ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹ, ಹತ್ಯೆ ಖಂಡಿಸಿ ಆರ್‌ಪಿಐ ಪ್ರತಿಭಟನೆ

ಭಾನುವಾರ, ಮೇ 19, 2019
34 °C

ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹ, ಹತ್ಯೆ ಖಂಡಿಸಿ ಆರ್‌ಪಿಐ ಪ್ರತಿಭಟನೆ

Published:
Updated:
Prajavani

ಚಿಕ್ಕಬಳ್ಳಾಪುರ: ‘ರಾಯಚೂರಿನ ನವೋದಯ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯನ್ನು ಅತ್ಯಾಚಾರ ಮಾಡಿ, ಕೊಲೆ ಮಾಡಿರುವ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು’ ಎಂದು ಆಗ್ರಹಿಸಿ ಭಾರತೀಯ ರಿಪಬ್ಲಿಕನ್‌ ಪಕ್ಷದ (ಆರ್‌ಪಿಐ) ಕಾರ್ಯಕರ್ತರು ಸೋಮವಾರ ನಗರದ ಅಂಬೇಡ್ಕರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಆರ್‌ಪಿಐ ಜಿಲ್ಲಾ ಘಟಕದ ಅಧ್ಯಕ್ಷ ವೆಂಕಟರವಣಪ್ಪ ಮಾತನಾಡಿ, ‘ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿದ ಈ ಕೃತ್ಯದಿಂದ ಜನಸಾಮಾನ್ಯರು ಬೆಚ್ಚಿಬೀಳುವಂತಾಗಿದೆ. ಈ ಹೀನ ಕೃತ್ಯದಲ್ಲಿ ಭಾಗಿಯಾಗಿರುವ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಿದಾಗ ಮಾತ್ರ ಇಂತಹ ಪ್ರಕರಣಗಳು ಮರುಕಳುಹಿಸುವುದಿಲ್ಲ’ ಎಂದು ಹೇಳಿದರು.

‘ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ರಾಜ್ಯದಲ್ಲಿ ಇಂತಹ ಈ ಪ್ರಕರಣಗಳು ಪದೇ ಪದೇ ನಡೆಯುತ್ತಿರುವುದಕ್ಕೆ ಸರ್ಕಾರದ ವೈಫಲ್ಯವೇ ಕಾರಣ. ಹೆಣ್ಣು ಮಕ್ಕಳಿಗೆ ರಕ್ಷಣೆ ಕೊಡಬೇಕಾದ ಸರ್ಕಾರಗಳು ಇಂತಹ ಪ್ರರಣಗಳನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯಗಳು, ಅತ್ಯಾಚಾರಗಳು, ಕೋಮುಗಲಭೆಗಳು ಹೆಚ್ಚಿ ಜನಸಾಮಾನ್ಯರಲ್ಲಿ ಭಯದ ವಾತಾವರಣ ಸೃಷ್ಟಿ ಆಗಿದೆ. ಸರ್ಕಾರ ಕಠಿಣ ಕ್ರಮ ಕೈಗೊಂಡು ಇವುಗಳನ್ನು ತಡೆಯಬೇಕು’ ಎಂದು ಆಗ್ರಹಿಸಿದರು.

‘ವಿದ್ಯಾರ್ಥಿನಿಯರ ಮೇಲೆ ನಡೆಯುತ್ತಿರುವ ಹೇಯ ಕೃತ್ಯಗಳನ್ನು ತಡೆಯಲು ಪುಂಡಾಟಿಕೆ ಪ್ರದರ್ಶಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವ ಮೂಲಕ ವಿದ್ಯಾರ್ಥಿನಿಯರಲ್ಲಿ ನೆಲೆಯೂರಿರುವ ಭಯದ ಕಾರ್ಮೋಡವನ್ನು ತೊಡೆದು ಹಾಕಬೇಕು. ರಾಜ್ಯ ಸರ್ಕಾರ ಕೂಡಲೇ ಮಹಿಳೆಯರ ರಕ್ಷಣೆಗೆ ಮುಂದಾಗಬೇಕು’ ಎಂದು ಒತ್ತಾಯಿಸಿದರು.

ಪ್ರತಿಭಟನಾಕಾರರು ಅಂಬೇಡ್ಕರ್ ವೃತ್ತದಿಂದ ತಾಲ್ಲೂಕು ಕಚೇರಿ ವರೆಗೆ ಮೆರವಣಿಗೆ ನಡೆಸಿ, ಉಪವಿಭಾಗಾಧಿಕಾರಿ ಅವರಿಗೆ ಮನವಿ ಸಲ್ಲಿಸಿದರು. ಸಂಘದ ಜಿಲ್ಲಾ ಘಟಕದ ಗೌರವಾಧ್ಯಕ್ಷ ಬಿ.ಎಚ್.ನರಸಿಂಹಪ್ಪ, ಜಿಲ್ಲಾ ಘಟಕ ಕಾರ್ಯದರ್ಶಿ ಪಿಳ್ಳಆಂಜನಪ್ಪ,ಜಿಲ್ಲಾ ಮಹಿಳಾ ಘಟಕ ಅಧ್ಯಕ್ಷ ಪದ್ಮಮ್ಮ, ಪದಾಧಿಕಾರಿಗಳಾದ ಎಂ.ರಾಮಪ್ಪ, ಮುನಿರಾಜು, ಮಂಡಿಕಲ್ ಮುರಳಿ, ರಮೇಶ್, ಬಾಲಪ್ಪ, ರಾಮು ಹಾಜರಿದ್ದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !