ಕೊಟ್ಟ ಭರವಸೆ ಈಡೇರಿಸದ ಬಿಜೆಪಿ: ಸೈಯದ್‌ ಅಮಾನುಲ್ಲಾ

ಭಾನುವಾರ, ಏಪ್ರಿಲ್ 21, 2019
26 °C

ಕೊಟ್ಟ ಭರವಸೆ ಈಡೇರಿಸದ ಬಿಜೆಪಿ: ಸೈಯದ್‌ ಅಮಾನುಲ್ಲಾ

Published:
Updated:

ಚಿಕ್ಕಬಳ್ಳಾಪುರ: ‘ಸಂಸದ ಎಂ.ವೀರಪ್ಪ ಮೊಯಿಲಿ ಅವರು ಕಳೆದ 10 ವರ್ಷಗಳಿಂದ ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಸುಳ್ಳು ಹೇಳಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿಯವರು ಕೊಟ್ಟ ಯಾವೊಂದು ಭರವಸೆ ಈಡೇರಿಸಿಲ್ಲ’ ಎಂದು ಕಾಂಗ್ರೆಸ್‌ ಅಲ್ಪಸಂಖ್ಯಾತರ ಘಟಕದ ರಾಜ್ಯ ಘಟಕದ ಉಪಾಧ್ಯಕ್ಷ ಸೈಯದ್‌ ಅಮಾನುಲ್ಲಾ ತಿಳಿಸಿದರು.

ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮೊಯಿಲಿ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ವ್ಯವಸ್ಥೆ ಜಾರಿಗೆ ತರುವ ಮೂಲಕ ಕೆಳ ವರ್ಗದ ವಿದ್ಯಾರ್ಥಿಗಳಿಗೆ ಸಾಕಷ್ಟು ಅನುಕೂಲ ಕಲ್ಪಿಸಿದ್ದಾರೆ. ಅಲ್ಪಸಂಖ್ಯಾತರಿಗೆ ವಿದ್ಯಾಭ್ಯಾಸ ಮತ್ತು ಉದ್ಯೋಗದಲ್ಲಿ ಶೇ 4 ರಷ್ಟು ಮೀಸಲಾತಿ ನೀಡಿದ್ದರ ಫಲವಾಗಿ ನಮ್ಮ ಸಮುದಾಯದ ಮಕ್ಕಳು ವೈದ್ಯರು, ಎಂಜಿನಿಯರ್‌ಗಳು, ಐ.ಎ.ಎಸ್, ಐ.ಪಿ.ಎಸ್ ಹುದ್ದೆಗಳು ಪಡೆಯಲು ಸಾಧ್ಯವಾಯಿತು’ ಎಂದು ಹೇಳಿದರು.

‘ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಶಾದಿಭಾಗ್ಯ, ಅನ್ನಭಾಗ್ಯ, ವಿದ್ಯಾಸಿರಿ ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಬಡವರಿಗೆ ನೆರವಾಗುವ ಕೆಲಸ ಮಾಡಿದ್ದಾರೆ. ಎತ್ತಿನಹೊಳೆ ಯೋಜನೆಗೆ ಕಾಂಗ್ರೆಸ್‌ ಸರ್ಕಾರ ₹13 ಸಾವಿರ ಕೋಟಿ ಅನುದಾನ ನೀಡಿದೆ. ಆದ್ದರಿಂದ ನಾವು ಈ ಬಾರಿ ಮೊಯಿಲಿ ಅವರಿಗೆ ಮತ ನೀಡಬೇಕಾಗಿದೆ’ ಎಂದರು.

ಕಾಂಗ್ರೆಸ್‌ ಅಲ್ಪಸಂಖ್ಯಾತ ಘಟಕದ ರಾಜ್ಯ ಘಟಕದ ಉಪಾಧ್ಯಕ್ಷ ಸಿ.ಜೆ.ರಾಮಪ್ಪ, ಮುಖಂಡರಾದ ಆಲ್ಬರ್ಟ್, ನಾಜೀಯಾ ಬೇಗಂ, ಶಹೀನಾ, ಅಬ್ದುಲ್ ಬಷೀರ್, ಎಂ.ವೆಂಕಟಪ್ಪ ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !