ಮತದಾನ ಜಾಗೃತಿಗೆ ಗಾಳಿಪಟ ಉತ್ಸವ

ಭಾನುವಾರ, ಏಪ್ರಿಲ್ 21, 2019
26 °C

ಮತದಾನ ಜಾಗೃತಿಗೆ ಗಾಳಿಪಟ ಉತ್ಸವ

Published:
Updated:
Prajavani

ಚಿಕ್ಕಬಳ್ಳಾಪುರ: ನಗರದಲ್ಲಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮಂಗಳವಾರ ಮತದಾನದ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಗಾಳಿಪಟ ಉತ್ಸವ ಮತ್ತು ಸಂಗೀತ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ನಗರದ ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಗುರುದತ್ ಹೆಗಡೆ ಅವರು ಗಾಳಿಪಟ ಹಾರಿಸುವ ಮೂಲಕ ಚಾಲನೆ ನೀಡಿದರು. ವಿಧ ವಿಧವಾದ, ಬಣ್ಣ ಬಣ್ಣಗಳಿಂದ ಕೂಡಿದ ಗಾಳಿಪಟಗಳನ್ನು ಆಗಸದಲ್ಲಿ ಹಾರಿಬಿಡಲಾಯಿತು. ಜಿಲ್ಲೆಯ ಹಿರಿಯ ಕಲಾವಿದ ಮುಖವೀಣೆ ಆಂಜಿನಪ್ಪ ಅವರು ಸಂಗೀತ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಸಂಜೀವಪ್ಪ, ಜಿಲ್ಲಾ ಸ್ವೀಪ್ ಸಮಿತಿ ಸದಸ್ಯರು ಹಾಜರಿದ್ದರು.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !