ಹೇಳಿದರು.

‘ಉತ್ತಮ ಜನಪ್ರತಿನಿಧಿಯನ್ನು ಆಯ್ಕೆ ಮಾಡಿ ದೇಶದ ಅಭಿವೃದ್ಧಿಗೆ ಮುಂದಾಗಬೇಕು. ಚುನಾವಣೆ ಶಾಂತಿಯುತ ಹಾಗೂ ಸುಗಮವಾಗಿ ನಡೆಸಲು ಎಲ್ಲರೂ ಕೈಜೋಡಿಸಬೇಕು’ ಎಂದು ತಿಳಿಸಿದರು. ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿದ ಜಾಥಾ ಬಿ.ಬಿ.ರಸ್ತೆಯಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಕೊನೆಗೊಂಡಿತು.

ಜಾಥಾದಲ್ಲಿ ಭಾಗವಹಿಸಿದವರಿಗೆ ಮತದಾನದ ಬಗ್ಗೆ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸಂಜೀವಪ್ಪ, ಜಿಲ್ಲಾ ಸ್ವೀಪ್ ಸಮಿತಿ ಸದಸ್ಯರು, ವಿದ್ಯಾರ್ಥಿಗಳು, ಅಧಿಕಾರಿಗಳು ಜಾಥಾದಲ್ಲಿ ಭಾಗವಹಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !