ಮಂಗಳೂರಿನಲ್ಲಿ ವಾರವೊಂದರಲ್ಲೇ 719 ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ದಾಖಲು!

ಸೋಮವಾರ, ಮೇ 20, 2019
32 °C
ನಗರದ ವಿವಿಧೆಡೆ ಸಂಚಾರ ಪೊಲೀಸರ ಕಾರ್ಯಾಚರಣೆ

ಮಂಗಳೂರಿನಲ್ಲಿ ವಾರವೊಂದರಲ್ಲೇ 719 ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ದಾಖಲು!

Published:
Updated:

ಮಂಗಳೂರು: ಸಂಚಾರ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಬಿಗಿ ಕ್ರಮ ಕೈಗೊಳ್ಳುತ್ತಿರುವ ನಗರದ ಪೊಲೀಸರು, ಒಂದು ವಾರದ ಅವಧಿಯಲ್ಲಿ 719 ಪ್ರಕರಣಗಳನ್ನು ದಾಖಲು ಮಾಡಿದ್ದಾರೆ.

ಏಪ್ರಿಲ್‌ 15ರಿಂದ ಏ.21ರವರೆಗೆ ನಗರದ ನಾಲ್ಕು ಸಂಚಾರ ಪೊಲೀಸ್‌ ಠಾಣೆಯ ಸಿಬ್ಬಂದಿ ವಿವಿಧೆಡೆ ಕಾರ್ಯಾಚರಣೆ ನಡೆಸಿದ್ದಾರೆ. ಪಾದಚಾರಿಗಳು ರಸ್ತೆ ದಾಟಲು ಇರುವ ಝೀಬ್ರಾ ಕ್ರಾಸಿಂಗ್‌ ಮೇಲೆ ವಾಹನ ನಿಲುಗಡೆ, ಕರ್ಕಶ ಹಾರ್ನ್‌ ಬಳಕೆ, ಟಿಂಟ್‌ ಗಾಜು, ಮದ್ಯ ಸೇವಿಸಿ ವಾಹನ ಚಾಲನೆ, ಅತಿವೇಗದ ಚಾಲನೆ ಸೇರಿದಂತೆ ಸಂಚಾರ ನಿಯಮ ಉಲ್ಲಂಘಿಸುವವರನ್ನು ಪತ್ತೆಹಚ್ಚಿ ಪ್ರಕರಣ ದಾಖಲು ಮಾಡಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್‌ ಸಂದೀಪ್‌ ಪಾಟೀಲ್‌ ತಿಳಿಸಿದ್ದಾರೆ.

ಝೀಬ್ರಾ ಕ್ರಾಸಿಂಗ್‌ ಮೇಲೆ ವಾಹನ ನಿಲುಗಡೆ ಮಾಡಿರುವುದಕ್ಕೆ 65, ಕರ್ಕಶ ಹಾರನ್‌ ಬಳಕೆಗೆ 61, ಮರಳು, ಜೆಲ್ಲಿ ಮತ್ತಿತರ ವಸ್ತುಗಳನ್ನು ಸಾಗಿಸುವ ವಾಹನಗಳಲ್ಲಿ ಟಾರ್ಪಾಲು ಹೊದಿಸದೇ ಇರುವುದಕ್ಕೆ 87, ಟಿಂಟ್‌ ಗಾಜು ಹಾಕಿಕೊಂಡಿರುವುದಕ್ಕೆ 87, ಅತಿವೇಗದ ಚಾಲನೆಗೆ 91 ಪ್ರಕರಣಗಳನ್ನು ದಾಖಲು ಮಾಡಲಾಗಿದೆ.

ಮದ್ಯ ಸೇವಿಸಿ ವಾಹನ ಚಾಲನೆ ಮಾಡುತ್ತಿದ್ದ 200 ಮಂದಿಯನ್ನು ಪತ್ತೆ ಮಾಡಿದ್ದು, ಈ ಎಲ್ಲರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅಡ್ಡಾದಿಡ್ಡಿಯಾಗಿ, ರಸ್ತೆ ಮತ್ತು ಪಾದಚಾರಿ ಮಾರ್ಗಗಳ ಮೇಲೆ ನಿಲುಗಡೆ ಮಾಡಿದ್ದ 128 ವಾಹನಗಳನ್ನು ಟೋಯಿಂಗ್‌ ವಾಹನ ಬಳಸಿ ಎಳೆದೊಯ್ಯಲಾಗಿದೆ. ಈ ವಾಹನ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿ, ದಂಡ ವಸೂಲಿ ಮಾಡಲಾಗಿದೆ ಎಂದು ಕಮಿಷನರ್‌ ಮಾಹಿತಿ ನೀಡಿದ್ದಾರೆ.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !