ಏ.29 ರಿಂದ ಮಕ್ಕಳ ಬೇಸಿಗೆ ಶಿಬಿರ

ಶನಿವಾರ, ಮೇ 25, 2019
27 °C

ಏ.29 ರಿಂದ ಮಕ್ಕಳ ಬೇಸಿಗೆ ಶಿಬಿರ

Published:
Updated:

ಚಿಕ್ಕಬಳ್ಳಾಪುರ: ಜಿಲ್ಲಾ ಬಾಲಭವನ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ 5 ರಿಂದ 16 ವರ್ಷದೊಳಗಿನ ಮಕ್ಕಳಿಗೆ ಉಚಿತವಾಗಿ ಬೇಸಿಗೆ ಶಿಬಿರ ಹಾಗೂ ಒಂದು ದಿನದ ಹೊರಸಂಚಾರವನ್ನು ಹಮ್ಮಿಕೊಳ್ಳಲಾಗಿದೆ.

ಜಿಲ್ಲಾ ಮಟ್ಟದಲ್ಲಿ ಏಪ್ರಿಲ್ 29 ರಿಂದ ಮೇ 13ರ ವರೆಗೆ ಚಿಕ್ಕಬಳ್ಳಾಪುರದ ಪಂಚಗಿರಿ ಬೋಧನ ಪ್ರೌಢಶಾಲೆಯಲ್ಲಿ ಪ್ರತಿ ದಿನ ಬೆಳಿಗ್ಗೆ 10ರಿಂದ ಸಂಜೆ 4ರ ವರೆಗೆ ಬೇಸಿಗೆ ಶಿಬಿರ ನಡೆಯಲಿದೆ. ಶಿಬಿರದಲ್ಲಿ ಚಿತ್ರಕಲೆ, ಕರಕುಶಲ ವಸ್ತುಗಳ ತಯಾರಿಕೆ, ಜೇಡಿಮಣ್ಣಿನ ಕಲೆ, ಸಮೂಹ ನೃತ್ಯ,ಗೀತೆ, ಯೋಗ, ಕರಾಟೆ ಹಾಗೂ ಕ್ರೀಡೆಗಳಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಮಕ್ಕಳಿಗೆ ತರಬೇತಿಯನ್ನು ನೀಡಲಾಗುವುದು.

ಆಸಕ್ತರು ಏಪ್ರಿಲ್ 27ರ ಒಳಗಾಗಿ ಜಿಲ್ಲಾಡಳಿತ ಭವನದಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಅರ್ಜಿಗಳನ್ನು ಪಡೆದು ಭರ್ತಿ ಮಾಡಿ ಆಯಾ ತಾಲ್ಲೂಕುಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿ: 9964868674.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !