ಸಮ ಸಮಾಜಕ್ಕೆ ಶ್ರಮಿಸಿದ ಅಂಬೇಡ್ಕರ್

ಬುಧವಾರ, ಏಪ್ರಿಲ್ 24, 2019
23 °C
ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಅಂಬೇಡ್ಕರ್ ಕುರಿತು ಉಪನ್ಯಾಸ ಕಾರ್ಯಕ್ರಮ

ಸಮ ಸಮಾಜಕ್ಕೆ ಶ್ರಮಿಸಿದ ಅಂಬೇಡ್ಕರ್

Published:
Updated:
Prajavani

ಚಿಕ್ಕಬಳ್ಳಾಪುರ: ‘ಸಾಮಾಜಿಕ, ಆರ್ಥಿಕ, ರಾಜಕೀಯ ಹಾಗೂ ತಾತ್ವಿಕ ವಿಚಾರಗಳಲ್ಲಿ ಅಪಾರ ಪಾಂಡಿತ್ಯ ಹೊಂದಿದ್ದ ಅಂಬೇಡ್ಕರ್ ಅವರು ಭಾರತೀಯ ಸಮಾಜವನ್ನು ಸಮಾನತೆಯ ತತ್ವದಲ್ಲಿ ಕಟ್ಟಲು ಪಣ ತೊಟ್ಟಿದ್ದರು’ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಸಿ.ರಂಗಸ್ವಾಮಿ ಹೇಳಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಅಂಬೇಡ್ಕರ್ ಕುರಿತು ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಮಹಿಳೆಯರು, ಅಲ್ಪಸಂಖ್ಯಾತರು, ದಲಿತರು ಸೇರಿದಂತೆ ಎಲ್ಲರಿಗೂ ಸಮಾನತೆಯನ್ನು ನೀಡಲು ಪಣತೊಟ್ಟ ಅಂಬೇಡ್ಕರ್ ಪ್ರತಿಯೊಬ್ಬರಿಗೂ ಹಕ್ಕುಗಳನ್ನು ನೀಡಿ ಉತ್ತಮ ರಾಷ್ಟ್ರ ನಿರ್ಮಾಣಕ್ಕೆ ಮುಂದಾದರು. ಅಂತಹ ಮಹಾನ್ ಚೇತನವನ್ನು ಎಂದಿಗೂ ಮರೆಯದೆ, ಅವರ ಮಾರ್ಗದರ್ಶನದಲ್ಲಿ ನಾವೆಲ್ಲರೂ ಸಾಗಬೇಕು’ ಎಂದು ತಿಳಿಸಿದರು.

‘ಅಂಬೇಡ್ಕರ್ ಅವರು ತಮ್ಮ ಜೀವನದಲ್ಲಿ ನೊಂದ ಮಹಿಳೆಯರು, ಶೋಷಿತರು, ಬಡವರ ಪರವಾಗಿ ಧ್ವನಿ ಎತ್ತಿದ್ದರು. ವಿಶ್ವಕ್ಕೆ ಮಾದರಿ ಸಂವಿಧಾನವನ್ನು ನೀಡಿದ ಅವರನ್ನು ಕೇವಲ ಭಾಷಣಕ್ಕೆ ಸೀಮಿತಗೊಳಿಸಿ ಮರೆಯಬಾರದು. ಅವರ ತತ್ವ ಸಿದ್ದಾಂಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದರು.

‘ಶೋಷಿತರ ಏಳಿಗೆಯನ್ನೇ ಜೀವನದ ಗುರಿಯಾಗಿಸಿಕೊಂಡಿದ್ದ ಅಂಬೇಡ್ಕರ್ ಅವರ ಹೋರಾಟದ ಬದುಕು, ನಡೆದು ಬಂದ ದಾರಿ ಪ್ರತಿಯೊಬ್ಬರಿಗೆ ಮಾದರಿಯಾಗಬೇಕು. ಕಾಲೇಜಿನ ವಿದ್ಯಾರ್ಥಿನಿಯರು ಸಾಮಾಜಿಕ ನ್ಯಾಯಕ್ಕಾಗಿ ಶಿಕ್ಷಣವಂತರಾಗಬೇಕು. ಸಮಾಜದಲ್ಲಿ ಎದುರಾಗುವ ಅನ್ಯಾಯದ ವಿರುದ್ಧ ಸಂಘಟಿತರಾಗಿ ಹೋರಾಟ ನಡೆಸಬೇಕು. ಆಗ ಮಾತ್ರ ಆರೋಗ್ಯಕರ ಸಮಾಜ ನಿರ್ಮಾಣ ಮಾಡಲು ಸಾಧ್ಯ’ ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲ ಟಿ.ನಾಗರಾಜಯ್ಯ ಮಾತನಾಡಿ, ‘ಹಲವು ಜಾತಿ, ಧರ್ಮ, ಮತಗಳು ಇದ್ದರೂ ದೇಶ ವಿವಿಧತೆಯಲ್ಲಿ ಏಕತೆಯನ್ನು ಒಳಗೊಂಡಿದೆ. ಭಾರತ ವಿಶ್ವದಲ್ಲೇ ದೊಡ್ಡ ಪ್ರಜಾಪ್ರಭುತ್ವವನ್ನು ಒಳಗೊಂಡಿದೆ ಎಂದರೆ ಅದಕ್ಕೆ ಕಾರಣ ಅಂಬೇಡ್ಕರ್’ ಎಂದು ತಿಳಿಸಿದರು.

‘ಅಂಬೇಡ್ಕರ್ ಅವರು ಹೇಳಿರುವಂತೆ ಜಾತಿ, ಧರ್ಮ, ಲಿಂಗ ಬೇಧಗಳನ್ನು ಕೊನೆಗಾಣಿಸಲು ನಮ್ಮೆಲ್ಲರ ಕರ್ತವ್ಯವೂ ಅತಿಮುಖ್ಯವಾಗಿದ್ದು, ಅವರ ಸಿದ್ಧಾಂತಗಳನ್ನು ಅನುಸರಿಸಬೇಕು. ಅಂಬೇಡ್ಕರ್ ಅವರ ಸಂವಿಧಾನ ರಚನೆಯಿಂದ ಸಮಾನತೆ, ಸ್ವಾತಂತ್ರ್ಯ, ಮೂಲಭೂತ ಹಕ್ಕು ಪಡೆಯುವ ಹಾಗೂ ಚುನಾವಣೆ ಪ್ರಕ್ರಿಯೆಗಳಲ್ಲಿ ಭಾಗವಹಿಸುವ ಅವಕಾಶ ಎಲ್ಲರಿಗೂ ದೊರೆತಿದೆ. ಹೀಗಾಗಿ ಮತದಾರರು ಲೋಕಸಭಾ ಚುನಾವಣೆಯಲ್ಲಿ ನೈತಿಕವಾಗಿ ಕಡ್ಡಾಯ ಮತ ಚಲಾಯಿಸುವ ಮೂಲಕ ಅಂಬೇಡ್ಕರ್ ಅವರ ಆಶಯ ಈಡೇರಿಸಬೇಕು’ ಎಂದರು. ಕಾಲೇಜಿನ ಉಪನ್ಯಾಸಕರಾದ ಬಿ.ಆರ್. ನರಸಿಂಹಮೂರ್ತಿ, ಅಮೋಘ ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !