ಮೋದಿ ಜನಪ್ರಿಯತೆ ಕುಗ್ಗಿದೆ

ಭಾನುವಾರ, ಏಪ್ರಿಲ್ 21, 2019
26 °C
ಕಾಂಗ್ರೆಸ್‌ ಮುಖಂಡ ವಿಜಯನಾಥ ವಿಠಲ ಶೆಟ್ಟಿ

ಮೋದಿ ಜನಪ್ರಿಯತೆ ಕುಗ್ಗಿದೆ

Published:
Updated:

ಮಂಗಳೂರು: ಕರಾವಳಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಕುಗ್ಗುತ್ತಿದೆ. ಕಳೆದ ಚುನಾವಣೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸದೇ ಇರುವುದೇ ಇದಕ್ಕೆ ಕಾರಣ ಎಂದು ಕಾಂಗ್ರೆಸ್ ಮುಖಂಡ ವಿಜಯನಾಥ ವಿಠಲ ಶೆಟ್ಟಿ ಹೇಳಿದರು.

ಮುಡಿಪುವಿನಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಭಾನುವಾರ ಪಕ್ಷಕ್ಕೆ ಸೇರ್ಪಡೆಯಾದ ಅವರು ಸೋಮವಾರ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,‘ಚಿತ್ರನಟರನ್ನು ನೋಡಲು ಬರುವಂತೆ ಮೋದಿ ಅವರನ್ನು ನೋಡಲು ಜನರು ಬಂದಿದ್ದರು. ಅವರು ಕರಾವಳಿಗೆ ಬಂದಿದ್ದರಿಂದ ಜನರಿಗೆ ಯಾವುದೇ ಉಪಯೋಗವಾಗಲಿಲ್ಲ. ಜನರಲ್ಲಿ ಆ ಭರವಸೆಯೂ ಉಳಿದಿಲ್ಲ’ ಎಂದರು.

2014ರ ಲೋಕಸಭಾ ಚುನಾವಣೆಯಲ್ಲಿ ಮೋದಿ ಬಂದಿದ್ದಾಗ ಬಜ್ಪೆ ವಿಮಾನ ನಿಲ್ದಾಣದಿಂದ ಮಂಗಳೂರಿನವರೆಗೆ ಜನರೇ ತುಂಬಿದ್ದರು. ಆದರೆ ಈ ಬಾರಿ ಅಂತಹ ವಾತಾವರಣ ಕಂಡುಬಂದಿಲ್ಲ. ಮೋದಿ ಜನಪ್ರಿಯತೆ ಕುಗ್ಗಿದೆ ಎಂಬುದಕ್ಕೆ ಇದೇ ಸಾಕ್ಷಿ ಎಂದು ಹೇಳಿದರು.

ಹಿಂದಿನ ಚುನಾವಣೆಯಲ್ಲಿ ಮಂಗಳೂರಿಗೆ ಬಂದಿದ್ದ ನರೇಂದ್ರ ಮೋದಿ ಹಲವು ಆಶ್ವಾಸನೆಗಳನ್ನು ನೀಡಿದ್ದರು. ಶನಿವಾರ ಬಂದಾಗ ಹಿಂದಿನ ಭರವಸೆಗಳು ಏನಾದವು ಎಂಬ ಬಗ್ಗೆ ಚಕಾರ ಎತ್ತಿಲ್ಲ. ಕರಾವಳಿ ಸಂಸದರಾದ ನಳಿನ್ ಕುಮಾರ್ ಕಟೀಲ್‌ ಮತ್ತು ಶೋಭಾ ಕರಂದ್ಲಾಜೆ ಏನು ಕೆಲಸ ಮಾಡಿದ್ದಾರೆ ಎಂಬುದನ್ನೂ ಹೇಳಲಿಲ್ಲ. ದಕ್ಷಿಣ ಕನ್ನಡ ಜಿಲ್ಲೆಗೆ ಬಿಜೆಪಿ ಸರ್ಕಾರ ಬಂದರೆ ಯಾವ ಯೋಜನೆಗಳನ್ನು ನೀಡಲಿದೆ ಎಂಬುದನ್ನೂ ಹೇಳಲಿಲ್ಲ ಎಂದರು.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರು ಈ ಜಿಲ್ಲೆಗಾಗಿ ಯಾವುದೇ ಕೆಲಸ ಮಾಡಿಲ್ಲ. ಈ ಜಿಲ್ಲೆಯ ಅಭಿವೃದ್ಧಿಗೆ ಅವರು ಯಾವುದೇ ಕೊಡುಗೆ ನೀಡಿಲ್ಲ. ಜನರು ಈ ಚುನಾವಣೆಯಲ್ಲಿ ಜಿಲ್ಲೆಯ ಅಭಿವೃದ್ಧಿಗಾಗಿ ಕೆಲಸ ಮಾಡುವ ಅಭ್ಯರ್ಥಿಗೆ ಮತ ಚಲಾಯಿಸಬೇಕು ಎಂದು ಮನವಿ ಮಾಡಿದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !