ಟಿಕೆಟ್‌ನಲ್ಲಿ ಪ್ರಧಾನಿ ಮೋದಿ ಚಿತ್ರ ಇಬ್ಬರು ರೈಲ್ವೆ ಸಿಬ್ಬಂದಿ ಅಮಾನತು

ಮಂಗಳವಾರ, ಏಪ್ರಿಲ್ 23, 2019
27 °C

ಟಿಕೆಟ್‌ನಲ್ಲಿ ಪ್ರಧಾನಿ ಮೋದಿ ಚಿತ್ರ ಇಬ್ಬರು ರೈಲ್ವೆ ಸಿಬ್ಬಂದಿ ಅಮಾನತು

Published:
Updated:

ಬಾರಾಬಂಕಿ (ಉತ್ತರ ಪ್ರದೇಶ): ಬಾರಾಬಂಕಿ ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಪ್ರಧಾನಿ ಮೋದಿ ಚಿತ್ರವಿರುವ ಟಿಕೆಟ್ ಕೊಟ್ಟ ಇಬ್ಬರು ರೈಲ್ವೆ ಉದ್ಯೋಗಿಗಳನ್ನು ಅಮಾನತುಗೊಳಿಸಲಾಗಿದೆ.

ಕೇಂದ್ರ ಸರಕಾರದ ಯೋಜನೆಗಳ ಮಾಹಿತಿಗಳ ಜೊತೆಗೆ ಪ್ರಧಾನಿ ಮೋದಿ ಅವರ ಭಾವಚಿತ್ರವು ರೈಲ್ವೆ ಟಿಕೇಟ್‌ನಲ್ಲಿತ್ತು ಎಂದು ‌ಮಾಧ್ಯಮಗಳಲ್ಲಿ ವರದಿಯಾಗಿತ್ತು. ಈ ಬಗ್ಗೆ ಚುನಾವಣಾ ಆಯೋಗವು ಜಿಲ್ಲಾಧಿಕಾರಿಯಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿರುವ ಬಗ್ಗೆ ವರದಿ ಕೇಳಿತ್ತು. 

ಎ.13ರಂದು ಕಣ್ತಪ್ಪಿನಿಂದ ಹಳೆಯ ರೋಲ್ ಬಳಸಲಾಗಿದೆ. ಈ ಪ್ರಕರಣದಲ್ಲಿ ಇಬ್ಬರು ರೈಲ್ವೆ ಅಧಿಕಾರಿಗಳನ್ನು ವಜಾಗೊಳಿಸಲಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಸಂದೀಪ್ ಕುಮಾರ್ ಗುಪ್ತ ಎಎನ್‌ಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಸಂತೋಷ ಕುಮಾರ್ ಮತ್ತು ಚಿತ್ರಾ ಕುಮಾರಿಯನ್ನು ಅಮಾನತುಗೊಳಿಸಲಾಗಿದೆ. ಉತ್ತರಪ್ರದೇಶದಲ್ಲಿ ಮಾರ್ಚ್ 10ರಂದು ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿತ್ತು.

ಬಾರಬಂಕಿಯಿಂದ ವಾರಣಾಸಿಗೆ ಟಿಕೆಟ್ ಖರೀದಿಸಿದಾಗ ಅದರಲ್ಲಿ ಮೋದಿ ಚಿತ್ರವಿತ್ತು. ಅಧಿಕಾರಿಗಳ ಗಮನಕ್ಕೆ ತಂದಾಗ ಅವರು ನಮ್ಮನ್ನೇ ಬೈಯ್ದರು ಎಂದು ಪ್ರಯಾಣಿಕ ಮೊಹಮ್ಮದ್ ಶಬ್ಬಾರ್ ರಜ್ವಿ ಎನ್‌ಡಿಟಿವಿಗೆ ಪ್ರತಿಕ್ರಿಯಿಸಿದ್ದಾರೆ. ನನ್ನ ಜೊತೆಗೆ ಟಿಕೆಟ್ ಖರೀದಿಸಿದ ಇತರ ಪ್ರಯಾಣಿಕರು ಮೋದಿ ಚಿತ್ರವಿರುವ ಟಿಕೆಟ್‌ ಕೊಟ್ಟಿದ್ದನ್ನು ಪ್ರಶ್ನಿಸಿದರು ಎಂದು ರಜ್ವಿ ಹೇಳಿದ್ದಾರೆ. 

‘ಇದು ಉದ್ದೇಶಪೂರ್ವಕವಾಗಿ ಆಗಿದ್ದಲ್ಲ. ಪ್ರಧಾನಿ ಮೋದಿಯವರ ಚಿತ್ರವಿರುವ ಕಾಗದವನ್ನು ಕಣ್ತಪ್ಪಿನಿಂದ ಬಳಸಲಾಗಿದೆ’ ಎಂದು ರೈಲ್ವೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ನೀತಿ ಸಂಹಿತೆಯನ್ನು ಬಿಜೆಪಿ ಉಲ್ಲಂಘಿಸಿದೆ ಎಂದು ಚುನಾವಣಾ ಆಯೋಗಕ್ಕೆ ತೃಣಮೂಲ ಕಾಂಗ್ರೆಸ್‌ ದೂರು ನೀಡಿತ್ತು. ಈ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಎಲ್ಲಾ ಟಿಕೆಟ್‌ಗಳನ್ನು ಹಿಂ‍ಪಡೆದಿತ್ತು. ಈ ಹಿಂದೆ ಶತಾಬ್ದಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಚಹ ನೀಡಲು ಮೈ ಭಿ ಚೌಕಿದಾರ್ ಮುದ್ರೆಯಿರುವ ಕಾಗದದ ಕಪ್‌ಗಳನ್ನು ಬಳಸಲಾಗಿತ್ತು. ಈ ಸುದ್ದಿಯು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಗುತ್ತಿಗೆದಾರನ ವಿರುದ್ಧ ₹1 ಲಕ್ಷ ದಂಡ ವಿಧಿಸಲಾಗಿತ್ತು.

ಬರಹ ಇಷ್ಟವಾಯಿತೆ?

 • 5

  Happy
 • 1

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !