ದೇಶದ ನ್ಯಾಯಾಂಗ ವ್ಯವಸ್ಥೆ ಅಪಾಯದಲ್ಲಿ: ಟಿ.ಬಿ. ಜಯಚಂದ್ರ

ಬುಧವಾರ, ಮೇ 22, 2019
23 °C

ದೇಶದ ನ್ಯಾಯಾಂಗ ವ್ಯವಸ್ಥೆ ಅಪಾಯದಲ್ಲಿ: ಟಿ.ಬಿ. ಜಯಚಂದ್ರ

Published:
Updated:

ಹೊನ್ನಾಳಿ: ದೇಶದ ಅತ್ಯುನ್ನತ ನ್ಯಾಯಾಂಗ ವ್ಯವಸ್ಥೆ ಅಪಾಯದಲ್ಲಿದೆ ಎಂದು ಮಾಜಿ ಸಚಿವ ಟಿ.ಬಿ. ಜಯಚಂದ್ರ ಆತಂಕ ವ್ಯಕ್ತಪಡಿಸಿದರು.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಫೇಲ್ ಹಗರಣದ ವಿಚಾರವನ್ನು ಸುಪ್ರೀಂ ಕೋರ್ಟ್ ಪುನರ್ ವಿಮರ್ಶೆಗೆ ಅರ್ಹವಾಗಿದೆ ಎಂದಿದೆ. ಪ್ರಧಾನಿಯವರ ಜೀವನಕಥೆಯನ್ನು ಆಧರಿಸಿದ ‘ಪಿ.ಎಂ.ನರೇಂದ್ರ ಮೋದಿ’ ಚಲನಚಿತ್ರದ ಪ್ರದರ್ಶನ ತಡೆಗೆ ಸಂಬಂಧಿಸಿದ ವಿಚಾರಣೆ ಕೈಗೆತ್ತಿಕೊಂಡಿದೆ. ರಫೇಲ್ ಪ್ರಕರಣದಲ್ಲಿ ಮೋದಿ ಅವರನ್ನು ‘ಚೌಕೀದಾರ್ ಚೋರ್ ಹೈ’ ಎಂದಿದ್ದ ರಾಹುಲ್ ಗಾಂಧಿ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿಕೊಂಡ ವಿಷಯಗಳಿಗೆ ಸಂಬಂಧಿಸಿದಂತೆ ಸಿಜೆಐ ರಂಜನ್ ಗೊಗೊಯಿ ಅವರು ವಿಚಾರಣೆ ಕೈಗೆತ್ತಿಕೊಂಡ ಕೆಲವೇ ದಿನಗಳಲ್ಲಿ ಅವರ ಮೇಲೆ ಲೈಂಗಿಕ ಕಿರುಕುಳದ ಆರೋಪ ಹೊರಿಸಿ ಇಕ್ಕಟ್ಟಿಗೆ ಸಿಲುಕಿಸುವ ಪ್ರಯತ್ನಗಳು ಕಾಣದ ಕೈಗಳಿಂದ ನಡೆಯುತ್ತಿವೆ’ ಎಂದು ಆರೋಪಿಸಿದರು.

‘ಯುದ್ಧ ವಿಮಾನ ತಯಾರಿಕೆ ಬಗ್ಗೆ ಏನೂ ಗೊತ್ತಿರದ ಅನಿಲ್ ಅಂಬಾನಿ ಒಬ್ಬ ಡಿಫಾಲ್ಟರ್. ಆತನಿಗೆ ₹ 59 ಸಾವಿರ ಕೋಟಿಯ ರಫೇಲ್ ವ್ಯವಹಾರ ಒಪ್ಪಿಸುತ್ತಾರೆ ಎಂದರೆ ಏನರ್ಥ’ ಎಂದು ಪ್ರಶ್ನಿಸಿದ ಅವರು, ‘ದ್ವಿತೀಯ ದರ್ಜೆ ಗುಮಾಸ್ತೆಯೊಬ್ಬಳು ಮುಖ್ಯ ನ್ಯಾಯಮೂರ್ತಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಮಾಡಿರುವುದು ನಂಬಲು ಸಾಧ್ಯವೇ? ಇದರ ಹಿಂದೆ ಯಾರಾದರೂ ಇರಬಹುದು ಎನ್ನಿಸುವುದಿಲ್ಲವೇ? ಕಾನೂನು ಮಂತ್ರಿಯಾಗಿದ್ದಾಗ ಕಾವೇರಿ ವಿಚಾರದಲ್ಲಿ ನಾನು ಅವರನ್ನು ಹತ್ತಿರದಿಂದ ನೋಡಿದ್ದೇನೆ’ ಎಂದು ಹೇಳಿದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !